IPL 2024: ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

IPL 2024: ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ 14 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 4 ಮ್ಯಾಚ್​ಗಳಲ್ಲಿ ಮಾತ್ರ. ಉಳಿದ 10 ಪಂದ್ಯಗಳಲ್ಲೂ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಕೇವಲ 8 ಅಂಕಗಳನ್ನು ಕಲೆಹಾಕಿರುವ ಹಾರ್ದಿಕ್ ಪಾಂಡ್ಯ ಪಡೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

IPL 2024: ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್
Mumbai Indians
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 18, 2024 | 7:31 AM

ಹೊಸ ನಾಯಕ, ಹೊಸ ಹುರುಪಿನೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಕಣಕ್ಕಿಳಿದಿದ್ದ ಮುಂಬೈ ಇಂಡಿಯನ್ಸ್ (Mumbai Indians) ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದೊಂದಿಗೆ ಅಭಿಯಾನ ಅಂತ್ಯಗೊಳಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ (ಮೇ 17) ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲೂ ಹಾರ್ದಿಕ್ ಪಾಂಡ್ಯ ಪಡೆ ಸೋಲನುಭವಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಕೆಎಲ್ ರಾಹುಲ್ (55) ಹಾಗೂ ನಿಕೋಲಸ್ ಪೂರನ್ (75) ಭರ್ಜರಿ ಅರ್ಧಶತಕ ಪೂರೈಸಿದರು. ಈ ಮೂಲಕ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 214 ರನ್ ಕಲೆಹಾಕಿದರು.

215 ರನ್​ಗಳ ಕಠಿಣ ಗುರಿ ಪಡೆದ ಮುಂಬೈ ಇಂಡಿಯನ್ಸ್ ತಂಡಕ್ಕೆ ರೋಹಿತ್ ಶರ್ಮಾ (68) ಉತ್ತಮ ಆರಂಭ ಒದಗಿಸಿದ್ದರು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅಂತಿಮ ಹಂತದಲ್ಲಿ ಅಬ್ಬರಿಸಿದ ನಮನ್ ಧಿರ್ 28 ಎಸೆತಗಳಲ್ಲಿ 5 ಸಿಕ್ಸ್​ಗಳೊಂದಿಗೆ ಅಜೇಯ 62 ರನ್ ಬಾರಿಸಿದರೂ ತಂಡವನ್ನು ಗುರಿ ತಲುಪಿಸಲಾಗಲಿಲ್ಲ.

ಅಂತಿಮವಾಗಿ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕುವ ಮೂಲಕ ಮುಂಬೈ ಇಂಡಿಯನ್ಸ್ ತಂಡ 18 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲಿನೊಂದಿಗೆ ಹಾರ್ದಿಕ್ ಪಾಂಡ್ಯ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿದೆ.

ಹತ್ತನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್:

ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ 14 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 4 ಮ್ಯಾಚ್​ಗಳಲ್ಲಿ ಮಾತ್ರ. ಉಳಿದ 10 ಪಂದ್ಯಗಳಲ್ಲೂ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಕೇವಲ 8 ಅಂಕಗಳನ್ನು ಕಲೆಹಾಕಿರುವ ಹಾರ್ದಿಕ್ ಪಾಂಡ್ಯ ಪಡೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಈ ಮೂಲಕ 2022ರ ಬಳಿಕ ಮುಂಬೈ ಇಂಡಿಯನ್ಸ್ ತಂಡವು 2ನೇ ಬಾರಿಗೆ ಬರೋಬ್ಬರಿ 10 ಪಂದ್ಯಗಳಲ್ಲಿ ಸೋಲನುಭವಿಸಿದೆ. ಅದು ಕೂಡ ಹಾರ್ದಿಕ್ ಪಾಂಡ್ಯ ಅವರ ಚೊಚ್ಚಲ ನಾಯಕತ್ವದಲ್ಲಿ ಎಂಬುದು ವಿಶೇಷ.

ಇದನ್ನೂ ಓದಿ: Rohit Sharma: ಇದುವೇ ಲಾಸ್ಟ್​… ಮುಂಬೈ ಇಂಡಿಯನ್ಸ್​ ತಂಡಕ್ಕೆ ರೋಹಿತ್ ಶರ್ಮಾ ಗುಡ್ ಬೈ..?

ಮುಂಬೈ ಇಂಡಿಯನ್ಸ್ ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನೆಹಲ್ ವಧೇರಾ, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಪಿಯೂಷ್ ಚಾವ್ಲಾ, ಲ್ಯೂಕ್ ವುಡ್, ಜಸ್​ಪ್ರೀತ್ ಬುಮ್ರಾ, ನುವಾನ್ ತುಷಾರ, ನಮನ್ ಧೀರ್, ಶಮ್ಸ್ ಮುಲಾನಿ, ಡೆವಾಲ್ಡ್ ಬ್ರೆವಿಸ್, ಕುಮಾರ್ ಕಾರ್ತಿಕೇಯ, ಶ್ರೇಯಸ್ ಗೋಪಾಲ್, ಹಾರ್ವಿಕ್ ದೇಸಾಯಿ, ಜೆರಾಲ್ಡ್ ಕೋಟ್ಝಿಯ, ರೊಮಾರಿಯೋ ಶೆಫರ್ಡ್, ಅರ್ಜುನ್ ತೆಂಡೂಲ್ಕರ್, ಶಿವಾಲಿಕ್ ಶರ್ಮಾ, ಅನ್ಶುಲ್ ಕಾಂಬೋಜ್, ಆಕಾಶ್ ಮಧ್ವಲ್, ಕ್ವೇನಾ ಮಫಕಾ.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್