AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಬಾರ್​ನಲ್ಲಿ ಕಾಣಿಸಿಕೊಂಡ ಮಹೇಂದ್ರ ಸಿಂಗ್ ಧೋನಿ: ವಿಡಿಯೋ ವೈರಲ್

IPL 2024: ಮಹೇಂದ್ರ ಸಿಂಗ್ ಧೋನಿ ಐಪಿಎಲ್​ನಲ್ಲಿ ಈವರೆಗೆ 264 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 24 ಅರ್ಧಶತಕಗಳೊಂದಿಗೆ 5243 ರನ್​ ಕಲೆಹಾಕಿದ್ದಾರೆ. ಇನ್ನು ಈ ಬಾರಿಯ ಐಪಿಎಲ್​ನಲ್ಲಿ ನಾಯಕತ್ವದ ತ್ಯಜಿಸಿ ಆಟಗಾರನಾಗಿ ಕಾಣಿಸಿಕೊಂಡಿರುವ ಧೋನಿ ಮುಂದಿನ ಸೀಸನ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಏಕೆಂದರೆ ಧೋನಿಗೆ 42 ವರ್ಷ ವಯಸ್ಸಾಗಿದ್ದು, ಹೀಗಾಗಿ ಮುಂದಿನ ಸೀಸನ್​ನಿಂದ ಹೊರಗುಳಿಯುವ ಸಾಧ್ಯತೆಯಿದೆ.

VIDEO: ಬಾರ್​ನಲ್ಲಿ ಕಾಣಿಸಿಕೊಂಡ ಮಹೇಂದ್ರ ಸಿಂಗ್ ಧೋನಿ: ವಿಡಿಯೋ ವೈರಲ್
MS Dhoni
TV9 Web
| Edited By: |

Updated on: May 21, 2024 | 8:29 AM

Share

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಅವರ ವಿಡಿಯೋವೊಂದು ವೈರಲ್ ಆಗಿದೆ. ಹೀಗೆ ಏಕಾಏಕಿ ಧೋನಿಯ ವಿಡಿಯೋ ವೈರಲ್ ಆಗಲು ಮುಖ್ಯ ಕಾರಣ ಅವರು ಬಾರ್​ನಲ್ಲಿ ಕಾಣಿಸಿಕೊಂಡಿರುವುದು. ಆರ್​ಸಿಬಿ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸೋತ ಬಳಿಕ ಸಿಎಸ್​ಕೆ ತಂಡವು ಐಪಿಎಲ್ 2024 ರಿಂದ ಹೊರಬಿದ್ದಿದೆ. ಈ ಸೋಲಿನ ಬಳಿಕ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ಬಾರ್​ನಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಟ್ಯಾಗ್​ಲೈನ್​ನೊಂದಿಗೆ ವಿಡಿಯೋ ವೈರಲ್ ಆಗಿದೆ.

ಮೇಲ್ನೋಟಕ್ಕೆ ಈ ವಿಡಿಯೋ ಇತ್ತೀಚಿನದಲ್ಲ. ಏಕೆಂದರೆ ಸಿಎಸ್​ಕೆ ತಂಡದ ಸೋಲಿನ ಬಳಿಕ ಹತಾಶರಾಗಿದ್ದ ಧೋನಿ ಅಂದೇ ತವರಿಗೆ ತೆರಳಿದ್ದರು ಎಂದು ವರದಿಯಾಗಿತ್ತು. ಹೀಗಾಗಿ ಆರ್​ಸಿಬಿ ವಿರುದ್ಧದ ಸೋಲಿನ ಬಳಿಕ ಜಡೇಜಾ ಜೊತೆ ಬಾರ್​ನಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆಯಿಲ್ಲ.

ಇದಾಗ್ಯೂ ಈ ವಿಡಿಯೋ ಈ ಬಾರಿಯ ಐಪಿಎಲ್ ಸಂದರ್ಭದ್ದು ಎಂಬುದು ವಿಶೇಷ. ಏಕೆಂದರೆ ಧೋನಿ ಹಲವು ವರ್ಷಗಳ ಬಳಿಕ ಉದ್ದನೆಯ ಕೂದಲಿನೊಂದಿಗೆ ಕಾಣಿಸಿಕೊಂಡಿದ್ದರು. ಈ ವಿಡಿಯೋದಲ್ಲೂ ಲಾಂಗ್ ಹೇರ್ ಸ್ಟೈಲ್​ ಅನ್ನು ಕಾಣಬಹುದು. ಹೀಗಾಗಿ ಇದು ಈ ಬಾರಿಯ ಐಪಿಎಲ್ ವೇಳೆ ಸೆರೆ ಹಿಡಿಯಲಾದ ವಿಡಿಯೋ ಎಂಬುದು ಸ್ಪಷ್ಟ.

ಸದ್ಯ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ಬಾರ್​ನಲ್ಲಿ ಚಿಲ್ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ನಾನಾ ರೀತಿಯ ಮೀಮ್ಸ್​ಗಳು ಕೂಡ ಹರಿದಾಡಲಾರಂಭಿಸಿದೆ.

ಇದನ್ನೂ ಓದಿ: MS Dhoni: ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಧೋನಿ

ಹಸ್ತಲಾಘವ ಮಾಡದ ಧೋನಿ:

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 18 ರಂದು ನಡೆದ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ 27 ರನ್​ಗಳ ಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಪ್ರವೇಶಿಸಿದರೆ, ಅತ್ತ ಸಿಎಸ್​ಕೆ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಈ ರಣರೋಚಕ ಪಂದ್ಯದ ಬಳಿಕ ಸಿಎಸ್​ಕೆ ತಂಡದ ಮಾಜಿ ನಾಯಕ ಧೋನಿ ಆರ್​ಸಿಬಿ ಆಟಗಾರರೊಂದಿಗೆ ಹಸ್ತಲಾಘವ ಮಾಡಿರಲಿಲ್ಲ ಎಂಬುದೇ ಅಚ್ಚರಿ. ಪಂದ್ಯ ಮುಗಿದ ಬಳಿಕ ಸಿಎಸ್​ಕೆ ಆಟಗಾರರು ಹಸ್ತಲಾಘವ ನೀಡಲು ಸರದಿ ಸಾಲಿನಲ್ಲಿ ನಿಂತಿದ್ದರು. ಈ ಸಾಲಿನಲ್ಲಿ ಧೋನಿ ಮುಂಚೂಣಿಯಲ್ಲಿದ್ದರು. ಆದರೆ ಅತ್ತ ಪಂದ್ಯ ಗೆದ್ದ ಖುಷಿಯಲ್ಲಿದ್ದ ಆರ್​ಸಿಬಿ ಆಟಗಾರರು ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದರು.

ಈ ವೇಳೆ ಆರ್​ಸಿಬಿ ಆಟಗಾರರನ್ನು ಕಾಯದೇ ಮಹೇಂದ್ರ ಸಿಂಗ್ ಧೋನಿ ಪೆವಿಲಿಯನ್​ನತ್ತ ಮರಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಧೋನಿ ನಡೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ