AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT, IPL 2024: ಮತ್ತೆ ಟಾಸ್ ಗೆದ್ದ ಆರ್​ಸಿಬಿ; ಹಿಂದಿನ ತಂಡವೇ ಗುಜರಾತ್ ವಿರುದ್ಧ ಕಣಕ್ಕೆ

RCB vs GT, IPL 2024: ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

RCB vs GT, IPL 2024: ಮತ್ತೆ ಟಾಸ್ ಗೆದ್ದ ಆರ್​ಸಿಬಿ; ಹಿಂದಿನ ತಂಡವೇ ಗುಜರಾತ್ ವಿರುದ್ಧ ಕಣಕ್ಕೆ
ಫಾಫ್ ಡುಪ್ಲೆಸಿಸ್
ಪೃಥ್ವಿಶಂಕರ
|

Updated on:May 04, 2024 | 7:18 PM

Share

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ (IPL 2024) 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (Royal Challengers Bengaluru vs Gujarat Titans) ಈ ಸೀಸನ್​ನಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗಿವೆ. ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ಗುಜರಾತ್ ಇದೆ. ಇತ್ತ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವುದರೊಂದಿಗೆ ಪ್ಲೇ ಆಫ್​ಗೆ ಹತ್ತಿರವಾಗುವ ಗುರಿಯೊಂದಿಗೆ ಆರ್​ಸಿಬಿ ಕಣಕ್ಕಿಳಿಯುತ್ತಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ (Faf du Plessis) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ಇಂದಿನ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಾವುದೇ ಬದಲಾವಣೆ ಮಾಡಿಲ್ಲ. ಅಂದರೆ ಈ ಹಿಂದೆ ಅಹಮದಾಬಾದ್​ನಲ್ಲಿ ಆಡಿದ ತಂಡವೇ ಇಂದು ಸಹ ಗುಜರಾತ್ ವಿರುದ್ಧ ಕಣಕ್ಕಿಳಿಯುತ್ತಿದೆ. ಆದರೆ ಗುಜರಾತ್ ಟೈಟಾನ್ಸ್ ತಂಡದಲ್ಲಿ ಮಾತ್ರ ಎರಡು ಬದಲಾವಣೆಗಳನ್ನು ಮಾಡಿಕೊಂಡು ಅಖಾಡಕ್ಕಿಳಿಯುತ್ತಿದೆ.

RCB vs GT Live Score, IPL 2024: ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ಕೆ

ಉಭಯ ತಂಡಗಳು

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮಾನವ್ ಸುತಾರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜೋಶುವಾ ಲಿಟಲ್.

ಇಂಪ್ಯಾಕ್ಟ್ ಪ್ಲೇಯರ್: ಸಂದೀಪ್ ವಾರಿಯರ್, ವಿಜಯ್ ಶಂಕರ್, ಜಯಂತ್ ಯಾದವ್, ನಲ್ಕಂಡೆ, ಬಿ.ಆರ್.ಶರತ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ವಿಲ್ ಜ್ಯಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ವಿಜಯಕುಮಾರ್ ವಿಶಾಕ್.

ಇಂಪ್ಯಾಕ್ಟ್ ಪ್ಲೇಯರ್: ಅನುಜ್ ರಾವತ್, ಮಹಿಪಾಲ್ ಲೊಮ್ರೋರ್, ಆಕಾಶ್ ದೀಪ್, ರಜತ್ ಪಾಟಿದಾರ್, ಸುಯ್ಯಶ್ ಪ್ರಭುದೇಸಾಯಿ.

ಪಾಯಿಂಟ್ ಪಟ್ಟಿಯಲ್ಲಿ ಉಭಯ ತಂಡಗಳ ಸ್ಥಾನ

ಆರ್‌ಸಿಬಿ ಆಡಿರುವ 10 ಪಂದ್ಯಗಳಿಂದ ಆರು ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದ್ದರೆ, ಶುಭ್​ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ 10 ಪಂದ್ಯಗಳಿಂದ ಎಂಟು ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಸೋಲಿನ ನಂತರ ಈ ಎರಡೂ ತಂಡಗಳ ನಿರೀಕ್ಷೆ ಹೆಚ್ಚಿದೆ. ಆರ್​ಸಿಬಿ ಮತ್ತು ಗುಜರಾತ್ ಪ್ಲೇಆಫ್‌ ರೇಸ್‌ನಲ್ಲಿ ಉಳಿಯಲು ಬಯಸಿದರೆ, ಎರಡೂ ತಂಡಗಳು ಗೆಲ್ಲಲೇಬೇಕಾದ ಒತ್ತಡದಲ್ಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:11 pm, Sat, 4 May 24