IPL 2024: ಆರ್ಸಿಬಿಗೆ ಆಪತ್ಬಾಂಧವರಾದ ಡಿಕೆ- ಅನುಜ್; 174 ರನ್ ಟಾರ್ಗೆಟ್
IPL 2024: ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡ ಅನುಜ್ ರಾವೂತ್ ಹಾಗೂ ದಿನೇಶ್ ಕಾರ್ತಿಕ್ ಅವರ ಅಮೋಘ ಜೊತೆಯಾಟದ ನೆರವಿನಿಂದಾಗಿ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದೆ.
ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಐಪಿಎಲ್ (IPL 2024) ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡ ಅನುಜ್ ರಾವತ್ (Anuj Rawat) ಹಾಗೂ ದಿನೇಶ್ ಕಾರ್ತಿಕ್ (Dinesh Karthik) ಅವರ ಅಮೋಘ ಜೊತೆಯಾಟದ ನೆರವಿನಿಂದಾಗಿ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದೆ. ಈ ಮೂಲಕ ಸಿಎಸ್ಕೆ ತಂಡಕ್ಕೆ 174 ರನ್ಗಳ ಟಾರ್ಗೆಟ್ ನೀಡಿದೆ. ಆರಂಭದಲ್ಲೇ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆರ್ಸಿವಿಗೆ ದಿನೇಶ್ ಕಾರ್ತಿಕ್ ಹಾಗೂ ಅನುಜ್ ರಾವತ್ ನೆರವಾದರು. ಈ ಇಬ್ಬರು ಕೊನೆಯ ಎಸೆತದವರಿಗೂ ಉಳಿದು 95 ರನ್ಗಳ ಜೊತೆಯಾಟ ಆಡುವ ಮೂಲಕ ತಂಡವನ್ನು ಗೌರವತ್ಮಾಕ ಮೊತ್ತಕ್ಕೆ ಕೊಂಡೊಯ್ದರು. ಇತ್ತ ಸಿಎಸ್ಕೆ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಮುಸ್ತಫಿಜುರ್ ರೆಹಮಾನ್ ಪ್ರಮುಖ 4 ವಿಕೆಟ್ ಪಡೆದರು.
ಆರ್ಸಿಬಿಗೆ ಉತ್ತಮ ಆರಂಭ
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭವನ್ನೇ ನೀಡಿದರು. ಈ ಇಬ್ಬರು ಮೊದಲ ವಿಕೆಟ್ಗೆ 41 ರನ್ಗಳ ಜೊತೆಯಾಟ ಹಂಚಿಕೊಂಡರು. ಆದರೆ ಈ ವೇಳೆ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದ ನಾಯಕ ಡುಪ್ಲೆಸಿಸ್, ಮುಸ್ತಫಿಜುರ್ ಬೌಲಿಂಗ್ನಲ್ಲಿ 35 ರನ್ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಆ ನಂತರ ಬಂದ ರಜತ್ ಪಾಟಿದರ್, ಐಪಿಎಲ್ನಲ್ಲೂ ತಮ್ಮ ಕಳಪೆ ಫಾರ್ಮ್ ಮುಂದುವರೆಸಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.
IPL 2024: ಮೊದಲ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ..!
ಸೊನ್ನೆ ಸುತ್ತಿದ ರಜತ್- ಗ್ಲೆನ್
ಮೂರನೇ ಕ್ರಮಾಂಕದಲ್ಲಿ ಬಂದ ಭರವಸೆಯ ಬ್ಯಾಟರ್ ಗ್ಲೆನ್ ಮ್ಯಾಕ್ಸ್ವೆಲ್ ಕೂಡ ಯಾವುದೇ ಪರಿಣಾಮ ಬೀರದೆ ಮೊದಲ ಎಸೆತದಲ್ಲೇ ವಿಕೆಟ್ ಕೀಪರ್ಗೆ ಕ್ಯಾಚಿತ್ತು ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಉತ್ತಮ ಆರಂಭದ ಹೊರತಾಗಿಯೂ ವಿಕೆಟ್ಗಳ ದಿಢೀರ್ ಪತನದಿಂದಾಗಿ ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಕ್ಯಾಮರಾನ್ ಗ್ರೀನ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಆದರೆ ರಹಾನೆ ಹಿಡಿದ ಅದ್ಭುತ ಕ್ಯಾಚ್ನಿಂದಾಗಿ ವಿರಾಟ್ ಕೊಹ್ಲಿ ಇನ್ನಿಂಗ್ಸ್ 21 ರನ್ಗಳಿಗೆ ಅಂತ್ಯವಾಯಿತು.
ಡಿಕೆ- ಅನುಜ್ 95 ರನ್ ಜೊತೆಯಾಟ
ಕೊಹ್ಲಿ ವಿಕೆಟ್ ಬಳಿಕ ಗ್ರೀನ್ ಕೂಡ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಿಲ್ಲ. ಅವರು ಕೂಡ 18 ರನ್ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಹೀಗಾಗಿ ತಂಡ ಕೇವಲ 78 ರನ್ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಲ್ಲಿಂದ ಜೊತೆಯಾದ ದಿನೇಶ್ ಕಾರ್ತಿಕ್ ಹಾಗೂ ಅನುಜ್ ರಾವತ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ಇಬ್ಬರು 95 ರನ್ಗಳ ಜೊತೆಯಾಟದ ಜೊತೆಗೆ ತಂಡವನ್ನು 170 ರನ್ಗಳ ಗಡಿ ದಾಟಿಸಿದರು.
ಮುಸ್ತಫಿಜುರ್ 4 ವಿಕೆಟ್
ಅಂತಿಮವಾಗಿ ಅನುಜ್ ರಾವತ್ 25 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 48 ರನ್ ಕಲೆಹಾಕಿದರೆ, ದಿನೇಶ್ ಕಾರ್ತಿಕ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 38 ರನ್ ಸಿಡಿಸಿದರು. ಇನ್ನು ಸಿಎಸ್ಕೆ ಪರ ಅದ್ಭುತವಾಗಿ ಬೌಲಿಂಗ್ ಮಾಡಿದ ಮುಸ್ತಫಿಜುರ್ ರೆಹಮಾನ್ 4 ಓವರ್ಗಳಲ್ಲಿ 29 ರನ್ ನೀಡಿ 4 ವಿಕೆಟ್ ಪಡೆದರೆ, ದೀಪಕ್ ಚಹಾರ್ 1 ವಿಕೆಟ್ ಪಡೆದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:45 pm, Fri, 22 March 24