RCB vs LSG Pitch Report: ಬೆಂಗಳೂರಿನಲ್ಲಿ ಟಾಸ್ ಗೆದ್ದವನೇ ಬಾಸ್; ಪಿಚ್ ಯಾರಿಗೆ ಸಹಕಾರಿ?

RCB vs LSG Pitch Report: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ವರ್ಗ ಎಂದು ಪರಿಗಣಿಸಲಾಗಿದೆ. ಇಲ್ಲಿ ಬ್ಯಾಟ್ಸ್‌ಮನ್‌ಗಳು ಸಾಕಷ್ಟು ಸಹಾಯ ಪಡೆಯುತ್ತಾರೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುತ್ತದೆ. ಅಲ್ಲದೆ ಮೈದಾನ ಚಿಕ್ಕದಾಗಿರುವುದರಿಂದ ಬೌಂಡರಿ, ಸಿಕ್ಸರ್​ಗಳ ಮಳೆ ಸುರಿಯುವುದನ್ನು ಈ ಹಿಂದಿನ ಪಂದ್ಯದಲ್ಲಿ ನಾವು ನೋಡಿದ್ದೇವೆ.

RCB vs LSG Pitch Report: ಬೆಂಗಳೂರಿನಲ್ಲಿ ಟಾಸ್ ಗೆದ್ದವನೇ ಬಾಸ್; ಪಿಚ್ ಯಾರಿಗೆ ಸಹಕಾರಿ?
ಆರ್​ಸಿಬಿ- ಲಕ್ನೋ
Follow us
ಪೃಥ್ವಿಶಂಕರ
|

Updated on: Apr 01, 2024 | 10:47 PM

ಐಪಿಎಲ್ 2024 ರ (IPL 2024) 15 ನೇ ಪಂದ್ಯವು ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ (RCB vs LSG) ನಡುವೆ ಏಪ್ರಿಲ್ 2 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ನಡೆಯಲಿದೆ. ಒಂದೆಡೆ ಆರ್‌ಸಿಬಿ ತನ್ನ ಕಳೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲನುಭವಿಸಿ ಈ ಪಂದ್ಯಕ್ಕೆ ಕಾಲಿಡುತ್ತಿದ್ದರೆ, ಇನ್ನೊಂದೆಡೆ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಜಯ ಸಾಧಿಸಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವಿನೊಂದಿಗೆ ಅಖಾಡಕ್ಕಿಳಿಯುತ್ತಿದೆ. ಕಳೆದ ಸೀಸನ್​ನಲ್ಲಿ ನಡೆದ ಈ ಉಭಯ ತಂಡಗಳ ಮುಖಾಮುಖಿ ರೋಚಕತೆಯಿಂದ ಕೂಡಿತ್ತು. ಹೀಗಾಗಿ ನಾಳಿನ ಪಂದ್ಯದಲ್ಲೂ ಅದೇ ರೋಚಕತೆಯನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಅದಕ್ಕೂ ಮುನ್ನ ಉಭಯ ತಂಡಗಳ ಈ ಕದನಕ್ಕೆ ಆತಿಥ್ಯವಹಿಸುತ್ತಿರುವ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್​ ಬಗ್ಗೆ ಒಂದಿಷ್ಟು ಮಾಹಿತಿ ನೋಡೋಣ.

ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ವರದಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ವರ್ಗ ಎಂದು ಪರಿಗಣಿಸಲಾಗಿದೆ. ಇಲ್ಲಿ ಬ್ಯಾಟ್ಸ್‌ಮನ್‌ಗಳು ಸಾಕಷ್ಟು ಸಹಾಯ ಪಡೆಯುತ್ತಾರೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುತ್ತದೆ. ಅಲ್ಲದೆ ಮೈದಾನ ಚಿಕ್ಕದಾಗಿರುವುದರಿಂದ ಬೌಂಡರಿ, ಸಿಕ್ಸರ್​ಗಳ ಮಳೆ ಸುರಿಯುವುದನ್ನು ಈ ಹಿಂದಿನ ಪಂದ್ಯದಲ್ಲಿ ನಾವು ನೋಡಿದ್ದೇವೆ. ಹೀಗಾಗಿ ನಾಳಿನ ಪಂದ್ಯದಲ್ಲೂ ಈ ರೀತಿಯ ಪ್ರದರ್ಶನವನ್ನು ಎದುರು ನೋಡಬಹುದಾಗಿದೆ.

ಬೆಂಗಳೂರಿನ ಈ ಮೈದಾನದಲ್ಲಿ ಇದುವರೆಗೆ ಒಟ್ಟು 90 ಐಪಿಎಲ್ ಪಂದ್ಯಗಳು ನಡೆದಿವೆ. ಈ ಪೈಕಿ ಮೊದಲು ಬ್ಯಾಟ್ ಮಾಡಿದ ತಂಡ 37 ಪಂದ್ಯಗಳಲ್ಲಿ ಮತ್ತು ಎರಡನೇ ಬಾರಿಗೆ ಬ್ಯಾಟಿಂಗ್ ಮಾಡಿದ ತಂಡ 49 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಅಂಕಿ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಯಾವ ತಂಡ ಟಾಸ್ ಗೆಲ್ಲುತ್ತದೆಯೋ ಆ ತಂಡ ಮೊದಲು ಬೌಲಿಂಗ್ ಮಾಡಲು ಮುಂದಾಗುತ್ತದೆ.

IPL 2024: ನಾಚಿಕೆಗೇಡಿನ ಸಂಗತಿ; ಸೊನ್ನೆ ಸುತ್ತುವುದರಲ್ಲಿ ಹಿಟ್​ಮ್ಯಾನ್​ಗೆ ಅಗ್ರಸ್ಥಾನ..!

ಉಭಯ ತಂಡಗಳು ಇಂತಿವೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯ್ಯಾಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ ವಿಜಯಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್.

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ಯುಧ್ವೀರ್ ಸಿಂಗ್, ಪ್ರೇರಕ್ ಮಂಕಡ್. ಯಶ್ ಠಾಕೂರ್, ಅಮಿತ್ ಮಿಶ್ರಾ, ಶಮರ್ ಜೋಸೆಫ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಕೆ. ಗೌತಮ್, ಶಿವಂ ಮಾವಿ, ಅರ್ಶಿನ್ ಕುಲಕರ್ಣಿ, ಎಂ.ಸಿದ್ಧಾರ್ಥ್, ಆಷ್ಟನ್ ಟರ್ನರ್, ಮ್ಯಾಟ್ ಹೆನ್ರಿ, ಮೊಹಮ್ಮದ್ ಅರ್ಷದ್ ಖಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್