ಐಪಿಎಲ್ 2024 (IPL 2024) ರ ಆರನೇ ಪಂದ್ಯದಲ್ಲಿ ಸೋಲಿನೊಂದಿಗೆ ಬರುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮೊದಲ ಪಂದ್ಯದಲ್ಲೇ ಗೆಲುವು ಸಾಧಿಸಿರುವ ಪಂಜಾಬ್ ಕಿಂಗ್ಸ್ (Royal Challengers Bengaluru vs Punjab Kings) ಮುಖಾಮುಖಿಯಾಗುತ್ತಿವೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ನಡೆಯುತ್ತಿರುವ ಈ ಪಂದ್ಯದಲ್ಲಿ ಮತ್ತೊಮ್ಮೆ ಟಾಸ್ ಗೆದ್ದ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಪಂಜಾಬ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಉಭಯ ತಂಡಗಳಲ್ಲಿ ಯಾರ್ಯಾರು ಸ್ಥಾನ ಪಡೆದಿದ್ದಾರೆ ಎಂಬುದರ ವಿವರ ಇಲ್ಲಿದೆ.
ಐಪಿಎಲ್‌ನಲ್ಲಿ ಇದುವರೆಗೆ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ 31 ಪಂದ್ಯಗಳು ನಡೆದಿವೆ. ಈ ಪೈಕಿ ಆರ್‌ಸಿಬಿ 14 ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ 17 ಪಂದ್ಯಗಳನ್ನು ಗೆದ್ದಿದೆ. ಅದೇ ಸಮಯದಲ್ಲಿ, ಬೆಂಗಳೂರಿನಲ್ಲಿ ಉಭಯ ತಂಡಗಳ ನಡುವೆ 11 ಪಂದ್ಯಗಳು ನಡೆದಿವೆ. ಇದರಲ್ಲಿ ಆರ್‌ಸಿಬಿ 6 ಮತ್ತು ಪಂಜಾಬ್ ಐದರಲ್ಲಿ ಗೆದ್ದಿದೆ. ಒಟ್ಟಾರೆ ಅಂಕಿಅಂಶಗಳನ್ನು ಗಮನಿಸಿದರೆ, ಆರ್‌ಸಿಬಿ ವಿರುದ್ಧ ಪಂಜಾಬ್ ಮೇಲುಗೈ ಸಾಧಿಸಿದೆ. ತವರು ನೆಲದಲ್ಲಿ ಆರ್‌ಸಿಬಿ, ಪಂಜಾಬ್ ವಿರುದ್ಧ ಹೆಚ್ಚು ಬಾರಿ ಗೆಲುವಿನ ರುಚಿ ಕಂಡಿರುವುದು ಸಮಾಧಾನಕರ ಸಂಗತಿಯಾಗಿದೆ.
RCB vs PBKS Live Score, IPL 2024: ಬೆಂಗಳೂರಿನಲ್ಲಿ ಟಾಸ್ ಗೆದ್ದ ಆರ್‌ಸಿಬಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಲ್.
ಇಂಪ್ಯಾಕ್ಟ್ ಪ್ಲೇಯರ್: ಸುಯ್ಯಶ್ ಪ್ರಭುದೇಸಾಯಿ, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ವೈಶಾಖ್ ವಿಜಯ್ಕುಮಾರ್, ಸ್ವಪ್ನಿಲ್ ಸಿಂಗ್
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಪ್ರಭ್ಸಿಮ್ರಾನ್ ಸಿಂಗ್, ಸ್ಯಾಮ್ ಕರನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್. ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಹಾರ್.
ಇಂಪ್ಯಾಕ್ಟ್ ಪ್ಲೇಯರ್: ಅರ್ಶ್ದೀಪ್ ಸಿಂಗ್, ರಿಲೆ ರೋಸ್ಸೌ, ತನ್ಮಯ್ ತ್ಯಾಗರಾಜನ್, ಹರ್ಪ್ರೀತ್ ಭಾಟಿಯಾ, ವಿಧ್ವತ್ ಕಾವೇರಪ್ಪ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:18 pm, Mon, 25 March 24