
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 7ನೇ ಪಂದ್ಯದಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿಯುವ ಮೂಲಕ ಸಿಎಸ್ಕೆ ತಂಡದ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡವು ಶಿವಂ ದುಬೆ (51) ಅವರ ಸ್ಪೋಟಕ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು.
207 ರನ್ಗಳ ಗುರಿ ಪಡೆದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶುಭ್ಮನ್ ಗಿಲ್ (8) ಹಾಗೂ ವೃದ್ದಿಮಾನ್ ಸಾಹ (21) ಬೇಗನೆ ಔಟಾಗಿದ್ದರು.
ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಜಯ್ ಶಂಕರ್ 11 ಎಸೆತಗಳಲ್ಲಿ 12 ರನ್ ಬಾರಿಸಿ ಕ್ರೀಸ್ ಕಚ್ಚಿ ನಿಲ್ಲುವ ಸೂಚನೆ ನೀಡಿದ್ದರು. ಆದರೆ ಡೇರಿಲ್ ಮಿಚೆಲ್ ಎಸೆದ 8ನೇ ಓವರ್ನ 3ನೇ ಎಸೆತದಲ್ಲಿ ವಿಜಯ್ ಶಂಕರ್ ಅವರ ಬ್ಯಾಟ್ ಸವರಿ ಚೆಂಡು ಫಸ್ಟ್ ಸ್ಲಿಪ್ನತ್ತ ಸಾಗಿತ್ತು. ಕ್ಷಣಾರ್ಧದಲ್ಲೇ ಡೈವಿಂಗ್ ಮಾಡಿದ ಮಹೇಂದ್ರ ಸಿಂಗ್ ಧೋನಿ 42ನೇ ವಯಸ್ಸಿನಲ್ಲೂ ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದರು.
🚁 #CSKvGT #TATAIPL #IPLonJioCinema #JioCinemaSports pic.twitter.com/OEcMZKGZiN
— JioCinema (@JioCinema) March 26, 2024
ಅಜಿಂಕ್ಯ ರಹಾನೆ ಮಿಂಚು:
ಇದೇ ಪಂದ್ಯದಲ್ಲಿ ತುಷಾರ್ ದೇಶಪಾಂಡೆ ಎಸೆದ 12ನೇ ಓವರ್ನ 5 ಎಸೆತವನ್ನು ಡೇವಿಡ್ ಮಿಲ್ಲರ್ ಡೀಪ್ ಮಿಡ್ ವಿಕೆಟ್ನತ್ತ ಬಾರಿಸಿದ್ದರು. ಬೌಂಡರಿ ಲೈನ್ನಿಂದ ಓಡಿ ಬಂದ ಅಜಿಂಕ್ಯ ರಹಾನೆ ಆಕರ್ಷಕ ಡೈವಿಂಗ್ ಕ್ಯಾಚ್ ಹಿಡಿಯುವ ಮೂಲಕ ಗಮನ ಸೆಳೆದರು.
𝙎𝙖𝙛𝙚 ➡️ 𝙎𝙖𝙛𝙚𝙧 ➡️ 𝘼𝙟𝙟𝙪 𝙙𝙖𝙙𝙖 😌#CSKvGT #IPLonJioCinema #IPL2024 #JioCinemaSports pic.twitter.com/T3eOoUds1r
— JioCinema (@JioCinema) March 26, 2024
ಇದೀಗ ಸಿಎಸ್ಕೆ ತಂಡದ ಇಬ್ಬರು ಹಿರಿಯ ಆಟಗಾರರ ಅದ್ಭುತ ಫೀಲ್ಡಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀಡಿದ 207 ರನ್ಗಳ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಸಿಎಸ್ಕೆ ತಂಡವು 63 ರನ್ಗಳ ಭರ್ಜರಿ ಜಯ ಸಾಧಿಸಿದೆ.