IPL 2024 Points Table: ಐಪಿಎಲ್ 2024 ಪಾಯಿಂಟ್ಸ್ ಟೇಬಲ್​ನಲ್ಲಿ ಬಿಗ್ ಚೇಂಜ್: ಅಗ್ರಸ್ಥಾನದಿಂದ ಸಿಎಸ್​ಕೆ ಔಟ್

ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ 2024 ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಒಂದು ಪಂದ್ಯದಲ್ಲಿ ಜಯ ಸಾಧಿಸಿ ಎರಡು ಅಂಕ ಪಡೆದು +0.779 ರನ್​ರೇಟ್ ಹೊಂದಿದೆ.

IPL 2024 Points Table: ಐಪಿಎಲ್ 2024 ಪಾಯಿಂಟ್ಸ್ ಟೇಬಲ್​ನಲ್ಲಿ ಬಿಗ್ ಚೇಂಜ್: ಅಗ್ರಸ್ಥಾನದಿಂದ ಸಿಎಸ್​ಕೆ ಔಟ್
IPL 2024 Points Table
Follow us
|

Updated on: Mar 25, 2024 | 7:33 AM

ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ಟೂರ್ನಿ ಆರಂಭವಾಗಿ ಮೂರು ದಿನಗಳು ಕಳಿದಿದ್ದು, ಈವರೆಗೆ ಒಟ್ಟು ಐದು ಪಂದ್ಯಗಳು ನಡೆದಿವೆ. ಭಾನುವಾರ ಎರಡನೇ ಡಬಲ್ ಹೆಡ್ಡರ್ ಆಯೋಜಿಸಲಾಗಿತ್ತು. ಮಧ್ಯಾಹ್ನ ನಡೆದ ಪಂದ್ಯದಲ್ಲಿ ಲಖನೌ ವಿರುದ್ಧ ರಾಜಸ್ಥಾನ್ ರಾಯಲ್ಸ್ ಜಯ ಸಾಧಿಸಿದರೆ, ನಂತರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಜಯ ಕಂಡಿತು. ಇಂದು ಐಪಿಎಲ್​ನಲ್ಲಿ ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಹೈವೋಲ್ಟೇಜ್ ಆಯೋಜಿಸಲಾಗಿದೆ. ಇದೀಗ ಐಪಿಎಲ್ 2024 ಪಾಯಿಂಟ್ಸ್ ಟೇಬಲ್ ಹೇಗಿದೆ ನೋಡೋಣ.

  • ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಆಡಿದ ಒಂದು ಪಂದ್ಯದಲ್ಲಿ ದೊಡ್ಡ ಅಂತರದ ಜಯ ಸಾಧಿಸಿ ಎರಡು ಅಂಕ ಪಡೆದು +1.000 ರನ್​ರೇಟ್ ಹೊಂದಿದೆ.
  • ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗ್ರಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಒಂದು ಪಂದ್ಯದಲ್ಲಿ ಜಯ ಸಾಧಿಸಿ ಎರಡು ಅಂಕ ಪಡೆದು +0.779 ರನ್​ರೇಟ್ ಹೊಂದಿದೆ.
  • ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಆಡಿದ ಒಂದು ಪಂದ್ಯದಲ್ಲಿ ಜಯ ಸಾಧಿಸಿ 2 ಪಾಯಿಂಟ್ಸ್ ಪಡೆದು ಮೂರನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ +0.455 ಆಗಿದೆ.
  • ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಆಡಿದ ಒಂದು ಪಂದ್ಯದಲ್ಲಿ ಜಯ ಸಾಧಿಸಿ 2 ಪಾಯಿಂಟ್ಸ್ ಪಡೆದು ನಾಲ್ಕನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ +0.300 ಆಗಿದೆ.

ಇಂದು RCB vs PBKS ಪಂದ್ಯ: ಫಾಫ್ ಪಡೆಯಲ್ಲಿ 2 ಬದಲಾವಣೆ ಖಚಿತ, ಪ್ಲೇಯಿಂಗ್ XI ನೋಡಿ

  • ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕೂಡ ಆಡಿದ ಒಂದು ಪಂದ್ಯದಲ್ಲಿ ಜಯ ಸಾಧಿಸಿ 2 ಪಾಯಿಂಟ್ಸ್ ಪಡೆದು ಐದನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ +0.200 ಆಗಿದೆ.
  • ಇನ್ನು ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್​ರೈಸರ್ಸ್ ಹೈದರಾಬಾದ್ ತಂಡ ಆಡಿದ ಒಂದು ಪಂದ್ಯದಲ್ಲಿ ಸೋಲು ಕಂಡು ಯಾವುದೇ ಪಾಯಿಂಟ್ಸ್ ಪಡೆಯದೆ ಆರನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -0.200 ಆಗಿದೆ.
  • ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಕೂಡ ಆಡಿದ ಒಂದು ಪಂದ್ಯದಲ್ಲಿ ಸೋಲು ಕಂಡು ಯಾವುದೇ ಪಾಯಿಂಟ್ಸ್ ಪಡೆಯದೆ ಏಳನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -0.300 ಆಗಿದೆ.
  • ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿದ ಒಂದು ಪಂದ್ಯದಲ್ಲಿ ಸೋಲು ಕಂಡು ಯಾವುದೇ ಪಾಯಿಂಟ್ಸ್ ಪಡೆಯದೆ ಎಂಟನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -0.455 ಆಗಿದೆ.
  • ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿದ ಒಂದು ಪಂದ್ಯದಲ್ಲಿ ಸೋಲು ಕಂಡು ಯಾವುದೇ ಪಾಯಿಂಟ್ಸ್ ಪಡೆಯದೆ ಒಂಬತ್ತನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -0.779 ಆಗಿದೆ.
  • ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ತಂಡ ಆಡಿದ ಒಂದು ಪಂದ್ಯದಲ್ಲಿ ಸೋಲು ಕಂಡು ಖಾತೆ ತೆರೆಯದೆ ಹತ್ತನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -1.000 ಆಗಿದೆ.

ಪರ್ಪಲ್-ಕ್ಯಾಪ್ ಅಂಕಪಟ್ಟಿಯಲ್ಲಿ, ಸಿಎಸ್​ಕೆ ತಂಡದ ಮುಸ್ತಫಿಜುರ್ ರೆಹಮಾನ್ ಅವರು ಆರ್​ಸಿಬಿ ವಿರುದ್ಧ ನಾಲ್ಕು- ವಿಕೆಟ್ ಪಡೆದು ಅಗ್ರ ಸ್ಥಾನವನ್ನು ಕಾಪಾಡಿಕೊಂಡಿದ್ದಾರೆ. ಅವರ ಹಿಂದೆ ಡೆತ್-ಓವರ್‌ಗಳ ಸ್ಪೆಷಲಿಸ್ಟ್ ಜಸ್​ಪ್ರಿತ್ ಬುಮ್ರಾ ಅವರಿದ್ದು, ಜಿಟಿ ವಿರುದ್ಧ ಮೂರು ವಿಕೆಟ್ ಕಿತ್ತಿದ್ದರು. ಹಾಗೆಯೆ, ಟಿ. ನಟರಾಜನ್ ಕೂಡ ಕೆಕೆಆರ್ ವಿರುದ್ಧ ಮೂರು ವಿಕೆಟ್‌ಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನು ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ, ರಾಜಸ್ಥಾನ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅಗ್ರಸ್ಥಾನದಲ್ಲಿದ್ದಾರೆ. ಇವರು ಆಡಿರುವ ಒಂದು ಪಂದ್ಯದಲ್ಲಿ ಅಜೇಯ 82 ರನ್ ಸಿಡಿಸಿದ್ದಾರೆ. ಕೆಕೆಆರ್‌ನ ಆಂಡ್ರೆ ರಸೆಲ್ ಕೇವಲ 25 ಎಸೆತಗಳಲ್ಲಿ 64 ರನ್ ಗಳಿಸಿ ಆರೆಂಜ್ ಕ್ಯಾಪ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಲಖನೌ ತಂಡದ ನಿಕೋಲಸ್ ಪೂರನ್ ಇದ್ದು ಇವರು ಕೂಡ 54 ರನ್ ಕಲೆಹಾಕಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ