IPL 2024: ಮುಂಬೈ ವಿರುದ್ಧ ವಿಲ್ ಜ್ಯಾಕ್ಸ್ ಕಣಕ್ಕೆ? ತಂಡ ಬದಲಿಸುವ ಒತ್ತಡದಲ್ಲಿ ಆರ್‌ಸಿಬಿ
IPL 2024 MI vs RCB predicted playing XI: ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ನ 25ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಉಭಯ ತಂಡಗಳ ನಡುವಿನ ಪಂದ್ಯ ಮುಂಬೈನ ತವರು ವಾಂಖೆಡೆಯಲ್ಲಿ ನಡೆಯಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ನ (IPL 2024) 25ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs MI) ನಡುವೆ ನಡೆಯಲಿದೆ. ಉಭಯ ತಂಡಗಳ ನಡುವಿನ ಪಂದ್ಯ ಮುಂಬೈನ ತವರು ವಾಂಖೆಡೆಯಲ್ಲಿ ನಡೆಯಲಿದೆ. ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದಲ್ಲಿ ಲೀಗ್‌ನಲ್ಲಿ ಸತತ ಮೂರು ಪಂದ್ಯಗಳನ್ನು ಸೋತಿರುವ ಮುಂಬೈ ತಂಡ ಇದೀಗ ಗೆಲುವಿನ ಹಳಿಗೆ ಮರಳಿದೆ. ಮುಂಬೈ ತನ್ನ ತವರು ನೆಲದಲ್ಲಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲ ಜಯ ಸಾಧಿಸಿದೆ. ಇತ್ತ ಆರ್‌ಸಿಬಿ ತಂಡ ಕಳೆದ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಬೇಕಾಯಿತು. ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಶತಕ ಬಾರಿಸಿದರ ಹೊರತಾಗಿಯೂ ತಂಡ ಸೋತಿತು. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಮುಖ್ಯವಾಗಿದ್ದು, ಯಾವ ಆಡುವ ಹನ್ನೊಂದರ ಬಳಗದೊಂದಿಗೆ ಕಣಕ್ಕಿಳಿಯಲಿದೆ ಎಂಬುದನ್ನು ಕಾದುನೋಡಬೇಕಿದೆ.
ಮುಂಬೈ ತಂಡ ಬದಲಿಸುತ್ತಾ?
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ, ಮುಂಬೈ ತಂಡದ ಪರ ಸೂರ್ಯಕುಮಾರ್ ಯಾದವ್ ಖಾತೆ ತೆರೆಯದೆ ಔಟಾದರು ಎಂಬುದನ್ನು ಬಿಟ್ಟರೆ, ಉಳಿದಂತೆ ತಂಡದ ಪ್ರದರ್ಶನ ಅದ್ಭುತವಾಗಿತ್ತು. ಇಶಾನ್ ಕಿಶನ್ ಮತ್ತು ರೋಹಿತ್ ಉತ್ತಮ ಫಾರ್ಮ್‌ನಲ್ಲಿದ್ದು, ತಂಡಕ್ಕೆ ಉತ್ತಮ ಆರಂಭವನ್ನು ನೀಡುತ್ತಿದ್ದಾರೆ. ಇದಲ್ಲದೇ ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಅವರೊಂದಿಗೆ ಹಾರ್ದಿಕ್ ಪಾಂಡ್ಯ ಕೂಡ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದಾರೆ.
ಕೆಳ ಕ್ರಮಾಂಕದಲ್ಲಿ ಟಿಮ್ ಡೇವಿಡ್ ಮತ್ತು ರೊಮಾರಿಯೊ ಶೆಫರ್ಡ್ ಅವರಂತಹ ಪವರ್ ಹಿಟ್ಟರ್‌ಗಳಿದ್ದಾರೆ. ಬೌಲಿಂಗ್‌ನಲ್ಲಿ ಪಿಯೂಷ್ ಚಾವ್ಲಾ ಹೊರತುಪಡಿಸಿ ಉಳಿದವರೆಲ್ಲರೂ ಮಿಂಚಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಅವರು ತಮ್ಮ ಗೆಲುವಿನ ಸಂಯೋಜನೆಯೊಂದಿಗೆ ಮೈದಾನಕ್ಕಿಳಿಯಲು ಬಯಸುತ್ತಾರೆ. ಹೀಗಾಗಿ, ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಮುಂಬೈ ಯಾವುದೇ ಬದಲಾವಣೆಗಳನ್ನು ಮಾಡುವ ಸಾಧ್ಯತೆಗಳಿಲ್ಲ.
IPL 2024 MI vs RCB Live Streaming: ಮುಂಬೈ- ಆರ್‌ಸಿಬಿ ಫೈಟ್; ಪಂದ್ಯ ಎಲ್ಲಿ ನಡೆಯಲ್ಲಿದೆ ಗೊತ್ತಾ?
ಆರ್‌ಸಿಬಿ ತಂತ್ರಗಾರಿಕೆ ಬದಲಿಸಬೇಕಿದೆ
ಈ ಸೀಸನ್ನಲ್ಲಿ ಆರ್‌ಸಿಬಿ ತಂಡಕ್ಕೆ ವಿಶೇಷವಾದದ್ದೇನೂ ಇಲ್ಲ. ಈ ಸ್ಟಾರ್-ಸ್ಟಡ್ ಶೋ ನಿರಾಶೆಯನ್ನು ಮುಂದುವರೆಸಿದೆ. ವಿರಾಟ್ ಕೊಹ್ಲಿಯಂತಹ ಬ್ಯಾಟ್ಸ್ಮನ್ ತಂಡದ ಪರ ಶತಕ ಬಾರಿಸಿದರೂ ಗೆಲ್ಲಲು ಸಾಧ್ಯವಾಗುತ್ತಿಲ್ಲ. ಫಾಫ್ ಡು ಪ್ಲೆಸಿಸ್ ಉತ್ತಮ ಆರಂಭ ನೀಡಲು ವಿಫಲರಾಗಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಬ್ಯಾಟ್ ಸದ್ದು ಮಾಡುತ್ತಿಲ್ಲ. ಕ್ಯಾಮೆರಾನ್ ಗ್ರೀನ್‌ಗೆ ಮುಕ್ತವಾಗಿ ಆಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತಂಡದ ಮಧ್ಯಮ ಕ್ರಮಾಂಕ ಸಂಪೂರ್ಣವಾಗಿ ವಿಫಲವಾಗಿದ್ದರೆ, ಇತ್ತ ಬೌಲಿಂಗ್ ಸಂಪೂರ್ಣವಾಗಿ ನಿಷ್ಪರಿಣಾಮಕಾರಿಯಾಗಿದೆ. ಇದೇ ಕಾರಣಕ್ಕೆ ಮುಂಬೈ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತಂಡ ಬದಲಾದ ತಂತ್ರಗಾರಿಕೆಯೊಂದಿಗೆ ಮೈದಾನಕ್ಕಿಳಿಯಬಹುದಾಗಿದ್ದು, ಕೆಲ ದೊಡ್ಡ ಬದಲಾವಣೆಗಳನ್ನೂ ಕಾಣಬಹುದು.
ಎರಡೂ ಸಂಭಾವ್ಯ ತಂಡಗಳು
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಮೊಹಮ್ಮದ್ ನಬಿ, ರೊಮಾರಿಯೋ ಶೆಫರ್ಡ್, ಪಿಯೂಷ್ ಚಾವ್ಲಾ, ಜೆರಾಲ್ಡ್ ಕೋಟ್ಜಿ, ಜಸ್ಪ್ರೀತ್ ಬುಮ್ರಾ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್/ ವಿಲ್ ಜ್ಯಾಕ್ಸ್, ಕ್ಯಾಮೆರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯ್ಯಾಶ್ ಪ್ರಭುದೇಸಾಯಿ, ರೀಸ್ ಟೋಪ್ಲಿ, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ