AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮ್ನಗರದಲ್ಲಿ ರೋಹಿತ್, ಹಾರ್ದಿಕ್ ಮೋಜು ಮಸ್ತಿ: ರಜೆಯ ಮಜಾದಲ್ಲಿ ಮುಂಬೈ ಇಂಡಿಯನ್ಸ್​ ಆಟಗಾರರು

ಒಂದೆಡೆ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಅಭಿಮಾನಿಗಳು ಮೈದಾನದ ಹೊರಗೆ ಮುನಿಸು ಮುಂದುವರಿಸಿದ್ದರೆ ಅತ್ತ ಇಬ್ಬರೂ ಗುಜರಾತ್​ನ ಜಾಮ್ನಗರದಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ಆರು ದಿನಗಳ ವಿರಾಮದಲ್ಲಿ ತಂಡದ ಸದಸ್ಯರು ಪ್ರವಾಸವನ್ನು ಆಸ್ವಾದಿಸುತ್ತಿರುವ ವಿಡಿಯೋವನ್ನು ಎಂಐ ಪೋಸ್ಟ್ ಮಾಡಿದೆ. ಮುಂದಿನ ಪಂದ್ಯವನ್ನು ಮುಂಬೈ ಭಾನುವಾರ ಡೆಲ್ಲಿ ವಿರುದ್ಧ ಸೆಣಸಲಿದೆ.

ಜಾಮ್ನಗರದಲ್ಲಿ ರೋಹಿತ್, ಹಾರ್ದಿಕ್ ಮೋಜು ಮಸ್ತಿ: ರಜೆಯ ಮಜಾದಲ್ಲಿ ಮುಂಬೈ ಇಂಡಿಯನ್ಸ್​ ಆಟಗಾರರು
ಜಾಮ್ನಗರದಲ್ಲಿ ರೋಹಿತ್, ಹಾರ್ದಿಕ್ ಮೋಜು ಮಸ್ತಿ
Ganapathi Sharma
|

Updated on: Apr 05, 2024 | 1:21 PM

Share

ಅಹಮದಾಬಾದ್, ಏಪ್ರಿಲ್ 5: ಐಪಿಎಲ್ ಟೂರ್ನಿಯಲ್ಲಿ (IPL 2024) ಮುಂಬೈ ಇಂಡಿಯನ್ಸ್ (MI) ಮುಂದಿನ ಪಂದ್ಯವನ್ನು ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ಸೆಣಸಲಿದೆ. ಇದಕ್ಕೂ ಮುನ್ನ ತಂಡಕ್ಕೆ ಆರು ದಿನಗಳ ಬಿಡುವು ದೊರೆತಿದ್ದು, ಇಡೀ ತಂಡ ಗುಜರಾತ್​ನ ಜಾಮ್‌ನಗರಕ್ಕೆ ಸಣ್ಣ ಪ್ರವಾಸ ತೆರಳಿದೆ. ಪ್ರವಾಸದ ಸಂದರ್ಭ ನಾಯಕ ಹಾರ್ದಿಕ್ ಪಾಂಡ್ಯ, ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಇತರ ಆಟಗಾರರು ಮೋಜು ಮಸ್ತಿ ನಡೆಸುತ್ತಿರುವ ವಿಡಿಯೋವನ್ನು ಮುಂಬೈ ಇಂಡಿಯನ್ಸ್ ಅಧಿಕೃತ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಅದೀಗ ವೈರಲ್ ಆಗುತ್ತಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಸೋಲಿನ ನಂತರ ಮುಂಬೈ ಇಂಡಿಯನ್ಸ್​ ತಂಡದ ಸದಸ್ಯರು ಗುಜರಾತ್​ಗೆ ತೆರಳಿದ್ದಾರೆ. ಮುಂಬೈ ಇಂಡಿಯನ್ಸ್​ ಹಂಚಿಕೊಂಡಿರುವ ವಿಡಿಯೋ ಕ್ಲಿಪ್‌ನಲ್ಲಿ, ರೋಹಿತ್ ಮತ್ತು ಹಾರ್ದಿಕ್ ಒಬ್ಬರನ್ನೊಬ್ಬರು ತಬ್ಬಿಕೊಳ್ಳುವುದನ್ನು ಕಾಣಬಹುದಾಗಿದೆ. ತಂಡದ ಇತರ ಕೆಲವು ಮಂದಿ ಆಟಗಾರರು ಜಲ ಕ್ರೀಡೆಗಳಲ್ಲಿ ತೊಡಗಿಕೊಂಡು ಆನಂದಿಸುತ್ತಿರುವುದನ್ನು ಕಾಣಬಹುದಾಗಿದೆ.

ಮುಂಬೈ ಇಂಡಿಯನ್ಸ್ ಎಕ್ಸ್ ಪೋಸ್ಟ್

ವಿಶ್ರಾಂತಿ ಪಡೆಯಲು ಮತ್ತು ಕೆಲವು ಜತೆಯಾಗಿ ಉತ್ತಮ ಸಮಯವನ್ನು ಕಳೆಯಲು ಇದು ಒಂದು ಮಾರ್ಗವಾಗಿದೆ ಎಂದು ಎಂಐ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದೆ.

ಪ್ರಸಕ್ತ ಋತುವಿನ ಟೂರ್ನಿಯಲ್ಲಿ ಮುಂಬೈ ಸತತ ಸೋಲಿನಿಂದ ಕಂಗೆಟ್ಟಿದೆ. ಮೂರು ಪಂದ್ಯಗಳಲ್ಲಿ ಸೋಲನುಭವಿಸಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಈ ಮಧ್ಯೆ, ರೋಹಿತ್ ಶರ್ಮಾ ಬದಲು ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನ್ನಾಗಿ ಮಾಡಿದ ಬಗ್ಗೆಯೂ ಬಹಳಷ್ಟು ಚರ್ಚೆಗಳಾಗುತ್ತಿವೆ.

ಇದನ್ನೂ ಓದಿ: ‘ಆರ್​ಸಿಬಿ ಗೆಲ್ಲಬೇಕೆಂದರೆ..’; ಕಿಂಗ್ ಕೊಹ್ಲಿಗೆ ವಿಶೇಷ ಸಲಹೆ ನೀಡಿದ ಎಬಿ ಡಿವಿಲಿಯರ್ಸ್

ಉಭಯ ನಾಯಕರ ಅಭಿಮಾನಿಗಳಿಂದಲೂ ಸಹ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ. ಟೂರ್ನಿ ವೇಳೆ ಕ್ರೀಡಾಂಗಣದಲ್ಲಿ ಮತ್ತು ಹೊರಗೆ ರೋಹಿತ್ ಪರ ಅಭಿಮಾನಿಗಳು ಘೋಷಣೆ ಕೂಗಿದ್ದ ವಿಚಾರ ಇತ್ತೀಚೆಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ನಂತರ ಪಾಂಡ್ಯ ವಿರುದ್ಧ ಘೋಷಣೆ ಕೂಗದಂತೆ ಅಭಿಮಾನಿಗಳಲ್ಲಿ ರೋಹಿತ್ ಮನವಿ ಮಾಡಿದ ಬಗ್ಗೆಯೂ ವರದಿಯಾಗಿತ್ತು. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ರೋಹಿತ್ – ಹಾರ್ದಿಕ್ ಇಬ್ಬರೂ ಖುಷಿಯಿಂದ ತಬ್ಬಿಕೊಂಡಿರುವ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ