VIDEO: RCB ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ತೆರಳಿದ ಧೋನಿ..!

|

Updated on: May 19, 2024 | 2:55 PM

IPL 2024 RCB vs CSK: ಐಪಿಎಲ್​ನ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಈ ಗೆಲುವಿನ ಬಳಿಕ ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಆರ್​ಸಿಬಿ ಆಟಗಾರರೊಂದಿಗೆ ಹಸ್ತಲಾಘವ ಮಾಡಿರಲಿಲ್ಲ ಎಂಬುದೇ ಅಚ್ಚರಿ. ಇದೀಗ ಧೋನಿಯ ನಡೆಯ ಬಗ್ಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

VIDEO: RCB ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ತೆರಳಿದ ಧೋನಿ..!
MS Dhoni vs RCB
Follow us on

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 27 ರನ್​ಗಳಿಂದ ಗೆದ್ದುಕೊಂಡಿತು. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಗೆದ್ದು ಬೀಗುವ ಮೂಲಕ ಆರ್​ಸಿಬಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಈ ಗೆಲುವಿನ ಬಳಿಕ ಸಿಎಸ್​ಕೆ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಆರ್​ಸಿಬಿ ಆಟಗಾರರೊಂದಿಗೆ ಹಸ್ತಲಾಘವ ಮಾಡಲಿಲ್ಲ ಎಂಬುದೇ ಅಚ್ಚರಿ.

ಪಂದ್ಯ ಮುಗಿದ ಬಳಿಕ ಸಿಎಸ್​ಕೆ ಆಟಗಾರರು ಹಸ್ತಲಾಘವ ನೀಡಲು ಸರದಿ ಸಾಲಿನಲ್ಲಿ ಸಾಗಿದ್ದರು. ಈ ಸಾಲಿನಲ್ಲಿ ಮಹೇಂದ್ರ ಸಿಂಗ್ ಧೋನಿ ಮುಂಚೂಣಿಯಲ್ಲಿದ್ದರು. ಆದರೆ ಅತ್ತ ರಣರೋಚಕ ಪಂದ್ಯದಲ್ಲಿ ಗೆದ್ದ ಖುಷಿಯಲ್ಲಿದ್ದ  ಆರ್​ಸಿಬಿ ಆಟಗಾರರು ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದರು.

ಇದೇ ವೇಳೆ ಆರ್​ಸಿಬಿ ಆಟಗಾರರನ್ನು ಕಾಯದೇ ಮಹೇಂದ್ರ ಸಿಂಗ್ ಧೋನಿ ಪೆವಿಲಿಯನ್​ನತ್ತ ಮರಳಿದ್ದಾರೆ. ಈ ವೇಳೆ ಎದುರಿಗೆ ಸಿಕ್ಕ ಆರ್​ಸಿಬಿ ಸಿಬ್ಬಂದಿಗಳಿಗೆ ಹಸ್ತಲಾಘವ ನೀಡುವ ಮೂಲಕ ಧೋನಿ ಡ್ರೆಸ್ಸಿಂಗ್ ರೂಮ್​ಗೆ ಹೋಗಿದ್ದಾರೆ. ಇದೀಗ ಆರ್​ಸಿಬಿ ಆಟಗಾರರಿಗೆ ಧೋನಿ ಶೇಕ್ ಹ್ಯಾಂಡ್ ನೀಡದೇ ತೆರಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಧೋನಿಯ ನಡೆಗೆ ಆರ್​ಸಿಬಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಐದು ಟ್ರೋಫಿ ಗೆದ್ದ ನಾಯಕನಿಗೆ ಒಂದು ತಂಡದ ಸಂಭ್ರಮ ಮುಗಿಯುವವರೆಗೆ ಕಾಯುವ ಸಹನೆಯಿಲ್ಲವೇ ಎಂದು ಅನೇಕರು ಪ್ರಶ್ನಿಸಿದ್ದಾರೆ. ಇನ್ನು ಕೆಲವರು ಇದು ದೊಡ್ಡವರ ಸಣ್ಣತನ ಎಂದು ಕೂಡ ಕಿಡಿಕಾರಿದ್ದಾರೆ.

ಒಟ್ಟಿನಲ್ಲಿ ಮಹೇಂದ್ರ ಸಿಂಗ್ ಧೋನಿಯ ನಡೆಯ ಬಗ್ಗೆ ಇದೀಗ ಪರ ವಿರೋಧ ಚರ್ಚೆಗಳು ಶುರುವಾಗಿದ್ದು, ಕೆಲವರು ಧೋನಿ ಪರ ವಾದಿಸಿದರೆ, ಮತ್ತೆ ಕೆಲವರು ಸಿಎಸ್​ಕೆ ತಂಡದ ಮಾಜಿ ನಾಯಕನ ನಡೆಗೆ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 

ಪ್ಲೇಆಫ್​ಗೆ ಆರ್​ಸಿಬಿ:

ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್ (54) ಆಕರ್ಷಕ ಅರ್ಧಶತಕ ಸಿಡಿಸಿದರು. ಇನ್ನು ವಿರಾಟ್ ಕೊಹ್ಲಿ (47), ರಜತ್ ಪಾಟಿದಾರ್ (41) ಮತ್ತು ಕ್ಯಾಮರೋನ್ ಗ್ರೀನ್ (38) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಆರ್​ಸಿಬಿ 20 ಓವರ್​ಗಳಲ್ಲಿ 218 ರನ್​ ಕಲೆಹಾಕಿತು.

ಇದನ್ನೂ ಓದಿ: IPL 2024: ಧೋನಿ ಸಿಕ್ಸ್​ನಿಂದ ನಾವು ಗೆದ್ದೆವು ಎಂದ DK

ಈ ಕಠಿಣ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡಕ್ಕೆ ಪ್ಲೇಆಫ್ ಪ್ರವೇಶಿಸಲು ಕೊನೆಯ ಓವರ್​ನಲ್ಲಿ 17 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಅದ್ಭುತ ದಾಳಿ ಸಂಘಟಿಸಿದ ಯಶ್ ದಯಾಳ್ ಕೇವಲ 7 ರನ್ ಮಾತ್ರ ನೀಡಿದರು. ಅಲ್ಲದೆ ಸಿಎಸ್​ಕೆ ತಂಡವನ್ನು 20 ಓವರ್​ಗಳಲ್ಲಿ 191 ರನ್​ಗಳಿಗೆ ನಿಯಂತ್ರಿಸಿದರು. ಈ ಮೂಲಕ ಆರ್​ಸಿಬಿ 27 ರನ್​ಗಳ ಭರ್ಜರಿ ಜಯ ಸಾಧಿಸಿದೆ.

 

Published On - 2:51 pm, Sun, 19 May 24