AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs RCB, IPL 2024: ಆರ್​ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ; ತಂಡದಲ್ಲಿ 3 ಬದಲಾವಣೆ

KKR vs RCB, IPL 2024: ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹಾಗೆಯೇ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಕೆಕೆಆರ್ ತಂಡದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಇತ್ತ ಆರ್​ಸಿಬಿ ತನ್ನ ತಂಡದಲ್ಲಿ ಮೂರು ಬದಲಾವಣೆ ಮಾಡಿದೆ.

KKR vs RCB, IPL 2024: ಆರ್​ಸಿಬಿಗೆ  ಮಾಡು ಇಲ್ಲವೇ ಮಡಿ ಪಂದ್ಯ; ತಂಡದಲ್ಲಿ 3 ಬದಲಾವಣೆ
ಆರ್​ಸಿಬಿ- ಕೆಕೆಆರ್
ಪೃಥ್ವಿಶಂಕರ
|

Updated on:Apr 21, 2024 | 3:14 PM

Share

ಇಂದು, ಐಪಿಎಲ್ 2024 ರ (IPL 2024) 36 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು (Kolkata Knight Riders Vs Royal Challengers Bangalore) ಎದುರಿಸುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹಾಗೆಯೇ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಕೆಕೆಆರ್ ತಂಡದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅಂದರೆ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಶ್ರೇಯಸ್ ಅಯ್ಯರ್ ಕಣಕ್ಕಿಳಿಸುತ್ತಿದ್ದಾರೆ. ಇತ್ತ ಆರ್​ಸಿಬಿ ತನ್ನ ತಂಡದಲ್ಲಿ ಮೂರು ಬದಲಾವಣೆ ಮಾಡಿದೆ. ಅದರಂತೆ ಕ್ಯಾಮರೂನ್ ಗ್ರೀನ್, ಮೊಹಮ್ಮದ್ ಸಿರಾಜ್ ಮತ್ತು ಕರಣ್ ಶರ್ಮಾ ಆರ್‌ಸಿಬಿ ತಂಡಕ್ಕೆ ಮರಳಿದ್ದಾರೆ.

ಮೊದಲ ಮುಖಾಮುಖಿಯಲ್ಲಿ ಕೆಕೆಆರ್​ಗೆ ಗೆಲುವು

ಈ ಆವೃತ್ತಿಯಲ್ಲಿ ಉಭಯ ತಂಡಗಳಿಗೆ ಇದು ಎರಡನೇ ಮುಖಾಮುಖಿ. ಮೊದಲ ಮುಖಾಮುಖಿಯಲ್ಲಿ ಕೆಕೆಆರ್, ಆರ್​ಸಿಬಿಯನ್ನು ಹೀನಾಯವಾಗಿ ಸೋಲಿಸಿತ್ತು. ಹೀಗಾಗಿ ಈ ಪಂದ್ಯದಲ್ಲೂ ಆರ್​ಸಿಬಿಯನ್ನು ಮಣಿಸುವ ಉದ್ದೇಶದಿಂದ ಈ ಪಂದ್ಯಕ್ಕೆ ಕಾಲಿಡಲಿದೆ. ಇತ್ತ ಈ ಸೀಸನ್​ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡುತ್ತಿರುವ ಆರ್​ಸಿಬಿ ಪ್ಲೇಆಫ್ ರೇಸ್ನಲ್ಲಿ ಉಳಿಯಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿದೆ.

RCB: ಗೋ ಗ್ರೀನ್ ಅಭಿಯಾನ; ಆರ್​ಸಿಬಿಯಿಂದ ಬೆಂಗಳೂರಿನ 3 ಕೆರೆಗಳಿಗೆ ಮರುಜೀವ..! ವಿಡಿಯೋ ನೋಡಿ

ಐಪಿಎಲ್ ಮುಖಾಮುಖಿ ವರದಿ

ಉಭಯ ತಂಡಗಳ ನಡುವೆ ಐಪಿಎಲ್‌ನಲ್ಲಿ ಇದುವರೆಗೆ 33 ಪಂದ್ಯಗಳು ನಡೆದಿವೆ. ಈ ಪೈಕಿ ಕೋಲ್ಕತ್ತಾ 19 ಪಂದ್ಯಗಳನ್ನು ಗೆದ್ದಿದ್ದರೆ, ಬೆಂಗಳೂರು 14 ಪಂದ್ಯಗಳನ್ನು ಗೆದ್ದಿದೆ. ಅದೇ ಸಮಯದಲ್ಲಿ, ಈಡನ್ ಗಾರ್ಡನ್ಸ್‌ನಲ್ಲಿ ಉಭಯ ತಂಡಗಳ ನಡುವೆ 11 ಪಂದ್ಯಗಳು ನಡೆದಿವೆ. ಈ ಪೈಕಿ ಕೋಲ್ಕತ್ತಾ ಏಳರಲ್ಲಿ ಗೆದ್ದಿದ್ದರೆ ಬೆಂಗಳೂರು ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದೆ.

ಉಭಯ ತಂಡಗಳು

ಕೋಲ್ಕತ್ತಾ ನೈಟ್ ರೈಡರ್ಸ್ : ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಸುನೀರ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜಾಕ್ವೆಸ್, ರಜತ್ ಪಾಟಿದಾರ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮೊರೊರ್, ಕರಣ್ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಸಿರಾಜ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Sun, 21 April 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?