IPL 2024: ಐಪಿಎಲ್ ಹರಾಜಿಗೂ ಮುನ್ನವೇ ಹೊರಬಿದ್ದ ಕೇದಾರ್ ಜಾಧವ್

IPL 2024 Auction: ಈ ಬಾರಿಯ ಐಪಿಎಲ್ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ನಡೆಯಲಿದೆ. ದುಬೈನ ಕೋಕಾಕೋಲ ಅರೇನಾದಲ್ಲಿ ನಡೆಯಲಿರುವ ಈ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಒಟ್ಟು 333 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಈ ಮೂಲಕ 77 ಸ್ಲಾಟ್​ಗಳಿಗಾಗಿ ಹರಾಜು ನಡೆಯಲಿದೆ.

IPL 2024: ಐಪಿಎಲ್ ಹರಾಜಿಗೂ ಮುನ್ನವೇ ಹೊರಬಿದ್ದ ಕೇದಾರ್ ಜಾಧವ್
Kedar Jadhav
Follow us
| Updated By: ಝಾಹಿರ್ ಯೂಸುಫ್

Updated on: Dec 12, 2023 | 2:43 PM

IPL 2024: ಐಪಿಎಲ್ ಸೀಸನ್ 17 ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆ ಎಂಬಂತೆ ಇದೀಗ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಆಟಗಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ವಿಶೇಷ ಎಂದರೆ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಟಗಾರ ಕೇದಾರ್ ಜಾಧವ್ ಸ್ಥಾನ ಪಡೆದಿಲ್ಲ. ಅಂದರೆ ಈ ಬಾರಿಯ ಐಪಿಎಲ್ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದರು. ಈ ಪಟ್ಟಿಯಲ್ಲಿ ಕೇದರ್ ಜಾಧವ್ ಕೂಡ ಇದ್ದರು. ಆದರೀಗ ಹರಾಜಿಗಾಗಿ ಆಟಗಾರರನ್ನು ಶಾರ್ಟ್ ಲೀಸ್ಟ್​ ಮಾಡಲಾಗಿದ್ದು, ಈ ಮೂಲಕ 333 ಆಟಗಾರರಿಗೆ ಮಾತ್ರ ಹರಾಜಿನಲ್ಲಿ ಅವಕಾಶ ನೀಡಲಾಗುತ್ತಿದೆ.

ಇತ್ತ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಹರಾಜಿಗಾಗಿ ಹೆಸರು ನೀಡಿದ್ದ ಕೇದಾರ್ ಜಾಧವ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಆಸಕ್ತಿ ಹೊಂದಿಲ್ಲ. ಇದೇ ಕಾರಣದಿಂದಾಗಿ ಅವರ ಹೆಸರನ್ನು ಫೈನಲ್ ಲೀಸ್ಟ್​ನಿಂದ ಹೊರಗಿಡಲಾಗಿದೆ.

ಕೇದಾರ್ ಜಾಧವ್ 2009 ರಿಂದ ಐಪಿಎಲ್ ಟೂರ್ನಿ ಆಡುತ್ತಿದ್ದಾರೆ. ಆರ್​ಸಿಬಿ ಪರ ಚೊಚ್ಚಲ ಬಾರಿ ಆಡಿದ್ದ ಜಾಧವ್ ಆ ಬಳಿಕ ಡೆಲ್ಲಿ ಡೇರ್​ ಡೆವಿಲ್ಸ್​ ತಂಡದ ಭಾಗವಾಗಿದ್ದರು. ಇನ್ನು 2011 ರಲ್ಲಿ ಕೊಚ್ಚಿ ಟಸ್ಕರ್ಸ್​ ತಂಡದ ಕಣಕ್ಕಿಳಿದಿದ್ದರು. ಇದಾದ ಬಳಿಕ ಮತ್ತೆ ಡೆಲ್ಲಿ ಡೇರ್ ಡೆವಿಲ್ಸ್ ತಂಡದಲ್ಲಿ ಮೂರು ಸೀಸನ್ ಆಡಿದ್ದರು.

2016 ಮತ್ತು 2017 ರಲ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದ ಜಾಧವ್, 2018 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪಾಲಾಗಿದ್ದರು. ಮೂರು ವರ್ಷಗಳ ಕಾಲ ಸಿಎಸ್​ಕೆ ತಂಡದಲ್ಲಿದ್ದ ಕೇದರ್ 2021 ರಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದಲ್ಲಿ ಸ್ಥಾನ ಪಡೆದಿದ್ದರು.

ಇಲ್ಲಿ ಗಮನಿಸಬೇಕಾದ ಪ್ರಮುಖ ಅಂಶವೆಂದರೆ ಐಪಿಎಲ್​ನಲ್ಲಿ ಐದು ಫ್ರಾಂಚೈಸಿಗಳ ಪರ ಆಡಿರುವ ಕೇದರ್ ಜಾಧವ್ ಅವರ ಪ್ರದರ್ಶನ. ಐದು ತಂಡಗಳ ಪರ ಒಟ್ಟು 92 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಜಾಧವ್ ಕಲೆಹಾಕಿರುವುದು 1184 ರನ್ ಮಾತ್ರ. ಹಾಗೆಯೇ ಕಳೆದ ನಾಲ್ಕು ಸೀಸನ್​ಗಳಲ್ಲಿ ಜಾಧವ್ ಒಟ್ಟು 28 ಪಂದ್ಯಗಳನ್ನಾಡಿದ್ದರು. ಇದರಲ್ಲಿ ಮೂಡಿ ಬಂದಿರುವುದು ಕೇವಲ 291 ರನ್ ಮಾತ್ರ. ಅಂದರೆ 297 ಎಸೆತಗಳನ್ನು ಎದುರಿಸಿ ಜಾಧವ್ ಕಲೆಹಾಕಿರುವುದು ಕೇವಲ 291 ರನ್​ ಮಾತ್ರ.

ಇಂತಹ ಕಳಪೆ ಪ್ರದರ್ಶನದ ಹೊರತಾಗಿಯೂ 2021 ರ ಹರಾಜಿನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಜಾಧವ್ ಅವರನ್ನು 2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಎಸ್​ಆರ್​ಹೆಚ್​ ಪರ ಐದು ಇನಿಂಗ್ಸ್​ಗಳಿಂದ ಕಲೆಹಾಕಿದ್ದು 43 ರನ್​ ಮಾತ್ರ.

ಇದನ್ನೂ ಓದಿ: WPL 2024: RCB ಹೊಸ ತಂಡ ಹೀಗಿದೆ

ಇನ್ನು 2023 ರ ಐಪಿಎಲ್ ಆರ್​ಸಿಬಿ ಪರ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದ ಕೇದಾರ್ ಜಾಧವ್ 2 ಪಂದ್ಯಗಳಲ್ಲಿ ಒಟ್ಟು 12 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದಾಗ್ಯೂ ಈ ಬಾರಿಯ ಹರಾಜಿಗಾಗಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಆದರೀಗ ಹರಾಜಿಗೂ ಮುನ್ನವೇ 10 ಫ್ರಾಂಚೈಸಿಗಳು 38 ವರ್ಷ ಕೇದಾರ್ ಜಾಧವ್ ಅವರನ್ನು ಆಕ್ಷನ್ ಪಟ್ಟಿಯಿಂದ ಕೈಬಿಟ್ಟಿದೆ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ