
ಐಪಿಎಲ್ 17ನೇ (IPL 2024) ಸೀಸನ್ನ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ನೆಲದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು (Royal Challengers Bengaluru vs Delhi Capitals) ಎದುರಿಸುತ್ತಿದೆ. ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಳ್ಳಲು ಎರಡೂ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಹೈವೋಲ್ಟೇಜ್ ಪಂದ್ಯದ ಟಾಸ್ ಈಗಾಗಲೇ ನಡೆದಿದ್ದು, ನಿಯಮಿತ ನಾಯಕ ರಿಷಭ್ ಪಂತ್ ಅನುಪಸ್ಥಿತಿಯಲ್ಲಿ, ಡೆಲ್ಲಿ ತಂಡದ ನಾಯಕತ್ವವಹಿಸಿಕೊಂಡಿರುವ ಅಕ್ಷರ್ ಪಟೇಲ್ (Axar Patel) ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಆರ್‌ಸಿಬಿ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನ ಮಾಡಿದ್ದಾರೆ. ಇದರೊಂದಿಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಇದುವರೆಗೆ 29 ಬಾರಿ ಮುಖಾಮುಖಿಯಾಗಿವೆ. ಈ ಅವಧಿಯಲ್ಲಿ ಆರ್‌ಸಿಬಿ 18 ಪಂದ್ಯಗಳನ್ನು ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 11 ಪಂದ್ಯಗಳನ್ನು ಗೆದ್ದಿದೆ. ಮೊದಲು ಬ್ಯಾಟಿಂಗ್ ಮಾಡಿ ಹಾಗೂ ಚೇಸಿಂಗ್ ಮಾಡುವಾಗ ಆರ್‌ಸಿಬಿ ತಂಡ ತಲಾ 9 ಪಂದ್ಯಗಳನ್ನು ಗೆದ್ದಿದೆ. ಮತ್ತೊಂದೆಡೆ, ಡೆಲ್ಲಿ ಮೊದಲು ಬ್ಯಾಟಿಂಗ್ ಮಾಡುವಾಗ 5 ಮತ್ತು ಗುರಿ ಬೆನ್ನಟ್ಟುವಾಗ 6 ಪಂದ್ಯಗಳನ್ನು ಗೆದ್ದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಇದುವರೆಗೆ 89 ಪಂದ್ಯಗಳನ್ನು ಆಡಿದೆ. ಈ ಅವಧಿಯಲ್ಲಿ ತಂಡ 42ರಲ್ಲಿ ಗೆದ್ದು 43ರಲ್ಲಿ ಸೋತಿದೆ. 4 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ.
RCB vs DC Live Score, IPL 2024: ಟಾಸ್ ಗೆದ್ದ ಡೆಲ್ಲಿ; ಆರ್‌ಸಿಬಿ ಬ್ಯಾಟಿಂಗ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್ ಮತ್ತು ಯಶ್ ದಯಾಲ್.
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ (ನಾಯಕ), ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಶಾಯ್ ಹೋಪ್, ಕುಮಾರ್ ಕುಶಾಗ್ರಾ, ಟ್ರಿಸ್ಟಾನ್ ಸ್ಟಬ್ಸ್, ಕುಲ್ದೀಪ್ ಯಾದವ್, ರಸಿಕ್ ದಾರ್ ಸಲಾಂ, ಮುಖೇಶ್ ಕುಮಾರ್, ಇಶಾಂತ್ ಶರ್ಮಾ ಮತ್ತು ಖಲೀಲ್ ಅಹ್ಮದ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:26 pm, Sun, 12 May 24