IPL 2024: ಬೆಂಗಳೂರಿನಲ್ಲಿ ಆರ್ಸಿಬಿಗೆ ಮೊದಲ ಪಂದ್ಯ; ಎದುರಾಳಿ ಯಾರು ಗೊತ್ತಾ?
IPL 2024: ಸೋಲಿನೊಂದಿಗೆ ಲೀಗ್ ಆರಂಭಿಸಿರುವ ಆರ್ಸಿಬಿ ತನ್ನ ತವರಿನಲ್ಲಿ ಅಂದರೆ ಬೆಂಗಳೂರಿನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲು ಸಜ್ಜಾಗಿದೆ. ಈ ಪಂದ್ಯದಲ್ಲಿ ಆರ್ಸಿಬಿಯ ಎದುರಾಳಿಯಾಗಿ ಪಂಜಾಬ್ ಕಿಂಗ್ಸ್ ಕಣಕ್ಕಿಳಿಯುತ್ತಿದೆ.
ಐಪಿಎಲ್ 2024 (IPL 2024) ರ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ಹೀನಾಯ ಸೋಲನ್ನು ಎದುರಿಸಬೇಕಾಯಿತು. ಚೆಪಾಕ್ನಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಸಿಬಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡಲ್ಲೂ ವಿಫವಾಗಿತ್ತು. ಆದರೀಗ ಸೋಲಿನೊಂದಿಗೆ ಲೀಗ್ ಆರಂಭಿಸಿರುವ ಆರ್ಸಿಬಿ ತನ್ನ ತವರಿನಲ್ಲಿ ಅಂದರೆ ಬೆಂಗಳೂರಿನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲು ಸಜ್ಜಾಗಿದೆ. ಈ ಪಂದ್ಯದಲ್ಲಿ ಆರ್ಸಿಬಿಯ ಎದುರಾಳಿಯಾಗಿ ಪಂಜಾಬ್ ಕಿಂಗ್ಸ್ (RCB vs PBKS) ಕಣಕ್ಕಿಳಿಯುತ್ತಿದೆ. ಒಂದೆಡೆ ಆರ್ಸಿಬಿ ತನ್ನ ಮೊದಲ ಗೆಲುವಿಗಾಗಿ ಕಾಯುತ್ತಿದ್ದರೆ, ಇನ್ನೊಂದೆಡೆ ಆಡಿದ ಮೊದಲ ಪಂದ್ಯದಲ್ಲೇ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿರುವ ಪಂಜಾಬ್ ತಂಡ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಲು ಎದುರು ನೋಡುತ್ತಿದೆ.
ದುರ್ಬಲ ಬೌಲಿಂಗ್ ವಿಭಾಗ
ಆಡಿದ ಮೊದಲ ಪಂದ್ಯದಲ್ಲೇ ಆರ್ಸಿಬಿಯ ನ್ಯೂನತೆಗಳು ಜಗಜ್ಜಾಹೀರಾಗಿವೆ. ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಬಲಹೀನವಾಗಿ ಕಾಣುತ್ತಿದೆ. ಅದರಲ್ಲೂ ಬೌಲಿಂಗ್ ವಿಭಾಗದಲ್ಲಿ ಬದಲಾವಣೆಯ ಅಗತ್ಯವಿದೆ. ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ತಂಡದ ಬೌಲರ್ಗಳು ಪರಿಣಾಮಕಾರಿಯಾಗಿರಲಿಲ್ಲ. ಹೀಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲ್ಲಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಾದರೂ ಬೌಲರ್‌ಗಳಿಂದ ಉತ್ತಮ ಪ್ರದರ್ಶನದ ಅಗತ್ಯವಿದೆ.
IPL 2024: ಸೋಲಿನೊಂದಿಗೆ ಲೀಗ್ ಆರಂಭಿಸಿದ ಆರ್ಸಿಬಿ
ಮಂಕಾದ ಬ್ಯಾಟಿಂಗ್ ವಿಭಾಗ
ಬೌಲಿಂಗ್ ಜೊತೆಗೆ ಬ್ಯಾಟಿಂಗ್ನಲ್ಲೂ ಆರ್ಸಿಬಿ ಬ್ಯಾಟರ್ಗಳು ಫಾರ್ಮ್ ಕಂಡುಕೊಳ್ಳಬೇಕಾಗಿದೆ. ಆರಂಭಿಕರಾಗಿ ಫಾಫ್ ಡುಪ್ಲೆಸಿಸ್ ಅಬ್ಬರಿಸಿದ್ದನ್ನು ಬಿಟ್ಟರೆ ಉಳಿದಂತೆ ತಂಡದ ಅಗ್ರ ಕ್ರಮಾಂಕ ಸಪ್ಪೆ ಪ್ರದರ್ಶನ ನೀಡಿತ್ತು. ವಿರಾಟ್ ಕೊಹ್ಲಿ ಸೇರಿದಂತೆ ರಜತ್ ಪಾಟಿದರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ರಾಮರೂನ್ ಗ್ರೀನ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಇದು ತಂಡವನ್ನು ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿಸಿತ್ತು. ಆದರೆ ಕೆಳಕ್ರಮಾಂಕದಲ್ಲಿ ಜೊತೆಯಾದ ದಿನೇಶ್ ಕಾರ್ತಿಕ್ ಮತ್ತು ಅನುಜ್ ರಾವತ್ ಜಾಣತನದಿಂದ ಆಟವಾಡಿ ತಂಡದ ಸ್ಕೋರ್ ಅನ್ನು 170 ರನ್‌ಗಳ ಗಡಿ ದಾಟಿದರು. ಆದರೆ ಕೆಳ ಕ್ರಮಾಂಕದ ಮೇಲೆ ಪ್ರತಿ ಬಾರಿಯೂ ಅವಲಂಬಿತವಾಗುವುದು ಸಾಧ್ಯವಿಲ್ಲ. ಹೀಗಾಗಿ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ದೊಡ್ಡ ಇನ್ನಿಂಗ್ಸ್ ಆಡಬೇಕಾಗುತ್ತದೆ.
ತಂಡಗಳು ಈ ಕೆಳಗಿನಂತಿವೆ:
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್ ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಮ್ಯಾಥ್ಯೂ ಶಾರ್ಟ್, ಪ್ರಭ್‌ಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ, ಸಿಕಂದರ್ ರಜಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟೇಡೆ, ಅರ್ಷ್‌ದೀಪ್ ಸಿಂಗ್, ನಾಥನ್ ಎಲ್ಲಿಸ್, ಸ್ಯಾಮ್ ಕರನ್, ಕಗಿಸೊ ರಬಾಡ, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಹರ್‌ಪ್ರೀತ್ ಭಾತ್ರಿಯಾ ., ವಿದ್ವತ್ ಕಾವೇರಪ್ಪ, ಶಿವಂ ಸಿಂಗ್, ಹರ್ಷಲ್ ಪಟೇಲ್, ಕ್ರಿಸ್ ವೋಕ್ಸ್, ಅಶುತೋಷ್ ಶರ್ಮಾ, ವಿಶ್ವನಾಥ್ ಪ್ರತಾಪ್ ಸಿಂಗ್, ಶಶಾಂಕ್ ಸಿಂಗ್, ತನಯ್ ತ್ಯಾಗರಾಜನ್, ಪ್ರಿನ್ಸ್ ಚೌಧರಿ, ರಿಲೆ ರೋಸ್ಸೋ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:17 pm, Sun, 24 March 24