
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ (IPL 2024) 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (Royal Challengers Bengaluru vs Gujarat Titans) ಈ ಸೀಸನ್ನಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗಿವೆ. ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ಗುಜರಾತ್ ಇದೆ. ಇತ್ತ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವುದರೊಂದಿಗೆ ಪ್ಲೇ ಆಫ್ಗೆ ಹತ್ತಿರವಾಗುವ ಗುರಿಯೊಂದಿಗೆ ಆರ್‌ಸಿಬಿ ಕಣಕ್ಕಿಳಿಯುತ್ತಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು ಟಾಸ್ ಗೆದ್ದ ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ (Faf du Plessis) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.
ಇಂದಿನ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಾವುದೇ ಬದಲಾವಣೆ ಮಾಡಿಲ್ಲ. ಅಂದರೆ ಈ ಹಿಂದೆ ಅಹಮದಾಬಾದ್ನಲ್ಲಿ ಆಡಿದ ತಂಡವೇ ಇಂದು ಸಹ ಗುಜರಾತ್ ವಿರುದ್ಧ ಕಣಕ್ಕಿಳಿಯುತ್ತಿದೆ. ಆದರೆ ಗುಜರಾತ್ ಟೈಟಾನ್ಸ್ ತಂಡದಲ್ಲಿ ಮಾತ್ರ ಎರಡು ಬದಲಾವಣೆಗಳನ್ನು ಮಾಡಿಕೊಂಡು ಅಖಾಡಕ್ಕಿಳಿಯುತ್ತಿದೆ.
RCB vs GT Live Score, IPL 2024: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮಾನವ್ ಸುತಾರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜೋಶುವಾ ಲಿಟಲ್.
ಇಂಪ್ಯಾಕ್ಟ್ ಪ್ಲೇಯರ್: ಸಂದೀಪ್ ವಾರಿಯರ್, ವಿಜಯ್ ಶಂಕರ್, ಜಯಂತ್ ಯಾದವ್, ನಲ್ಕಂಡೆ, ಬಿ.ಆರ್.ಶರತ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ವಿಲ್ ಜ್ಯಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ವಿಜಯಕುಮಾರ್ ವಿಶಾಕ್.
ಇಂಪ್ಯಾಕ್ಟ್ ಪ್ಲೇಯರ್: ಅನುಜ್ ರಾವತ್, ಮಹಿಪಾಲ್ ಲೊಮ್ರೋರ್, ಆಕಾಶ್ ದೀಪ್, ರಜತ್ ಪಾಟಿದಾರ್, ಸುಯ್ಯಶ್ ಪ್ರಭುದೇಸಾಯಿ.
ಆರ್‌ಸಿಬಿ ಆಡಿರುವ 10 ಪಂದ್ಯಗಳಿಂದ ಆರು ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದ್ದರೆ, ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ 10 ಪಂದ್ಯಗಳಿಂದ ಎಂಟು ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಸೋಲಿನ ನಂತರ ಈ ಎರಡೂ ತಂಡಗಳ ನಿರೀಕ್ಷೆ ಹೆಚ್ಚಿದೆ. ಆರ್‌ಸಿಬಿ ಮತ್ತು ಗುಜರಾತ್ ಪ್ಲೇಆಫ್ ರೇಸ್‌ನಲ್ಲಿ ಉಳಿಯಲು ಬಯಸಿದರೆ, ಎರಡೂ ತಂಡಗಳು ಗೆಲ್ಲಲೇಬೇಕಾದ ಒತ್ತಡದಲ್ಲಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:11 pm, Sat, 4 May 24