
ಐಪಿಎಲ್‌ನಲ್ಲಿ (IPL 2024) ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru vs Kolkata Knight Riders) ನಡುವೆ ಹೈವೋಲ್ಟೇಜ್ ಕದನ ನಡೆಯುತ್ತಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ (M. Chinnaswamy Stadium) ನಡೆಯುತ್ತಿದೆ. ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳುವ ಇರಾದೆಯಲ್ಲಿವೆ. ಲೀಗ್ನಲ್ಲಿ ಆರ್ಸಿಬಿಗೆ ಇದು ಮೂರನೇ ಪಂದ್ಯವಾಗಿದ್ದರೆ, ಕೆಕೆಆರ್ಗೆ ಇದು ಎರಡನೇ ಪಂದ್ಯವಾಗಿದೆ. ಎರಡೂ ತಂಡಗಳು ಗೆಲುವಿನೊಂದಿಗೆ ಈ ಪಂದ್ಯಕ್ಕೆ ಕಾಲಿಡುತ್ತಿರುವುದರಿಂದ ಎರಡೂ ತಂಡಗಳು ತಮ್ಮ ಗೆಲುವಿನ ಲಯವನ್ನು ಮುಂದುವರೆಸಲು ಪ್ರಯತ್ನಿಸಲಿವೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಹೊರಬಿದ್ದಿದೆ.
ಉಭಯ ತಂಡಗಳ ಮುಖಾಮುಖಿ ವರದಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಮೇಲುಗೈ ಸಾಧಿಸಿದೆ. ಐಪಿಎಲ್‌ನಲ್ಲಿ ಈ ಎರಡು ತಂಡಗಳ ನಡುವೆ ಇದುವರೆಗೆ 32 ಪಂದ್ಯಗಳು ನಡೆದಿವೆ. ಇದರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ 18 ಪಂದ್ಯಗಳನ್ನು ಗೆದ್ದಿದ್ದರೆ, 14 ಪಂದ್ಯಗಳಲ್ಲಿ ಸೋಲು ಕಂಡಿದೆ. ಇತ್ತ ಆರ್‌ಸಿಬಿ 14 ಪಂದ್ಯಗಳನ್ನು ಗೆದ್ದಿದ್ದರೆ, 18 ಪಂದ್ಯಗಳಲ್ಲಿ ಸೋಲು ಕಂಡಿದೆ. ಇನ್ನು ಕಳೆದ ಐದು ವರ್ಷಗಳಲ್ಲಿ ಎರಡು ತಂಡಗಳ ಮುಖಾಮುಖಿ ನೋಡುವುದಾದರೆ.. ಕಳೆದ 5 ವರ್ಷಗಳಲ್ಲಿ ಆರ್‌ಸಿಬಿ ಮತ್ತು ಕೆಕೆಆರ್ 10 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಎರಡೂ ತಂಡಗಳು ತಲಾ 5 ಪಂದ್ಯಗಳನ್ನು ಗೆದ್ದಿವೆ.
RCB vs KKR Live Score, IPL 2024: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ; ಆರ್‌ಸಿಬಿ ಬ್ಯಾಟಿಂಗ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಕ್ಯಾಮರೂನ್ ಗ್ರೀನ್, ರಜತ್ ಪಾಟೀಲ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಅಲ್ಜಾರಿ ಜೋಸೆಫ್, ಮಾಯಾಂಕ್ ಡಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್.
ಕೊಲ್ಕತ್ತತ್ತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಮಣದೀಪ್ ಸಿಂಗ್, ರಿಂಕು ಸಿಂಗ್, ಆಂಡ್ರೆ ರಸ್ಸೆಲ್, ಸುನಿಲ್ ನರೈನ್, ಮಿಚೆಲ್ ಸ್ಟಾರ್ಕ್, ಅನುಕುಲ್ ರಾಯ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:08 pm, Fri, 29 March 24