IPL 2024: ಐಪಿಎಲ್ ಅನ್ನು ಅರ್ಧದಲ್ಲೇ ತೊರೆದ ಸ್ಟಾರ್ ಪ್ಲೇಯರ್ಸ್: ಮುಂದಿನ ಪಂದ್ಯಗಳಿಗೆ ಇವರು ಅಲಭ್ಯ

IPL 2024: ರಾಜಸ್ಥಾನ್ ರಾಯಲ್ಸ್ ಆರಂಭಿಕ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಇನ್ನು ಮುಂದೆ ಐಪಿಎಲ್ 2024 ರಲ್ಲಿ ಭಾಗವಹಿಸುವುದಿಲ್ಲ. ಅಂತೆಯೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬ್ಯಾಟ್ಸ್‌ಮನ್ ವಿಲ್ ಜ್ಯಾಕ್ ಮತ್ತು ರೀಸ್ ಟೋಪ್ಲಿ ಕೂಡ ತಮ್ಮ ದೇಶಕ್ಕೆ ಮರಳಿದ್ದಾರೆ.

IPL 2024: ಐಪಿಎಲ್ ಅನ್ನು ಅರ್ಧದಲ್ಲೇ ತೊರೆದ ಸ್ಟಾರ್ ಪ್ಲೇಯರ್ಸ್: ಮುಂದಿನ ಪಂದ್ಯಗಳಿಗೆ ಇವರು ಅಲಭ್ಯ
Jos Buttler and will jacks
Follow us
Vinay Bhat
|

Updated on: May 14, 2024 | 8:45 AM

ಐಪಿಎಲ್ 2024 (IPL 2024) ಟೂರ್ನಿ ಅಂತಿಮ ಹಂತದತ್ತ ತಲುಪುತ್ತಿದೆ. ಇದಾದ ಬಳಿಕ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ನಡೆಯಲಿದೆ. ಈಗಾಗಲೇ ಕೆಲ ತಂಡಗಳು ಇದರ ತಯಾರಿಯತ್ತ ಗಮನ ಹರಿಸಿವೆ. ಈ ಕಾರಣಕ್ಕಾಗಿ ಇಂಗ್ಲೆಂಡ್ ಆಟಗಾರರು ಐಪಿಎಲ್ ತೊರೆದು ತಮ್ಮ ದೇಶಕ್ಕೆ ಮರಳಲು ಆರಂಭಿಸಿದ್ದಾರೆ. ಇಂಗ್ಲೆಂಡ್ 2022ರಲ್ಲಿ ಟಿ20 ವಿಶ್ವಕಪ್ ಗೆದ್ದಿತ್ತು. ಜೂನ್ 1ರಿಂದ ಆರಂಭವಾಗುವ ಟೂರ್ನಿಗೂ ಮುನ್ನ ಇಂಗ್ಲೆಂಡ್ ಟೀಮ್ ಪಾಕಿಸ್ತಾನ ವಿರುದ್ಧ ಟಿ20 ಸರಣಿ ಆಡಬೇಕಿದೆ. ಇದೇ ಕಾರಣಕ್ಕೆ ಆಂಗ್ಲ ಕ್ರಿಕೆಟ್ ಮಂಡಳಿ ತನ್ನ ಆಟಗಾರರನ್ನು ಐಪಿಎಲ್​ನಿಂದ ಹಿಂತಿರುಗುವಂತೆ ಆದೇಶಿಸಿದೆ.

ರಾಜಸ್ಥಾನ್ ರಾಯಲ್ಸ್ ಆರಂಭಿಕ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಇನ್ನು ಮುಂದೆ ಐಪಿಎಲ್ 2024 ರಲ್ಲಿ ಭಾಗವಹಿಸುವುದಿಲ್ಲ. ಬಟ್ಲರ್ ಇಂಗ್ಲೆಂಡ್ ತಂಡದ ನಾಯಕ. ರಾಜಸ್ಥಾನ್ ರಾಯಲ್ಸ್ ಅವರು ತವರಿಗೆ ಹಿಂತಿರುಗುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. ಅಂತೆಯೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬ್ಯಾಟ್ಸ್‌ಮನ್ ವಿಲ್ ಜ್ಯಾಕ್ ಮತ್ತು ರೀಸ್ ಟೋಪ್ಲಿ ಕೂಡ ತಮ್ಮ ದೇಶಕ್ಕೆ ಮರಳಿದ್ದಾರೆ. ಆರ್‌ಸಿಬಿಯ ಸತತ 5 ಗೆಲುವುಗಳಲ್ಲಿ ಜ್ಯಾಕ್ ಪ್ರಮುಖ ಪಾತ್ರ ವಹಿಸಿದ್ದರು.

ಜೋಸ್ ಬಟ್ಲರ್ ಹಿಂತಿರುಗುವ ಕುರಿತು ಆರ್​ಆರ್​ ಹಂಚಿಕೊಂಡ ವಿಡಿಯೋ:

ಭಾರತದ ಮುಖ್ಯ ಕೋಚ್ ಬಗ್ಗೆ ದೊಡ್ಡ ಘೋಷಣೆ: ಹೊಸ ಕೋಚ್​ಗೆ ಬಿಸಿಸಿಐ ಕಠಿಣ ಷರತ್ತು

ಬಟ್ಲರ್, ವಿಲ್ ಜ್ಯಾಕ್ ಮತ್ತು ಟೋಪ್ಲಿ ಅವರಲ್ಲದೆ, ಇಂಗ್ಲೆಂಡ್‌ನ ಅನೇಕ ಪ್ರಮುಖ ಆಟಗಾರರು ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. ಅವರೂ ಹಿಂತಿರುಗಬೇಕಿದೆಎ. ಇದರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಫಿಲ್ ಸಾಲ್ಟ್ ಹೆಸರೂ ಸೇರಿದೆ. ಕೆಕೆಆರ್‌ಗಾಗಿ ಅವರು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಪಂಜಾಬ್ ಕಿಂಗ್ಸ್​ನ ಮೂವರು ಆಟಗಾರರು ಮರಳಲಿದ್ದಾರೆ. ಸ್ಯಾಮ್ ಕರ್ರಾನ್ ಮತ್ತು ಜಾನಿ ಬೈರ್‌ಸ್ಟೋ ಅವರ ಹೆಸರುಗಳು ಇದರಲ್ಲಿವೆ. ಇದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಆಲ್‌ರೌಂಡರ್ ಮೊಯಿನ್ ಅಲಿ ಕೂಡ ಇಂಗ್ಲೆಂಡ್‌ಗೆ ಪ್ರಯಾಣಿಸಿದ್ದಾರೆ.

ಲಕ್ನೋ ತೊರೆಯುತ್ತಾರಾ ಕೆಎಲ್ ರಾಹುಲ್? ವಿವಾದದ ಬಗ್ಗೆ ಮೌನ ಮುರಿದ ಕೋಚ್

ಅತ್ತ ಪಂಜಾಬ್ ಕಿಂಗ್ಸ್ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳಲು ಸೋಮವಾರ ಇಂಗ್ಲೆಂಡ್‌ಗೆ ತೆರಳಿದರು. ಪಂಜಾಬ್ ಕಿಂಗ್ಸ್ ತಂಡ ಈಗಾಗಲೇ 12 ಪಂದ್ಯಗಳಲ್ಲಿ ಕೇವಲ ನಾಲ್ಕು ಗೆಲುವುಗಳೊಂದಿಗೆ ಪ್ಲೇ ಆಫ್ ರೇಸ್‌ನಿಂದ ಹೊರಗುಳಿದಿದೆ. ಲಿವಿಂಗ್‌ಸ್ಟೋನ್ ಇನ್‌ಸ್ಟಾಗ್ರಾಮ್‌ನಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ