AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: SRH ಗೆಲ್ಲುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಕಾವ್ಯ ಮಾರನ್

IPL 2024 Final: ಐಪಿಎಲ್ 2024ರ ಫೈನಲ್ ಪಂದ್ಯವು ಮೇ 26 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದ್ದು, ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಕ್ಕೆ ತೆರೆ ಬೀಳಲಿದೆ.

VIDEO: SRH ಗೆಲ್ಲುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಕಾವ್ಯ ಮಾರನ್
ಝಾಹಿರ್ ಯೂಸುಫ್
|

Updated on:May 25, 2024 | 8:04 AM

Share

IPL 2024: ಸನ್​ರೈಸರ್ಸ್ ಹೈದರಾಬಾದ್ ತಂಡವು (SRH) ಐಪಿಎಲ್ ಸೀಸನ್ 17ರ ಫೈನಲ್​ಗೆ ಪ್ರವೇಶಿಸಿದೆ. ಚೆನ್ನೈ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್​ಗಳ ಜಯ ಸಾಧಿಸಿ ಎಸ್​ಆರ್​ಹೆಚ್ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿದೆ. ಅತ್ತ ಎಸ್​ಆರ್​ಹೆಚ್ ಗೆಲ್ಲುತ್ತಿದ್ದಂತೆ ತಂಡದ ಮಾಲಕಿ ಕಾವ್ಯ ಮಾರನ್ ಕುಣಿದು ಕುಪ್ಪಳಿಸಿದರು.

ಇದಕ್ಕೂ ಮುನ್ನ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಮೊದಲು ಬೌಲಿಂಗ್ ಮಾಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಎಸ್​ಆರ್​ಹೆಚ್ ಉತ್ತಮ ಆರಂಭ ಪಡೆದಿರಲಿಲ್ಲ. ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಸನ್​ರೈಸರ್ಸ್ ಹೈದರಾಬಾದ್ ತಂಡವು ಒಂದು ಹಂತದಲ್ಲಿ 160 ರನ್​​ಗಳ ಗಡಿ ದಾಟುವುದು ಕಷ್ಟಕರವಾಗಿತ್ತು.

ಈ ವೇಳೆ ಸ್ಟೇಡಿಯಂ ಗ್ಯಾಲರಿಯಲ್ಲಿ ಕಾವ್ಯ ಮಾರನ್ ಹತಾಶಭಾವದೊಂದಿಗೆ ಕಾಣಿಸಿಕೊಂಡಿದ್ದರು. ಇದಾಗ್ಯೂ ಹೆನ್ರಿಕ್ ಕ್ಲಾಸೆನ್ (50) ಬಾರಿಸಿದ ಅರ್ಧಶತಕದ ನೆರವಿನಿಂದ ಎಸ್​ಆರ್​ಹೆಚ್ ತಂಡವು ನಿಗದಿತ 20 ಓವರ್​ಗಳಲ್ಲಿ 175 ರನ್ ಕಲೆಹಾಕಿತು.

ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ (42) ಉತ್ತಮ ಆರಂಭ ಒದಗಿಸಿದ್ದರು. ಜೈಸ್ವಾಲ್ ಅವರ ಅಬ್ಬರದೊಂದಿಗೆ ಪಂದ್ಯ ಕೈತಪ್ಪಿತು ಎಂದೇ ಎಲ್ಲರೂ ಭಾವಿಸಿದ್ದರು. ಅತ್ತ ಕಾವ್ಯ ಮಾರನ್ ಕೂಡ ನಿರಾಶೆ ವ್ಯಕ್ತಪಡಿಸುತ್ತಾ ಕೂತಿದ್ದರು.

ಆದರೆ ಯಾವಾಗ ಶಹಬಾಝ್ ಅಹ್ಮದ್ ಹಾಗೂ ಅಭಿಷೇಕ್ ಶರ್ಮಾ ದಾಳಿಗಿಳಿದರೂ ಇಡೀ ಪಂದ್ಯದ ಚಿತ್ರಣ ಬದಲಾಯ್ತು. ಉತ್ತಮ ಸ್ಪಿನ್ ದಾಳಿ ಸಂಘಟಿಸಿದ ಶಹಬಾಝ್ ಕೇವಲ 23 ರನ್ ನೀಡಿ 3 ವಿಕೆಟ್ ಕಬಳಿಸಿದರು. ಮತ್ತೊಂದೆಡೆ ಉತ್ತಮ ಸಾಥ್ ನೀಡಿದ ಅಭಿಷೇಕ್ ಶರ್ಮಾ 24 ರನ್​ ನೀಡಿ 2 ವಿಕೆಟ್ ಪಡೆದರು.

ಇದನ್ನೂ ಓದಿ: Virat Kohli: ಈ ಸಲ ಆರೆಂಜ್ ಕ್ಯಾಪ್ ನಮ್ದೆ

ಇಬ್ಬರ ಸ್ಪಿನ್ ದಾಳಿಯಿಂದಾಗಿ ಸೋಲಿನ ಸುಳಿಗೆ ಸಿಲುಕಿದ ರಾಜಸ್ಥಾನ್ ರಾಯಲ್ಸ್ ತಂಡವು ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 139 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಸನ್​ರೈಸರ್ಸ್ ಹೈದರಾಬಾದ್ ತಂಡವು 36 ರನ್​ಗಳ ಜಯ ಸಾಧಿಸಿತು.

ಎಸ್​ಆರ್​ಹೆಚ್ ಸಂಭ್ರಮ:

Kavya Maran Hardik KKR VS SRH #SRHVSRR #Qaulifier2 pic.twitter.com/AKata2rxiv

— moinsha diwan ( ❤I AM WAITING FOR HER ❤) (@AsimfanNo11) May 25, 2024

ಅತ್ತ ಸನ್​ರೈಸರ್ಸ್ ಹೈದರಾಬಾದ್ ಬೌಲರ್​ಗಳು ವಿಕೆಟ್ ಕಬಳಿಸುತ್ತಾ ಸಾಗುತ್ತಿದ್ದರೆ ಇತ್ತ ಕಾವ್ಯ ಮಾರನ್ ಕುಣಿದು ಕುಪ್ಪಳಿಸಲಾರಂಭಿಸಿದ್ದರು. ಈ ಸಂತಸ ಅಂತಿಮ ಓವರ್​ವರೆಗೂ ಸಾಗಿತು. ಅಲ್ಲದೆ ಪಂದ್ಯ ಗೆಲ್ಲುತ್ತಿದ್ದಂತೆ ತಂದೆ ಬಳಿ ಓಡಿ ಹೋಗಿ ಅಪ್ಪುಗೆಯೊಂದಿಗೆ ಸಂಭ್ರಮಿಸಿದರು. ಇದೀಗ ಕಾವ್ಯ ಮಾರನ್ ಅವರ ಸಂಭ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಾವ್ಯ ಮಾರನ್ ಸಂಭ್ರಮ:

IPL 2024 ಫೈನಲ್ ಪಂದ್ಯ:

ಐಪಿಎಲ್ 2024ರ ಫೈನಲ್ ಪಂದ್ಯವು ಮೇ 26 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದ್ದು, ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ.

Published On - 8:03 am, Sat, 25 May 24

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ