RCB vs RR, IPL 2024: ಟಾಸ್ ಸೋತ ಆರ್‌ಸಿಬಿ; ಎಲಿಮಿನೇಟರ್ ಪಂದ್ಯಕ್ಕೆ ಉಭಯ ತಂಡಗಳು ಹೀಗಿವೆ
RCB vs RR, IPL 2024: ಇಂದು ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

ಇಂದು ಐಪಿಎಲ್ 2024 ರ (IPL 2024) ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು (RCB vs RR) ಎದುರಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಈ ಪಂದ್ಯ ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಎರಡನೇ ಕ್ವಾಲಿಫೈಯರ್ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಇತ್ತ ಈ ಪಂದ್ಯದಲ್ಲಿ ಸೋತ ತಂಡದ ಪಯಣ ಇಲ್ಲಿಗೇ ನಿಲ್ಲಲಿದೆ. ಇನ್ನು ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಆರ್‌ಸಿಬಿ ಕಳೆದ ತಂಡವನ್ನೇ ಕಣಕ್ಕಿಳಿಸಿದರೆ, ರಾಜಸ್ಥಾನ್ ತಂಡ ಕೂಡ ಯಾವುದೇ ಬದಲಾವಣೆ ಮಾಡಿಲ್ಲ.
ಉಭಯ ತಂಡಗಳು ಹೀಗಿವೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮೊರೊರ್, ಕರ್ಣ್ ಶರ್ಮಾ, ಯಶ್ ದಯಾಲ್, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್.
ಇಂಪ್ಯಾಕ್ಟ್ ಪ್ಲೇಯರ್: ಸ್ವಪ್ನಿಲ್ ಸಿಂಗ್, ಅನುಜ್ ರಾವತ್, ಸುಯ್ಯಾಶ್ ಪ್ರಭುದೇಸಾಯಿ, ವೈಶಾಕ್ ವಿಜಯ್ಕುಮಾರ್, ಹಿಮಾಂಶು ಶರ್ಮಾ.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್.
ಇಂಪ್ಯಾಕ್ಟ್ ಪ್ಲೇಯರ್: ನಾಂದ್ರೆ ಬರ್ಗರ್, ಶುಭಂ ದುಬೆ, ಡೊನೊವನ್ ಫೆರೇರಾ, ತನುಷ್ ಕೋಟ್ಯಾನ್, ಶಿಮ್ರಾನ್ ಹೆಟ್ಮೆಯರ್.
RCB vs RR Eliminator Live Score, IPL 2024: ಟಾಸ್ ಗೆದ್ದ ರಾಜಸ್ಥಾನ್; ಆರ್‌ಸಿಬಿ ಬ್ಯಾಟಿಂಗ್
ಲೀಗ್ ಹಂತದಲ್ಲಿ ಉಭಯರ ಪ್ರದರ್ಶನ
ಲೀಗ್ ಹಂತದಲ್ಲಿ ಉಭಯ ತಂಡಗಳ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ರಾಜಸ್ಥಾನ್ ರಾಯಲ್ಸ್ ಆಡಿರುವ 14 ಪಂದ್ಯಗಳಲ್ಲಿ 8 ರಲ್ಲಿ ಗೆದ್ದಿದ್ದು 5 ರಲ್ಲಿ ಸೋತಿದೆ. 1 ಪಂದ್ಯ ಮಳೆಯಿಂದ ರದ್ದಾಗಿದೆ. ಈ ಮೂಲಕ ತಂಡವು 17 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಕಳಪೆ ಆರಂಭದ ನಂತರ ಆರ್‌ಸಿಬಿ ಪ್ರಬಲ ಪುನರಾಗಮನವನ್ನು ಮಾಡಿ ಪ್ಲೇಆಫ್ಗೆ ಲಗ್ಗೆ ಇಟ್ಟಿತು. ಪ್ರಸಕ್ತ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಿರುವ 14 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಗೆದ್ದಿದೆ. ಈ ತಂಡ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಈ ಸೀಸನ್ನ 19ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಿತು. ಈ ಪಂದ್ಯವನ್ನು ಆರ್‌ಆರ್ 6 ವಿಕೆಟ್‌ಗಳಿಂದ ಗೆದ್ದಿತ್ತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:10 pm, Wed, 22 May 24
