AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಧೋನಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​) ತನ್ನ 2ನೇ ಪಂದ್ಯದಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿದೆ. ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿದ್ದ ಸಿಎಸ್​​ಕೆ ತಂಡವು ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ.

IPL 2024: ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಧೋನಿ
MS Dhoni
TV9 Web
| Edited By: |

Updated on: Mar 27, 2024 | 11:23 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 7ನೇ ಪಂದ್ಯದಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿಯುವ ಮೂಲಕ ಸಿಎಸ್​ಕೆ ತಂಡದ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ಶಿವಂ ದುಬೆ (51) ಅವರ ಸ್ಪೋಟಕ ಅರ್ಧಶತಕದ ನೆರವಿನಿಂದ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು.

207 ರನ್​ಗಳ ಗುರಿ ಪಡೆದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶುಭ್​ಮನ್ ಗಿಲ್ (8) ಹಾಗೂ ವೃದ್ದಿಮಾನ್ ಸಾಹ (21) ಬೇಗನೆ ಔಟಾಗಿದ್ದರು.

ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಜಯ್ ಶಂಕರ್ 11 ಎಸೆತಗಳಲ್ಲಿ 12 ರನ್ ಬಾರಿಸಿ ಕ್ರೀಸ್ ಕಚ್ಚಿ ನಿಲ್ಲುವ ಸೂಚನೆ ನೀಡಿದ್ದರು. ಆದರೆ ಡೇರಿಲ್ ಮಿಚೆಲ್ ಎಸೆದ 8ನೇ ಓವರ್​ನ 3ನೇ ಎಸೆತದಲ್ಲಿ ವಿಜಯ್ ಶಂಕರ್ ಅವರ ಬ್ಯಾಟ್ ಸವರಿ ಚೆಂಡು ಫಸ್ಟ್ ಸ್ಲಿಪ್​ನತ್ತ ಸಾಗಿತ್ತು. ಕ್ಷಣಾರ್ಧದಲ್ಲೇ ಡೈವಿಂಗ್ ಮಾಡಿದ ಮಹೇಂದ್ರ ಸಿಂಗ್ ಧೋನಿ 42ನೇ ವಯಸ್ಸಿನಲ್ಲೂ ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದರು.

ಅಜಿಂಕ್ಯ ರಹಾನೆ ಮಿಂಚು:

ಇದೇ ಪಂದ್ಯದಲ್ಲಿ ತುಷಾರ್ ದೇಶಪಾಂಡೆ ಎಸೆದ 12ನೇ ಓವರ್​ನ 5 ಎಸೆತವನ್ನು ಡೇವಿಡ್ ಮಿಲ್ಲರ್ ಡೀಪ್ ಮಿಡ್ ವಿಕೆಟ್​ನತ್ತ ಬಾರಿಸಿದ್ದರು. ಬೌಂಡರಿ ಲೈನ್​ನಿಂದ ಓಡಿ ಬಂದ ಅಜಿಂಕ್ಯ ರಹಾನೆ ಆಕರ್ಷಕ ಡೈವಿಂಗ್ ಕ್ಯಾಚ್ ಹಿಡಿಯುವ ಮೂಲಕ ಗಮನ ಸೆಳೆದರು.

ಇದೀಗ ಸಿಎಸ್​ಕೆ ತಂಡದ ಇಬ್ಬರು ಹಿರಿಯ ಆಟಗಾರರ ಅದ್ಭುತ ಫೀಲ್ಡಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಗೆದ್ದು ಬೀಗಿದ ಸಿಎಸ್​ಕೆ:

ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀಡಿದ 207 ರನ್​ಗಳ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಸಿಎಸ್​ಕೆ ತಂಡವು 63 ರನ್​ಗಳ ಭರ್ಜರಿ ಜಯ ಸಾಧಿಸಿದೆ.

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​