AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮೊದಲ ಕ್ವಾಲಿಫೈಯರ್​ನಲ್ಲಿಂದು KKR vs SRH ಕಾದಾಟ

IPL 2024 KKR vs SRH: ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಈವರೆಗೆ 26 ಪಂದ್ಯಗಳಲ್ಲಿ ಎದುರು ಬದುರಾಗಿದೆ. ಈ ವೇಳೆ ಕೆಕೆಆರ್ ತಂಡ 17 ಬಾರಿ ಜಯ ಸಾಧಿಸಿದರೆ, ಎಸ್​ಆರ್​ಹೆಚ್ ಗೆದ್ದಿರುವುದು ಕೇವಲ 9 ಬಾರಿ ಮಾತ್ರ. ಇನ್ನು ಈ ಬಾರಿ ಉಭಯ ತಂಡಗಳು ಒಮ್ಮೆ ಮಾತ್ರ ಮುಖಾಮುಖಿಯಾಗಿದೆ.

IPL 2024: ಮೊದಲ ಕ್ವಾಲಿಫೈಯರ್​ನಲ್ಲಿಂದು KKR vs SRH ಕಾದಾಟ
KKR vs SRH
ಝಾಹಿರ್ ಯೂಸುಫ್
|

Updated on:May 21, 2024 | 7:11 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಮೊದಲ ಕ್ವಾಲಿಫೈಯರ್ ಪಂದ್ಯ ಇಂದು (ಮೇ 21) ನಡೆಯಲಿದೆ. ಈ ಪಂದ್ಯದಲ್ಲಿ ಪಾಯಿಂಟ್ಸ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ.

ಇನ್ನು ಸೋತ ತಂಡ ಐಪಿಎಲ್​ನಿಂದ ಹೊರಬೀಳುವುದಿಲ್ಲ. ಬದಲಾಗಿ ಎರಡನೇ ಕ್ವಾಲಿಫೈಯರ್ ಆಡಲಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಲಿದೆ. ಇಲ್ಲಿ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡ ಮತ್ತು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡಗಳು ಮುಖಾಮುಖಿಯಾಗಲಿದೆ.

ಉಭಯ ತಂಡಗಳ ಮುಖಾಮುಖಿ:

ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಈವರೆಗೆ 26 ಪಂದ್ಯಗಳಲ್ಲಿ ಎದುರು ಬದುರಾಗಿದೆ. ಈ ವೇಳೆ ಕೆಕೆಆರ್ ತಂಡ 17 ಬಾರಿ ಜಯ ಸಾಧಿಸಿದರೆ, ಎಸ್​ಆರ್​ಹೆಚ್ ಗೆದ್ದಿರುವುದು ಕೇವಲ 9 ಬಾರಿ ಮಾತ್ರ. ಇನ್ನು ಈ ಬಾರಿ ಉಭಯ ತಂಡಗಳು ಒಮ್ಮೆ ಮಾತ್ರ ಮುಖಾಮುಖಿಯಾಗಿದ್ದು, ಈ ವೇಳೆ ಸನ್​ರೈಸರ್ಸ್ ಹೈದರಾಬಾದ್ ವಿರೋಚಿತ ಪ್ರದರ್ಶನ ನೀಡಿ ಕೇವಲ 4 ರನ್​ಗಳಿಂದ ಮಾತ್ರ ಸೋಲೊಪ್ಪಿಕೊಂಡಿತು. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಪಂದ್ಯದ ಕುರಿತಾದ ಸಂಕ್ಷಿಪ್ತ ಮಾಹಿತಿ:

ಕ್ವಾಲಿಫೈಯರ್ 1 ಮುಖಾಮುಖಿ: KKR vs SRH

ನಾಯಕರುಗಳು: ಪ್ಯಾಟ್ ಕಮಿನ್ಸ್ (SRH) ಮತ್ತು ಶ್ರೇಯಸ್ ಅಯ್ಯರ್ (KKR)

ಟಾಸ್ ಪ್ರಕ್ರಿಯೆ: ರಾತ್ರಿ 7 ಗಂಟೆಗೆ.

ಪಂದ್ಯ ಶುರು: ರಾತ್ರಿ 7.30 ರಿಂದ

ಪಂದ್ಯ ನಡೆಯುವ ಸ್ಥಳ: ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್.

ಸನ್ ರೈಸರ್ಸ್ ಹೈದರಾಬಾದ್ ತಂಡ: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಶಹಬಾಝ್ ಅಹ್ಮದ್, ಅಬ್ದುಲ್ ಸಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ವಿಜಯಕಾಂತ್ ವ್ಯಾಸಕಾಂತ್, ಟಿ ನಟರಾಜನ್, ಉಮ್ರಾನ್ ಮಲಿಕ್, ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್, ಜಯದೇವ್ ಉನಾದ್ಕತ್, ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಾಮ್, ಅನ್ಮೋಲ್ಪ್ರೀತ್ ಸಿಂಗ್, ಉಪೇಂದ್ರ ಯಾದವ್, ಮಯಾಂಕ್ ಮಾರ್ಕಂಡೆ, ಜಾತವೇಧ್ ಸುಬ್ರಹ್ಮಣ್ಯನ್, ಫಝಲ್ಹಕ್ ಫಾರೂಕಿ, ಮಾರ್ಕೊ ಯಾನ್ಸೆನ್, ಆಕಾಶ್ ಮಹಾರಾಜ್ ಸಿಂಗ್.

ಇದನ್ನೂ ಓದಿ: IPL 2024: ನಿರ್ಣಾಯಕ ಪಂದ್ಯಕ್ಕೆ ಬಲಿಷ್ಠ ಬಳಗವನ್ನೇ ಕಣಕ್ಕಿಳಿಸಲಿದೆ RCB

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆ್ಯಂಡ್ರೆ ರಸೆಲ್, ರಮಣದೀಪ್ ಸಿಂಗ್, ಅನುಕುಲ್ ರಾಯ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ವೈಭವ್ ಪಾಂಡೆ, ಮನೀಶ್ ಪಾಂಡೆ, ನಿತೀಶ್ ರಾಣಾ, ಶ್ರೀಕರ್ ಭರತ್, ಶೆರ್ಫಾನೆ ರುದರ್‌ಫೋರ್ಡ್, ದುಷ್ಮಂತ ಚಮೀರಾ, ಅಂಗ್‌ಕ್ರಿಶ್ ರಘುವಂಶಿ, ಸಾಕಿಬ್ ಹುಸೇನ್, ಸುಯಶ್ ಶರ್ಮಾ, ಅಲ್ಲಾ ಘಜನ್‌ಫರ್, ಚೇತನ್ ಸಕರಿಯಾ.

Published On - 7:03 am, Tue, 21 May 24

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ