RCB vs CSK, IPL 2024: ಟಾಸ್ ಗೆದ್ದ ಸಿಎಸ್​ಕೆ; ಉಭಯ ತಂಡಗಳಲ್ಲಿ ಒಂದೊಂದು ಬದಲಾವಣೆ

RCB vs CSK, IPL 2024: ಐಪಿಎಲ್ 2024 ರ 68 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಪ್ಲೇಆಫ್ ದೃಷ್ಟಿಯಿಂದ ಉಭಯ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

RCB vs CSK, IPL 2024: ಟಾಸ್ ಗೆದ್ದ ಸಿಎಸ್​ಕೆ; ಉಭಯ ತಂಡಗಳಲ್ಲಿ ಒಂದೊಂದು ಬದಲಾವಣೆ
ಆರ್​ಸಿಬಿ- ಸಿಎಸ್​ಕೆ
Follow us
ಪೃಥ್ವಿಶಂಕರ
|

Updated on:May 18, 2024 | 7:15 PM

ಐಪಿಎಲ್ 2024 (IPL 2024) ರ 68 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ (RCB vs CSK) ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ (M Chinnaswamy Stadium) ಆತಿಥ್ಯವಹಿಸುತ್ತಿದೆ. ಪ್ಲೇಆಫ್ ದೃಷ್ಟಿಯಿಂದ ಉಭಯ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಪಂದ್ಯದಲ್ಲಿ ಚೆನ್ನೈ ಗೆದ್ದರೆ ನೇರವಾಗಿ ಪ್ಲೇ ಆಫ್‌ಗೆ ಲಗ್ಗೆ ಇಡಲಿದೆ. ಮತ್ತೊಂದೆಡೆ, ಆರ್‌ಸಿಬಿಗೆ ಕೇವಲ ಪಂದ್ಯವನ್ನು ಗೆಲ್ಲುವುದು ಮುಖ್ಯವಲ್ಲ. ಆದಾಗ್ಯೂ, ಆರ್‌ಸಿಬಿ ಪ್ಲೇ ಆಫ್‌ಗೆ ಪ್ರವೇಶಿಸಬೇಕಾದರೆ ಅತ್ಯುತ್ತಮ ನೆಟ್​ ರನ್​ರೇಟ್​ನಲ್ಲಿ ಪಂದ್ಯವನ್ನು ಗೆಲ್ಲಬೇಕಾಗಿದೆ. ಇನ್ನು ಈ ಪಂದ್ಯದ ಟಾಸ್ ಮುಗಿದಿದ್ದು ಟಾಸ್ ಗೆದ್ದ ಸಿಎಸ್​ಕೆ ನಾಯಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಆರ್​ಸಿಬಿ ತಂಡ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.

ಉಭಯ ತಂಡಗಳಲ್ಲಿ 1 ಬದಲಾವಣೆ

ಟಾಸ್ ಗೆದ್ದ ಬಳಿಕ ಪ್ಲೇಯಿಂಗ್ ಇಲೆವೆನ್ ಬಗ್ಗೆ ಮಾತನಾಡಿದ ಸಿಎಸ್​ಕೆ ನಾಯಕ ರುತುರಾಜ್ ಗಾಯಕ್ವಾಡ್, ‘ಈ ಪಂದ್ಯದಲ್ಲಿ ತಮ್ಮ ತಂಡ ಒಂದು ಬದಲಾವಣೆಯೊಂದಿಗೆ ಆಡುತ್ತಿದೆ. ಮೊಯಿನ್ ಅಲಿ ಬದಲಿಗೆ ಮಿಚೆಲ್ ಸ್ಯಾಂಟ್ನರ್‌ಗೆ ಅವಕಾಶ ಸಿಕ್ಕಿದೆ’ ಎಂದರು. ಹಾಗೆಯೇ ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಕೂಡ ಪ್ಲೇಯಿಂಗ್ ಇಲೆವೆನ್ ಬಗ್ಗೆ ಕೇಳಿದಾಗ, ‘ಈ ಪಂದ್ಯದಲ್ಲಿ ತಮ್ಮ ತಂಡವು ಯಾವುದೇ ಬದಲಾವಣೆಗಳಿಲ್ಲದೆ ಆಡುವುದನ್ನು ಕಾಣಬಹುದು’ ಎಂದು ಹೇಳಿದರು. ಆದರೆ, ವಿಲ್ ಜಾಕ್ಸ್ ಈ ಪಂದ್ಯದಲ್ಲಿ ಆಡುವುದಿಲ್ಲ. ಹೀಗಾಗಿ ಅವರ ಸ್ಥಾನದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಆಡಲಿದ್ದಾರೆ.

RCB vs CSK Live Score, IPL 2024: ಟಾಸ್ ಗೆದ್ದ ಸಿಎಸ್​ಕೆ ಬೌಲಿಂಗ್ ಆಯ್ಕೆ

ಉಭಯ ತಂಡಗಳ ಪ್ಲೇಯಿಂಗ್ 11

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಯಶ್ ದಯಾಲ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್.

ಚೆನ್ನೈ ಸೂಪರ್ ಕಿಂಗ್ಸ್: ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ಡೆರಿಲ್ ಮಿಚೆಲ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್, ಮಹಿಷ್ ತೀಕ್ಷಣ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Sat, 18 May 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್