AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಅಹಮದಾಬಾದ್‌ನಲ್ಲಿ ನಾಲ್ವರು ಶಸ್ತ್ರಾಸ್ತ್ರಧಾರಿಗಳ ಬಂಧನ! ಅಭ್ಯಾಸ ರದ್ದುಗೊಳಿಸಿದ ಆರ್​ಸಿಬಿ..!

IPL 2024, RCB vs RR: ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಭಯೋತ್ಪಾದಕ ಚಟುವಟಿಕೆಗಳ ಶಂಕೆ ಮೇರೆಗೆ ಗುಜರಾತ್ ಪೊಲೀಸರು ನಾಲ್ವರು ಶಸ್ತ್ರಾಸ್ತ್ರಧಾರಿಗಳನ್ನು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಆದ್ದರಿಂದ ವಿರಾಟ್ ಕೊಹ್ಲಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆರ್‌ಸಿಬಿ ಅಭ್ಯಾಸವನ್ನು ರದ್ದುಗೊಳಿಸಿದೆ.

Breaking: ಅಹಮದಾಬಾದ್‌ನಲ್ಲಿ ನಾಲ್ವರು ಶಸ್ತ್ರಾಸ್ತ್ರಧಾರಿಗಳ ಬಂಧನ! ಅಭ್ಯಾಸ ರದ್ದುಗೊಳಿಸಿದ ಆರ್​ಸಿಬಿ..!
ಆರ್​ಸಿಬಿ
ಪೃಥ್ವಿಶಂಕರ
|

Updated on:May 22, 2024 | 3:32 PM

Share

ಐಪಿಎಲ್ 2024 (IPL 2024) ರ ಎಲಿಮಿನೇಟರ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ನಡುವೆ ಇಂದು ನಡೆಯಲಿದೆ. ಈ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾತ್ರಿ 7.30 ರಿಂದ ಆರಂಭವಾಗಲಿದೆ. ಒಂದೆಡೆ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದರೆ, ಮತ್ತೊಂದೆಡೆ ವಿರಾಟ್ ಕೊಹ್ಲಿಯ (Virat Kohli) ಸುರಕ್ಷತೆ ಆರ್​ಸಿಬಿಗೆ ದೊಡ್ಡ ಆತಂಕ ತಂದೊಡ್ಡಿದೆ. ಹೀಗಾಗಿ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆರ್‌ಸಿಬಿ (RCB) ಅಭ್ಯಾಸವನ್ನು ರದ್ದುಗೊಳಿಸಿದೆ. ಅಲ್ಲದೆ ಪತ್ರಿಕಾಗೋಷ್ಠಿಯನ್ನು ಸಹ ನಡೆಸಿಲ್ಲ. ಮಹತ್ವದ ಪಂದ್ಯಕ್ಕೂ ಮುನ್ನ ಫ್ರಾಂಚೈಸಿಯ ಈ ನಡೆ ಆರ್‌ಸಿಬಿ ಅಭಿಮಾನಿಗಳ ಮನದಲ್ಲಿ ಹಲವು ಪ್ರಶ್ನೆಗಳನ್ನು ಮೂಡಿಸಿದೆ.

ಎರಡೂ ತಂಡಗಳಿಂದ ಪತ್ರಿಕಾಗೋಷ್ಠಿ ರದ್ದು

ಆರ್‌ಸಿಬಿ ಮತ್ತು ರಾಜಸ್ಥಾನ್ ನಡುವಿನ ಪಂದ್ಯಕ್ಕಾಗಿ ಉಭಯ ತಂಡಗಳು ಸೋಮವಾರವೇ ಅಹಮದಾಬಾದ್‌ಗೆ ತಲುಪಿದ್ದವು. ಆರ್​ಸಿಬಿ ಕಳೆದ ಶನಿವಾರ ಚೆನ್ನೈ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಿತ್ತು. ಆ ನಂತರ ತಂಡದ ಆಟಗಾರರು ಭಾನುವಾರ ಮತ್ತು ಸೋಮವಾರ ವಿಶ್ರಾಂತಿ ಪಡೆದಿದ್ದರು. ಇದರ ಹೊರತಾಗಿಯೂ, ಅಹಮದಾಬಾದ್ ತಲುಪಿದ ನಂತರ ಆರ್​ಸಿಬಿ, ಎಲಿಮಿನೇಟರ್ ಪಂದ್ಯದ ಮೊದಲು ಅಭ್ಯಾಸದ ಅವಧಿಯನ್ನು ರದ್ದುಗೊಳಿಸಿತು. ವಿರಾಟ್ ಕೊಹ್ಲಿಯ ಸುರಕ್ಷತೆಯ ದೃಷ್ಟಿಯಿಂದ ಆರ್‌ಸಿಬಿ ತನ್ನ ಅಭ್ಯಾಸವನ್ನು ರದ್ದುಗೊಳಿಸಿದ್ದು, ಎರಡೂ ತಂಡಗಳು ಪತ್ರಿಕಾಗೋಷ್ಠಿ ನಡೆಸಿಲ್ಲ ಎಂದು ಗುಜರಾತ್ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಬಂಗಾಳಿ ದೈನಿಕ ಆನಂದಬಜಾರ್ ಪತ್ರಿಕೆ ಈ ಬಗ್ಗೆ ವರದಿ ಮಾಡಿದೆ.

ವಿಮಾನ ನಿಲ್ದಾಣದಲ್ಲಿ 4 ಶಂಕಿತರ ಬಂಧನ

ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಭಯೋತ್ಪಾದಕ ಚಟುವಟಿಕೆಗಳ ಶಂಕೆ ಮೇರೆಗೆ ಗುಜರಾತ್ ಪೊಲೀಸರು ನಾಲ್ವರು ಶಸ್ತ್ರಾಸ್ತ್ರಧಾರಿಗಳನ್ನು ಸೋಮವಾರ ರಾತ್ರಿ ಬಂಧಿಸಿದ್ದಾರೆ. ನಾಲ್ವರು ಆರೋಪಿಗಳ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಅವರಿಂದ ಶಸ್ತ್ರಾಸ್ತ್ರಗಳು, ಅನುಮಾನಾಸ್ಪದ ವೀಡಿಯೊಗಳು ಮತ್ತು ಪಠ್ಯ ಸಂದೇಶಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.

ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ನಾಲ್ವರು ಶಂಕಿತರ ಬಂಧನದಿಂದಾಗಿ ಆರ್‌ಸಿಬಿ ಟೆನ್ಷನ್‌ಗೆ ಒಳಗಾಗಿದ್ದು, ಈ ಕಾರಣಕ್ಕಾಗಿ ವಿರಾಟ್ ಕೊಹ್ಲಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆರ್‌ಸಿಬಿ ಅಭ್ಯಾಸವನ್ನು ರದ್ದುಗೊಳಿಸಿದೆ. ಆದರೆ, ಈ ಘಟನೆಯ ನಂತರವೂ ರಾಜಸ್ಥಾನ ತಂಡ ಮೈದಾನದಲ್ಲಿ ಅಭ್ಯಾಸ ನಡೆಸಿದೆ. ಮತ್ತೊಂದೆಡೆ, ಎರಡೂ ತಂಡಗಳು ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸಿವೆ. ಅಭ್ಯಾಸದ ಅವಧಿಯನ್ನು ಏಕೆ ರದ್ದುಗೊಳಿಸಲಾಯಿತು ಎಂಬುದರ ಬ್ಗಗೆ ಆರ್​ಸಿಬಿ ಫ್ರಾಂಚೈಸಿ ಯಾವುದೇ ಅಧಿಕೃತ ಹೇಳಿಕೆಯಲ್ಲಿ ತಿಳಿಸದಿದ್ದರೂ, ವಿರಾಟ್ ಅವರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಭ್ಯಾಸವನ್ನು ರದ್ದುಗೊಳಿಸಲಾಗಿದೆ ಎಂದು ವರದಿ ಹೇಳುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Wed, 22 May 24

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ