IPL 2024, RCB vs SRH: ಮ್ಯಾಕ್ಸ್ವೆಲ್, ಸಿರಾಜ್ ಔಟ್! ಬದಲಿಯಾಗಿ ಬಂದಿದ್ಯಾರು?
RCB vs SRH: ಇಂದು ಐಪಿಎಲ್‌ನ 30ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಆರ್‌ಸಿಬಿಯ ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಇಂದು ಐಪಿಎಲ್‌ನ 30ನೇ (IPL 2024) ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru vs Sunrisers Hyderabad) ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಆರ್‌ಸಿಬಿಯ ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy stadium) ನಡೆಯುತ್ತಿದೆ. ಸನ್‌ರೈಸರ್ಸ್ ಹೈದರಾಬಾದ್ ತನ್ನ ಕೊನೆಯ ಎರಡು ಪಂದ್ಯಗಳನ್ನು ಗೆದ್ದು ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇತ್ತ ಕಳಪೆ ಫಾರ್ಮ್‌ನಲ್ಲಿರುವ ಆರ್‌ಸಿಬಿ ಪುನರಾಗಮನದ ಮೇಲೆ ಕಣ್ಣಿಟ್ಟಿದೆ. ಹೈದರಾಬಾದ್ ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸಿದ್ದು, 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆರ್‌ಸಿಬಿ 6 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಅಂದರೆ ಹತ್ತನೇ ಸ್ಥಾನದಲ್ಲಿದೆ. ಇದೀಗ ಆರ್‌ಸಿಬಿ ಟೂರ್ನಿಯಲ್ಲಿ ಜೀವಂತವಾಗಿರಬೇಕೆಂದರೆ ಉಳಿದ ಬಹುತೇಕ ಪಂದ್ಯಗಳನ್ನು ಗೆಲ್ಲಲೇಬೇಕು.
ಎರಡು ತಂಡಗಳ ಮುಖಾಮುಖಿ ವರದಿ
ಎರಡು ತಂಡಗಳ ಮುಖಾಮುಖಿ ವರದಿ ನೋಡುವುದಾದರೆ.. ಇದುವರೆಗೆ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ಒಟ್ಟು 23 ಪಂದ್ಯಗಳು ನಡೆದಿವೆ. ಈ ಪೈಕಿ ಬೆಂಗಳೂರು 10 ಮತ್ತು ಹೈದರಾಬಾದ್ 12 ಪಂದ್ಯಗಳನ್ನು ಗೆದ್ದಿವೆ. ಚಿನ್ನಸ್ವಾಮಿಯಲ್ಲಿ ಇಬ್ಬರ ನಡುವೆ ಎಂಟು ಪಂದ್ಯಗಳು ನಡೆದಿವೆ. ಈ ಪೈಕಿ ಬೆಂಗಳೂರು ಐದರಲ್ಲಿ ಗೆದ್ದಿದ್ದರೆ, ಹೈದರಾಬಾದ್ ಎರಡು ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಉಭಯ ತಂಡಗಳ ನಡುವೆ ಕಳೆದ ಐದು ಪಂದ್ಯಗಳಲ್ಲಿ ಬೆಂಗಳೂರು ಮೂರರಲ್ಲಿ ಗೆದ್ದಿದ್ದರೆ, ಹೈದರಾಬಾದ್ ಎರಡರಲ್ಲಿ ಗೆದ್ದಿದೆ. ಕಳೆದ ಎರಡು ಪಂದ್ಯಗಳಲ್ಲಿ ಬೆಂಗಳೂರು, ಹೈದರಾಬಾದ್ ತಂಡವನ್ನು ಸೋಲಿಸಿದ್ದು, ಡುಪ್ಲೆಸಿಸ್ ಪಡೆ ಸತತ ಮೂರನೇ ಗೆಲುವು ಸಾಧಿಸಲು ಪ್ರಯತ್ನಿಸಲ್ಲಿದೆ.
RCB vs SRH Live Score, IPL 2024: ಟಾಸ್ ಗೆದ್ದ ಆರ್‌ಸಿಬಿ; ಹೈದರಾಬಾದ್ ಬ್ಯಾಟಿಂಗ್
ಉಭಯ ತಂಡಗಳು
ಸನ್‌ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್‌ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕಟ್, ಟಿ.ನಟರಾಜನ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ವಿಲ್ ಜಾಕ್ವೆಸ್, ರಜತ್ ಪಾಟಿದಾರ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ವಿಜಯ್‌ಕುಮಾರ್ ವೈಶಾಕ್, ರೀಸ್ ಟೋಪ್ಲಿ, ಲಾಕಿ ಫರ್ಗುಸನ್, ಯಶ್ ದಯಾಳ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:05 pm, Mon, 15 April 24
