AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರಾಜಸ್ಥಾನ್ ರಾಯಲ್ಸ್​ಗೆ ಸೋಲುಣಿಸಿದ ಪಂಜಾಬ್ ಕಿಂಗ್ಸ್​

IPL 2024: ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 28 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ 16 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಪಂಜಾಬ್ ಕಿಂಗ್ಸ್ 12 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಉತ್ತಮ ಪೈಪೋಟಿ ನೀಡುವಲ್ಲಿ ಪಂಜಾಬ್ ಕಿಂಗ್ಸ್ ತಂಡ ಯಶಸ್ವಿಯಾಗುತ್ತಾ ಬಂದಿದೆ.

IPL 2024: ರಾಜಸ್ಥಾನ್ ರಾಯಲ್ಸ್​ಗೆ ಸೋಲುಣಿಸಿದ ಪಂಜಾಬ್ ಕಿಂಗ್ಸ್​
PBKS
ಝಾಹಿರ್ ಯೂಸುಫ್
|

Updated on:May 15, 2024 | 11:19 PM

Share

ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 65ನೇ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ್ ರಾಯಲ್ಸ್​ ತಂಡಕ್ಕೆ ಪಂಜಾಬ್ ಕಿಂಗ್ಸ್ ಸೋಲುಣಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನ್ ರಾಯಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಕೇವಲ 4 ರನ್ ಬಾರಿಸಿ ಮೊದಲ ಓವರ್​ನಲ್ಲೇ ವಿಕೆಟ್ ಒಪ್ಪಿಸಿದ್ದರು.

ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 18 ರನ್​ಗಳಿಸಿ ನಿರ್ಗಮಿಸಿದರು. ಹಾಗೆಯೇ ಜೋಸ್ ಬಟ್ಲರ್​ ಬದಲಿಗೆ ಆರಂಭಿಕನಾಗಿ ಸ್ಥಾನ ಪಡೆದ ಟಾಮ್ ಕೊಹ್ಲರ್ (18) ಮೋಡಿ ಮಾಡುವಲ್ಲಿ ವಿಫಲರಾದರು.

ಈ ಹಂತದಲ್ಲಿ ಜೊತೆಗೂಡಿದ ರಿಯಾನ್ ಪರಾಗ್ ಹಾಗೂ ರವಿಚಂದ್ರನ್ ಅಶ್ವಿನ್ ಅರ್ಧಶತಕದ ಜೊತೆಯಾಟವಾಡಿದರು. ಆದರೆ 28 ರನ್​ಗಳಿಸಿ ಅಶ್ವಿನ್ ಕೂಡ ನಿರ್ಗಮಿಸಿದರು.

ಇದಾಗ್ಯೂ ಏಕಾಂಗಿ ಹೋರಾಟ ಮುಂದುವರೆಸಿದ ರಿಯಾನ್ ಪರಾಗ್ 34 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 48 ರನ್ ಬಾರಿಸಿ ಕೊನೆಯ ಓವರ್​ನಲ್ಲಿ ಔಟಾದರು. ಇನ್ನು ಅಂತಿಮ ಓವರ್​ಗಳ ವೇಳೆ ಟ್ರೆಂಟ್ ಬೌಲ್ಟ್ 12 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 144 ರನ್ ಕಲೆಹಾಕಿತು.

145 ರನ್​ಗಳ ಸುಲಭ ಗುರಿ ಪಡೆದ ಪಂಜಾಬ್ ಕಿಂಗ್ಸ್ ಕೂಡ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಮೊದಲ ಓವರ್​ನಲ್ಲೇ ಪ್ರಭ್​ಸಿಮ್ರಾನ್ ಸಿಂಗ್ (4) ವಿಕೆಟ್ ಕಬಳಿಸಿ ಟ್ರೆಂಟ್ ಬೌಲ್ಟ್ ಮೊದಲ ಯಶಸ್ಸು ತಂದುಕೊಟ್ಟರು.

ಈ ಹಂತದಲ್ಲಿ ಕಣಕ್ಕಿಳಿದ ರೈಲಿ ರೊಸೊವ್ 13 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 22 ರನ್​ ಬಾರಿಸಿ ನಿರ್ಗಮಿಸಿದರು. ಇದರ ಬೆನ್ನಲ್ಲೇ ಶಶಾಂಕ್ ಸಿಂಗ್ (0) ವಿಕೆಟ್ ಪಡೆಯುವಲ್ಲಿ ಅವೇಶ್ ಖಾನ್ ಯಶಸ್ವಿಯಾದರು. ಇನ್ನು ಜಾನಿ ಬೈರ್​ಸ್ಟೋವ್ (14) ಚಹಲ್ ಸ್ಪಿನ್ ಮೋಡಿಗೆ ಔಟಾದರು.

ಈ ಹಂತದಲ್ಲಿ ಜೊತೆಯಾದ ಸ್ಯಾಮ್ ಕರನ್ ಹಾಗೂ ಜಿತೇಶ್ ಶರ್ಮಾ 63 ರನ್​ಗಳ ಜೊತೆಯಾಟವಾಡಿದರು. ಈ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಪರಿಣಾಮ ಅಂತಿಮ 5 ಓವರ್​ಗಳಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಕೇವಲ 42 ರನ್​ಗಳ ಅವಶ್ಯಕತೆಯಿತ್ತು.

ಈ ವೇಳೆ ಬಿರುಸಿನ ಹೊಡೆತಕ್ಕೆ ಮುಂದಾಗಿ ಜಿತೇಶ್ ಶರ್ಮಾ (22) ವಿಕೆಟ್ ಕೈಚೆಲ್ಲಿದರು. ಇದಾಗ್ಯೂ ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ಸ್ಯಾಮ್ ಕರನ್ 38 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ ಅಜೇಯ 63 ರನ್​ ಬಾರಿಸುವ ಮೂಲಕ ಸ್ಯಾಮ್ ಕರನ್ 18.5 ಓವರ್​ಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 5 ವಿಕೆಟ್​ಗಳ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಿದೆ. ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್​ 10ನೇ ಸ್ಥಾನದಲ್ಲಿತ್ತು. ಇದೀಗ ಒಂದು ಸ್ಥಾನ ಜಿಗಿತ ಕಾಣುವುದರೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ.

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್​ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಅವೇಶ್ ಖಾನ್, ಯುಜ್ವೇಂದ್ರ ಚಹಲ್.

ಇದನ್ನೂ ಓದಿ: IPL 2024: RCB vs CSK ಪಂದ್ಯಕ್ಕೆ ಐವರು ಆಟಗಾರರು ಅಲಭ್ಯ..!

ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಪ್ರಭ್‌ಸಿಮ್ರಾನ್ ಸಿಂಗ್, ಜಾನಿ ಬೈರ್‌ಸ್ಟೋವ್, ರಿಲೀ ರೊಸೊವ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ, ಸ್ಯಾಮ್ ಕರನ್ (ನಾಯಕ), ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ನಾಥನ್ ಎಲ್ಲಿಸ್, ರಾಹುಲ್ ಚಹರ್, ಅರ್ಶ್‌ದೀಪ್ ಸಿಂಗ್.

Published On - 11:17 pm, Wed, 15 May 24

Follow Us
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!