AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಡೆಲ್ಲಿ ಮಣಿಸಿ ಡ್ರೆಸ್ಸಿಂಗ್ ರೂಂನಲ್ಲಿ ಕುಣಿದು ಕುಪ್ಪಳಿಸಿದ ಆರ್​ಸಿಬಿ ಬಾಯ್ಸ್; ವಿಡಿಯೋ ನೋಡಿ

IPL 2024: ಡೆಲ್ಲಿ ವಿರುದ್ಧದ ಗೆಲುವು ಆರ್​ಸಿಬಿಗೆ ಬಹಳ ಅವಶ್ಯಕವಾಗಿತ್ತು. ಒಂದು ವೇಳೆ ಡೆಲ್ಲಿ ವಿರುದ್ಧ ಅರ್​ಸಿಬಿ ಸೋತಿದ್ದರೆ ಪ್ಲೇಆಫ್‌ ಬಾಗಿಲು ಬಹುತೇಕ ಮುಚ್ಚುತ್ತಿತ್ತು. ಆರ್‌ಸಿಬಿ ಆಟಗಾರರಿಗೆ ಈ ಬಗ್ಗೆ ಸಂಪೂರ್ಣ ಅರಿವಿತ್ತು. ಹೀಗಾಗಿ ಗೆಲುವಿನ ನಂತರ ತಂಡದ ಆಟಗಾರರು ಡ್ರೆಸ್ಸಿಂಗ್ ರೂಂನಲ್ಲಿ ವಿಜಯೋತ್ಸವ ಆಚರಿಸಿದರು.

IPL 2024: ಡೆಲ್ಲಿ ಮಣಿಸಿ ಡ್ರೆಸ್ಸಿಂಗ್ ರೂಂನಲ್ಲಿ ಕುಣಿದು ಕುಪ್ಪಳಿಸಿದ ಆರ್​ಸಿಬಿ ಬಾಯ್ಸ್; ವಿಡಿಯೋ ನೋಡಿ
ಆರ್​ಸಿಬಿ
ಪೃಥ್ವಿಶಂಕರ
|

Updated on:May 13, 2024 | 3:59 PM

Share

ಫಾಫ್ ಡುಪ್ಲೆಸಿಸ್ (Faf du Plessis) ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭಾನುವಾರ ತವರು ನೆಲದಲ್ಲಿ ನಡೆದ ಹೈವೋಲ್ಟೇಜ್ ಕದನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Royal Challengers Bengaluru vs Delhi Capitals) ವಿರುದ್ಧ ಭರ್ಜರಿ ಗೆಲುವು ದಾಖಲಿಸುವ ಮೂಲಕ ಪ್ಲೇಆಫ್ ಕನಸನ್ನು ಇನ್ನು ಜೀವಂತವಾಗಿರಿಸಿಕೊಂಡಿದೆ. ಲೀಗ್​ನಲ್ಲಿ ಇದು ಆರ್‌ಸಿಬಿಯ (RCB) ಸತತ ಐದನೇ ಗೆಲುವಾಗಿದ್ದು, ಒಟ್ಟು 6 ಗೆಲುವುಗಳೊಂದಿಗೆ 12 ಅಂಕ ಸಂಪಾಧಿಸಿದೆ. ವಾಸ್ತವವಾಗಿ ಲೀಗ್​ನಲ್ಲಿ ಆರ್​ಸಿಬಿಗೆ ಉತ್ತಮ ಆರಂಭ ಸಿಗಲಿಲ್ಲ. ಸತತ ಸೋಲುಗಳಿಂದ ಕಂಗೆಟ್ಟಿದ ಫಾಫ್ ಪಡೆ ಸತತ ಆರು ಪಂದ್ಯಗಳಲ್ಲಿ ಸೋತಿತ್ತು. ಹೀಗಾಗಿ ತಂಡ ಆರಂಭದಲ್ಲೇ ಪ್ಲೇಆಫ್ ತಲುಪುವ ಹಾದಿಯನ್ನು ದುರ್ಬಲಗೊಳಿಸಿಕೊಂಡಿತ್ತು. ಆದರೆ, ಸತತ ಸೋಲಿನ ಬಳಿಕ ಆರ್‌ಸಿಬಿ ತನ್ನ ಆಟದ ಶೈಲಿಯನ್ನು ಬದಲಿಸಿ ಗೆಲುವಿನ ಹಾದಿಗೆ ಮರಳುವಲ್ಲಿ ಯಶಸ್ವಿಯಾಗಿತ್ತು.

ಹುಚ್ಚೆದ್ದು ಕುಣಿದ ಆರ್​ಸಿಬಿ ಬಾಯ್ಸ್

ಡೆಲ್ಲಿ ವಿರುದ್ಧದ ಗೆಲುವು ಆರ್​ಸಿಬಿಗೆ ಬಹಳ ಅವಶ್ಯಕವಾಗಿತ್ತು. ಒಂದು ವೇಳೆ ಡೆಲ್ಲಿ ವಿರುದ್ಧ ಅರ್​ಸಿಬಿ ಸೋತಿದ್ದರೆ ಪ್ಲೇಆಫ್‌ ಬಾಗಿಲು ಬಹುತೇಕ ಮುಚ್ಚುತ್ತಿತ್ತು. ಆರ್‌ಸಿಬಿ ಆಟಗಾರರಿಗೆ ಈ ಬಗ್ಗೆ ಸಂಪೂರ್ಣ ಅರಿವಿತ್ತು. ಹೀಗಾಗಿ ಗೆಲುವಿನ ನಂತರ ತಂಡದ ಆಟಗಾರರು ಡ್ರೆಸ್ಸಿಂಗ್ ರೂಂನಲ್ಲಿ ವಿಜಯೋತ್ಸವ ಆಚರಿಸಿದರು. ಅದ್ಭುತ ಪ್ರದರ್ಶನ ನೀಡಿದ ತಂಡದ ಪ್ರತಿಯೊಬ್ಬ ಸದಸ್ಯರನ್ನು ಆರ್‌ಸಿಬಿ ಕೋಚಿಂಗ್ ಸಿಬ್ಬಂದಿ ಶ್ಲಾಘಿಸಿದರು. ಇದರ ವೀಡಿಯೊವನ್ನು ಫ್ರಾಂಚೈಸಿ ತನ್ನ ಸೋಶಿಯಲ್ ಮೀಡಿಯಾ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದೆ. ಇದರಲ್ಲಿ ಕ್ಯಾಮರೂನ್ ಗ್ರೀನ್ ಮತ್ತು ರಜತ್ ಪಾಟಿದಾರ್ ಸೇರಿದಂತೆ ಎಲ್ಲಾ ಆಟಗಾರರು ಸಂಭ್ರಮಾಚರಣೆಯಲ್ಲಿ ಮುಳುಗಿರುವುದನ್ನು ಕಾಣಬಹುದಾಗಿದೆ.

ಪಂದ್ಯ ಹೀಗಿತ್ತು

ಇನ್ನು ನಿನ್ನೆ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸೋಲಿಸಿದ ಆರ್‌ಸಿಬಿ ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ್ದು, ಪ್ಲೇ ಆಫ್​ಗೇರಲು ತುದಿಗಾಲಿನಲ್ಲಿ ನಿಂತಿದೆ. ಆದರೆ ಇದಕ್ಕೆ ಇತರ ತಂಡಗಳ ಫಲಿತಾಂಶ ಆರ್​ಸಿಬಿ ಪರವಾಗಿ ಬರಬೇಕಿದೆ. ಪಂದ್ಯದ ಬಗ್ಗೆ ಹೇಳುವುದಾದರೆ, ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 187 ರನ್ ಗಳಿಸಿತು. ತಂಡದ ಪರ ರಜತ್ ಪಾಟಿದಾರ್ 32 ಎಸೆತಗಳಲ್ಲಿ 52 ರನ್ ಮತ್ತು ವಿಲ್ ಜಾಕ್ಸ್ 29 ಎಸೆತಗಳಲ್ಲಿ 41 ರನ್​ಗಳ ಕಾಣಿಕೆ ನೀಡಿದರು. ವಿರಾಟ್ ಕೊಹ್ಲಿ 27 ರನ್​ಗಳ ಅಲ್ಪ ಇನ್ನಿಂಗ್ಸ್ ಆಡಿದರು. ಉತ್ತರವಾಗಿ ಡೆಲ್ಲಿ ತಂಡ 19.1 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 140 ರನ್‌ ಕಲೆಹಾಕಲಷ್ಟೇ ಶಕ್ತವಾಯಿತು. ರಿಷಬ್ ಪಂತ್ ಬದಲಿಗೆ ಪಂದ್ಯದ ನಾಯಕರಾಗಿದ್ದ ಅಕ್ಷರ್ ಪಟೇಲ್ 39 ಎಸೆತಗಳಲ್ಲಿ 57 ರನ್ ಗಳಿಸಿ ಗೆಲುವಿಗಾಗಿ ಹೋರಾಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.

ಪ್ಲೇಆಫ್ ರೇಸ್‌ನಲ್ಲಿ ಆರ್‌ಸಿಬಿ

ಡೆಲ್ಲಿ ವಿರುದ್ಧದ ಗೆಲುವಿನೊಂದಿಗೆ ಆರ್​ಸಿಬಿ 13 ಪಂದ್ಯಗಳಲ್ಲಿ ಆರು ಗೆಲುವು ಮತ್ತು ಏಳು ಸೋಲುಗಳೊಂದಿಗೆ 12 ಅಂಕಗಳನ್ನು ಹೊಂದಿದೆ. ಇದೀಗ ಆರ್​ಸಿಬಿ ತನ್ನ ಕೊನೆಯ ಪಂದ್ಯವನ್ನು ಮೇ 18 ರಂದು ಚಿನ್ನಸ್ವಾಮಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಬೇಕಾಗಿದೆ. ಈ ಪಂದ್ಯದ ಮೇಲೆ ಉಭಯ ತಂಡಗಳ ಭವಿಷ್ಯ ನಿಂತಿದೆ. ಚೆನ್ನೈ ಗೆದ್ದರೆ ಆರ್‌ಸಿಬಿ ಪ್ಲೇಆಫ್ ರೇಸ್‌ನಿಂದ ಹೊರಗುಳಿಯಲಿದೆ. ಅದೇ ಸಮಯದಲ್ಲಿ, ಬೆಂಗಳೂರು ಗೆದ್ದರೆ, ಉತ್ತಮ ಅಂತರದಿಂದ ಗೆಲ್ಲಬೇಕು, ಇದರಿಂದ ನೆಟ್ ರನ್ ರೇಟ್ ಚೆನ್ನೈಗಿಂತ ಉತ್ತಮವಾಗುತ್ತದೆ. ಇದರ ನಂತರವೂ ಬೆಂಗಳೂರು ಇತರೆ ತಂಡಗಳ ಫಲಿತಾಂಶವನ್ನು ಅವಲಂಬಿಸಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Mon, 13 May 24

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ