
ಇಂದು ಐಪಿಎಲ್ 2024 ರ (IPL 2024) ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು (RCB vs RR) ಎದುರಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಈ ಪಂದ್ಯ ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಎರಡನೇ ಕ್ವಾಲಿಫೈಯರ್ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಇತ್ತ ಈ ಪಂದ್ಯದಲ್ಲಿ ಸೋತ ತಂಡದ ಪಯಣ ಇಲ್ಲಿಗೇ ನಿಲ್ಲಲಿದೆ. ಇನ್ನು ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಆರ್‌ಸಿಬಿ ಕಳೆದ ತಂಡವನ್ನೇ ಕಣಕ್ಕಿಳಿಸಿದರೆ, ರಾಜಸ್ಥಾನ್ ತಂಡ ಕೂಡ ಯಾವುದೇ ಬದಲಾವಣೆ ಮಾಡಿಲ್ಲ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮೊರೊರ್, ಕರ್ಣ್ ಶರ್ಮಾ, ಯಶ್ ದಯಾಲ್, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್.
ಇಂಪ್ಯಾಕ್ಟ್ ಪ್ಲೇಯರ್: ಸ್ವಪ್ನಿಲ್ ಸಿಂಗ್, ಅನುಜ್ ರಾವತ್, ಸುಯ್ಯಾಶ್ ಪ್ರಭುದೇಸಾಯಿ, ವೈಶಾಕ್ ವಿಜಯ್ಕುಮಾರ್, ಹಿಮಾಂಶು ಶರ್ಮಾ.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್.
ಇಂಪ್ಯಾಕ್ಟ್ ಪ್ಲೇಯರ್: ನಾಂದ್ರೆ ಬರ್ಗರ್, ಶುಭಂ ದುಬೆ, ಡೊನೊವನ್ ಫೆರೇರಾ, ತನುಷ್ ಕೋಟ್ಯಾನ್, ಶಿಮ್ರಾನ್ ಹೆಟ್ಮೆಯರ್.
RCB vs RR Eliminator Live Score, IPL 2024: ಟಾಸ್ ಗೆದ್ದ ರಾಜಸ್ಥಾನ್; ಆರ್‌ಸಿಬಿ ಬ್ಯಾಟಿಂಗ್
ಲೀಗ್ ಹಂತದಲ್ಲಿ ಉಭಯ ತಂಡಗಳ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ರಾಜಸ್ಥಾನ್ ರಾಯಲ್ಸ್ ಆಡಿರುವ 14 ಪಂದ್ಯಗಳಲ್ಲಿ 8 ರಲ್ಲಿ ಗೆದ್ದಿದ್ದು 5 ರಲ್ಲಿ ಸೋತಿದೆ. 1 ಪಂದ್ಯ ಮಳೆಯಿಂದ ರದ್ದಾಗಿದೆ. ಈ ಮೂಲಕ ತಂಡವು 17 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಕಳಪೆ ಆರಂಭದ ನಂತರ ಆರ್‌ಸಿಬಿ ಪ್ರಬಲ ಪುನರಾಗಮನವನ್ನು ಮಾಡಿ ಪ್ಲೇಆಫ್ಗೆ ಲಗ್ಗೆ ಇಟ್ಟಿತು. ಪ್ರಸಕ್ತ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಿರುವ 14 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಗೆದ್ದಿದೆ. ಈ ತಂಡ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಈ ಸೀಸನ್ನ 19ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಿತು. ಈ ಪಂದ್ಯವನ್ನು ಆರ್‌ಆರ್ 6 ವಿಕೆಟ್‌ಗಳಿಂದ ಗೆದ್ದಿತ್ತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:10 pm, Wed, 22 May 24