DC vs RR, IPL 2024: ಐಪಿಎಲ್​ನಲ್ಲಿಂದು ಡೆಲ್ಲಿ-ರಾಜಸ್ಥಾನ್ ಸೆಣೆಸಾಟ: ಯಾರು ಗೆದ್ದರೆ ಯಾರಿಗೆ ಸಹಕಾರಿ?

Delhi Capitals vs Rajasthan Royals: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿಂದು ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಡೆಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಟೀಮ್ ಸಂಜು ಸ್ಯಾಮ್ಸನ್ ಅವರ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

DC vs RR, IPL 2024: ಐಪಿಎಲ್​ನಲ್ಲಿಂದು ಡೆಲ್ಲಿ-ರಾಜಸ್ಥಾನ್ ಸೆಣೆಸಾಟ: ಯಾರು ಗೆದ್ದರೆ ಯಾರಿಗೆ ಸಹಕಾರಿ?
DC vs RR
Follow us
Vinay Bhat
|

Updated on: May 07, 2024 | 7:34 AM

ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಆವೃತ್ತಿ ರೋಚಕ ಘಟ್ಟಕ್ಕೆ ತಲುಪುತ್ತಿದೆ. ಬಹುತೇಕ ಎಲ್ಲ ಪಂದ್ಯಗಳು ಹೈ-ಸ್ಕೋರ್ ಮ್ಯಾಚ್ ಆಗುತ್ತಿದ್ದು, ಅಭಿಮಾನಿಗಳಿಗಂತು ರಸದೌತಣ ನೀಡುತ್ತಿದೆ. ಇಂದು ಐಪಿಎಲ್ 2024 ರಲ್ಲಿ ಮತ್ತೊಂದು ಮಹತ್ವದ ಪಂದ್ಯ ನಡೆಯಲಿದೆ. ಡೆಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಟೀಮ್ ಸಂಜು ಸ್ಯಾಮ್ಸನ್ ಅವರ ರಾಜಸ್ಥಾನ್ ರಾಯಲ್ಸ್ (DC vs RR) ತಂಡವನ್ನು ಎದುರಿಸಲಿದೆ. ಈ ಋತುವಿನ 9ನೇ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿತ್ತು. ಆಗ ರಾಜಸ್ಥಾನ್ 12 ರನ್ ಗಳ ಜಯ ಸಾಧಿಸಿತ್ತು. ಹೀಗಾಗಿ ಪಂತ್ ಪಡೆಗೆ ಇದೊಂದು ಸೇಡಿನ ಪಂದ್ಯ ಕೂಡ ಹೌದು.

ಈ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪಡೆಯಿಂದ ಅತ್ಯುತ್ತಮ ಪ್ರದರ್ಶನ ಬಂದಿಲ್ಲ. ಆಡಿರುವ 11 ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಮತ್ತು ಆರರಲ್ಲಿ ಸೋಲು ಕಂಡು ಒಟ್ಟು 10 ಪಡೆದು -0442 ರನ್​ರೇಟ್ ಹೊಂದಿದೆ. ಪಾಯಿಂಟ್ಸ್ ಟೇಬಲ್​ನಲ್ಲಿ ಆರನೇ ಸ್ಥಾನದಲ್ಲಿದೆ. ಡೆಲ್ಲಿ ತನ್ನ ಕೊನೆಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಏಳು ವಿಕೆಟ್‌ಗಳಿಂದ ಸೋತಿತ್ತು. ನಾಯಕ ಪಂತ್ ಫಾರ್ಮ್​ನಲ್ಲಿದ್ದರೂ ಉಳಿದ ಆಟಗಾರರಿಂದ ನಿರೀಕ್ಷೆಗೆ ತಕ್ಕ ಪ್ರದರ್ಶನ ಬರುತ್ತಿಲ್ಲ. ಡೇವಿಡ್ ವಾರ್ನರ್ ಈ ಸೀಸನ್​ನಲ್ಲಿ ಸಂಪೂರ್ಣ ಮಂಕಾಗಿದ್ದಾರೆ. ಅಪಾಯಕಾರಿ ಆಟಗಾರರಿದ್ದರೂ ಬ್ಯಾಟಿಂಗ್- ಬೌಲಿಂಗ್​ನಲ್ಲಿ ಸ್ಥಿರ ಪ್ರದರ್ಶನ ತೋರಲು ಡೆಲ್ಲಿ ವಿಫಲವಾಗುತ್ತಿದೆ.

MI vs SRH Highlights, IPL 2024: ಸೂರ್ಯ ಶತಕ; ಮುಂಬೈಗೆ 4ನೇ ಗಲುವು

ಇತ್ತ ರಾಜಸ್ಥಾನ್ ಬೊಂಬಾಟ್ ಫಾರ್ಮ್​ನಲ್ಲಿದ್ದು ಆಡಿರುವ 10 ಪಂದ್ಯಗಳಲ್ಲಿ ಎಂಟರಲ್ಲಿ ಗೆದ್ದು, ಕೇವಲ ಎರಡರಲ್ಲಿ ಸೋತು 16 ಅಂಕ ಸಂಪಾದಿಸಿ +0.622 ರನ್​ರೇಟ್ ಪಡೆದುಕೊಂಡಿದೆ. ಪ್ಲೇ ಆಫ್ ಕನಸಿನಲ್ಲಿರುವ ಡೆಲ್ಲಿ ಈ ಪಂದ್ಯ ಗೆಲ್ಲಲೇಬೇಕು. ಅತ್ತ ರಾಜಸ್ಥಾನ್ ಗೆದ್ದರೆ ಬಹುತೇಕ ಪ್ಲೇ ಆಫ್​ಗೆ ಲಗ್ಗೆಯಿಟ್ಟಂತೆ. ಆದರೆ ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಆರ್​ ಸೋಲು ಅನುಭವಿಸಬೇಕಾಯಿತು. ಇದೀಗ, ಸಂಜು ತಂಡವು ಡೆಲ್ಲಿ ವಿರುದ್ಧ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಉಳಿಯಲು ಬಯಸುತ್ತಿದೆ.

ಹೆಡ್-ಟು-ಹೆಡ್ ರೆಕಾರ್ಡ್:

ಡೆಲ್ಲಿ ಹಾಗೂ ರಾಜಸ್ಥಾನ್ ಇದುವರೆಗೆ ಒಟ್ಟು 28 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ 15 ಪಂದ್ಯಗಳನ್ನು ಗೆದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್ 13 ಪಂದ್ಯಗಳನ್ನು ಗೆದ್ದಿದೆ.

ಪಿಚ್ ವರದಿ:

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದ ಮೇಲ್ಮೈ ಮೇಲ್ಮೈ ನಿಧಾನವಾಗಿರುವ ಕಾರಣ ಸ್ಪಿನ್ ಬೌಲರ್‌ಗಳಿಗೆ ಸೂಕ್ತವಾಗಿದೆ. ಆದಾಗ್ಯೂ, ಚಿಕ್ಕ ಮೈದಾನವು ಬ್ಯಾಟ್ಸ್‌ಮನ್‌ಗಳಿಗೆ ಆಕ್ರಮಣಕಾರಿ ಹೊಡೆತಗಳನ್ನು ಆಡಲು ಮತ್ತು ವೇಗವಾಗಿ ರನ್ ಮಾಡಲು ಅನುವು ಮಾಡಿಕೊಡುತ್ತದೆ. ಈ ಕಾರಣಗಳಿಗಾಗಿ, ಇಲ್ಲಿ ಟಾಸ್ ಗೆದ್ದ ಹೆಚ್ಚಿನ ತಂಡಗಳು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಳ್ಳುತ್ತವೆ.

T20 World Cup 2024: ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದ ನೂತನ ಜೆರ್ಸಿ ಬಿಡುಗಡೆ; ಫ್ಯಾನ್ಸ್ ಬೇಸರ

ಸಂಭಾವ್ಯ ಪ್ಲೇಯಿಂಗ್ 11:

ಡೆಲ್ಲಿ ಕ್ಯಾಪಿಟಲ್ಸ್: ಜೇಕ್ ಫ್ರೇಸರ್-ಮೆಕ್‌ಗುರ್ಕ್, ಪೃಥ್ವಿ ಶಾ, ಶಾಯ್ ಹೋಪ್, ರಿಷಭ್ ಪಂತ್ (ನಾಯಕ, ವಿಕೆಟ್ ಕೀಪರ್), ಅಭಿಷೇಕ್ ಪೊರೆಲ್, ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ಲಿಜಾದ್ ವಿಲಿಯಮ್ಸ್.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ, ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್.

ಹೆಚ್ಚಿನ ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್