17ನೇ ಆವೃತ್ತಿಯ ಐಪಿಎಲ್ನ (IPL 2024) 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Mumbai Indians vs Royal Challengers Bengaluru) ತಂಡಗಳು ಮುಖಾಮುಖಿಯಾಗಿವೆ. ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಸರಣಿಯಲ್ಲಿ ಮೊದಲ ಹಾಗೂ ಕೊನೆಯ ಬಾರಿ ಮುಖಾಮುಖಿಯಾಗಲಿವೆ. ಏಕೆಂದರೆ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿವಿಧ ಗುಂಪುಗಳಲ್ಲಿದ್ದು, ಈ ಸೀಸನ್ನಲ್ಲಿ ಉಭಯ ತಂಡಗಳಿಗೆ ಒಂದು ಪಂದ್ಯವನ್ನು ಮಾತ್ರ ಮೀಸಲಿಡಲಾಗಿದೆ. ಅಲ್ಲದೆ ಸತತ ಸೋಲುಗಳಿಂದ ಕಂಗೆಟ್ಟಿರುವ ಉಭಯ ತಂಡಗಳಿಗೂ ಗೆಲುವು ಬಹಳ ಮುಖ್ಯ. ಇಲ್ಲದಿದ್ದರೆ, ಎರಡೂ ತಂಡಗಳ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣಗೊಳ್ಳಲಿದೆ.ಇನ್ನು ಈ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಐಪಿಎಲ್‌ನಲ್ಲಿ ಇಲ್ಲಿಯವರೆಗೆ ಎರಡು ತಂಡಗಳ ನಡುವೆ 32 ಪಂದ್ಯಗಳು ನಡೆದಿವೆ, ಅದರಲ್ಲಿ ಮುಂಬೈ 18 ಪಂದ್ಯಗಳನ್ನು ಗೆದ್ದಿದ್ದರೆ ಬೆಂಗಳೂರು 14 ಪಂದ್ಯಗಳನ್ನು ಗೆದ್ದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಇದುವರೆಗೆ ನಡೆದ ಪಂದ್ಯಗಳ ಬಗ್ಗೆ ಹೇಳುವುದಾದರೆ, ಉಭಯ ತಂಡಗಳ ನಡುವೆ ಇದುವರೆಗೆ 10 ಪಂದ್ಯಗಳು ನಡೆದಿದ್ದು, ಅದರಲ್ಲಿ 7 ಪಂದ್ಯಗಳನ್ನು ಮುಂಬೈ ಇಂಡಿಯನ್ಸ್ ಮತ್ತು 3 ಪಂದ್ಯಗಳನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದಿದೆ. ಇದರರ್ಥ ಐಪಿಎಲ್‌ನಲ್ಲಿ ಆರ್ಸಿಬಿ ಎದುರು ಮುಂಬೈ ಮೇಲುಗೈ ಸಾಧಿಸಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
MI vs RCB Live Score, IPL 2024: ಆರ್ಸಿಬಿ 2ನೇ ವಿಕೆಟ್ ಪತನ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ರೀಸ್ ಟೋಪ್ಲಿ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಮೊಹಮ್ಮದ್ ನಬಿ, ಶ್ರೇಯಸ್ ಗೋಪಾಲ್, ಜಸ್ಪ್ರೀತ್ ಬುಮ್ರಾ, ಜೆರಾಲ್ಡ್ ಕೋಟ್ಜಿ, ಆಕಾಶ್ ಮಧ್ವಾಲ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:10 pm, Thu, 11 April 24