IPL 2024: ಐಪಿಎಲ್ ವೇಳಾಪಟ್ಟಿಯ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ಚೇರ್ಮನ್ ಅರುಣ್ ಧುಮಾಲ್

IPL 2024 Schedule: 17ನೇ ಆವೃತ್ತಿಯ ಐಪಿಎಲ್ ಇದೇ ಮಾರ್ಚ್​ ಹಾಗೂ ಮೇ ತಿಂಗಳ ನಡುವೆ ನಡೆಯಲ್ಲಿದೆ ಎಂಬ ಮಾಹಿತಿಗಳು ಹರಿದಾಡುತ್ತಿವೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದೀಗ ಬಹುನಿರೀಕ್ಷಿತ ಐಪಿಎಲ್ ವೇಳಾಪಟ್ಟಿಯ ಬಗ್ಗೆ ಅಧ್ಯಕ್ಷ ಅರುಣ್ ಧುಮಾಲ್ ಕೆಲವು ಮಾಹಿತಿ ನೀಡಿದ್ದಾರೆ.

IPL 2024: ಐಪಿಎಲ್ ವೇಳಾಪಟ್ಟಿಯ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ಚೇರ್ಮನ್ ಅರುಣ್ ಧುಮಾಲ್
ಐಪಿಎಲ್ 2024
Follow us
ಪೃಥ್ವಿಶಂಕರ
|

Updated on:Jan 24, 2024 | 3:50 PM

17ನೇ ಆವೃತ್ತಿಯ ಐಪಿಎಲ್​ಗೆ (IPL 2024) ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ಅದರಂತೆ ಇನ್ನೇರಡು ತಿಂಗಳಲ್ಲಿ ಈ ಟೂರ್ನಿಯನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ. ಆದರೆ ಮುಂಬರುವ ಲೋಕಸಭಾ ಚುನಾವಣೆಯ ಕಾರಣದಿಂದಾಗಿ ಟೂರ್ನಿಯ ವೇಳಾಪಟ್ಟಿಯನ್ನು ಇದುವರೆಗು ಪ್ರಕಟಿಸಲಾಗಿಲ್ಲ. ಆದರೀಗ ಐಪಿಎಲ್ ವೇಳಾಪಟ್ಟಿಯ ಬಗ್ಗೆ ಐಪಿಎಲ್ ಚೇರ್ಮನ್ ಅರುಣ್ ಧುಮಾಲ್ (Arun Dhumal) ಬಿಗ್ ಅಪ್‌ಡೇಟ್ ನೀಡಿದ್ದಾರೆ. ಅದರಂತೆ ಈ ಟೂರ್ನಿಯ ವೇಳಾಪಟ್ಟಿ ಎರಡು ಭಾಗಗಳಾಗಿ ಪ್ರಕಟವಾಗಬಹುದು ಎಂಬ ಮಾಹಿತಿಯನ್ನು ಧುಮಾಲ್ ನೀಡಿದ್ದಾರೆ. ಇದೇ ವೇಳೆ ಮಾರ್ಚ್ 22ರಿಂದ ಐಪಿಎಲ್ ಆರಂಭವಾಗುವ ಬಗ್ಗೆಯೂ ಹೇಳಿಕೆ ನೀಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಧುಮಾಲ್ ಈ ಮಾಹಿತಿ ನೀಡಿದ್ದು, ಐಪಿಎಲ್ ಅಂತಿಮ ವೇಳಾಪಟ್ಟಿಯ ಸ್ಪಷ್ಟ ಚಿತ್ರಣ ಸಿಗಲು ಸಮಯ ಹಿಡಿಯಲಿದೆ ಎಂದಿದ್ದಾರೆ.

ಐಪಿಎಲ್ ಯಾವಾಗ ಆರಂಭವಾಗುತ್ತದೆ?

ಇನ್ನು ಐಪಿಎಲ್ ಆರಂಭದ ಬಗ್ಗೆ ಮಾತನಾಡಿದ ಅರುಣ್ ಕುಮಾರ್ ಧುಮಾಲ್, ಐಪಿಎಲ್ 2024 ರ ದಿನಾಂಕಗಳ ಬಗ್ಗೆ ಸರ್ಕಾರದೊಂದಿಗೆ ನಿರಂತರ ಚರ್ಚೆ ಮಾಡುತ್ತಿದ್ದೇವೆ. ಆದರೆ ದಿನಾಂಕಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ ಆದರೆ ನಾವು ತಾತ್ಕಾಲಿಕ ದಿನಾಂಕಗಳ ಬಗ್ಗೆ ಮಾತನಾಡಿದರೆ ಪಂದ್ಯಾವಳಿಯು ಮಾರ್ಚ್ 22 ರಿಂದ ಪ್ರಾರಂಭವಾಗಬಹುದು ಮತ್ತು ಮೇ 26 ರವರೆಗೆ ನಡೆಯಬಹುದು. ಚುನಾವಣೆ ದಿನಾಂಕ ನಿರ್ಧಾರವಾದ ಬಳಿಕವಷ್ಟೇ ಐಪಿಎಲ್ 17ರ ಸಂಪೂರ್ಣ ವೇಳಾಪಟ್ಟಿ ನಿರ್ಧಾರವಾಗಲಿದೆ ಎಂದು ಧುಮಾಲ್ ಹೇಳಿದ್ದಾರೆ.

ಎರಡು ಭಾಗಗಳಲ್ಲಿ ಬರಲಿದೆ ಐಪಿಎಲ್ ವೇಳಾಪಟ್ಟಿ

ಲೋಕಸಭಾ ಚುನಾವಣೆಯ ಇರುವ ಕಾರಣ ಮುಂದಿನ ಐಪಿಎಲ್ ವೇಳಾಪಟ್ಟಿಯ ಬಗ್ಗೆ ಊಹಾಪೋಹಗಳು ಎದ್ದಿವೆ. ಈ ಬಗ್ಗೆ ಮಾತನಾಡಿದ ಧುಮಾಲ್, ಮುಂದಿನ ಆವೃತ್ತಿಯ ಐಪಿಎಲ್​ನ ವೇಳಾಪಟ್ಟಿ ಎರಡು ಭಾಗಗಳಲ್ಲಿ ಪ್ರಕಟವಾಗಬಹುದು. ಏಕೆಂದರೆ ಐಪಿಎಲ್ ನಡುವೆ ಲೋಕಸಭಾ ಚುನಾವಣಾ ದಿನಾಂಕಗಳು ಪ್ರಕಟವಾಗಲಿವೆ. ಆದ್ದರಿಂದ, ಪಂದ್ಯಾವಳಿಯನ್ನು ಪ್ರಾರಂಭಿಸಲು, ಮೊದಲ ಕೆಲವು ಪಂದ್ಯಗಳ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಬಹುದು. ಅಂದರೆ ಕೆಲವು ಆರಂಭಿಕ ಪಂದ್ಯಗಳ ವೇಳಾಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದೆ. ಚುನಾವಣಾ ದಿನಾಂಕ ನಿರ್ಧಾರವಾದ ನಂತರ ಉಳಿದ ಪಂದ್ಯಗಳ (ಟೂರ್ನಮೆಂಟ್) ವೇಳಾಪಟ್ಟಿ ಬರಲಿದೆ ಎಂದು ಧುಮಾಲ್ ಹೇಳಿದ್ದಾರೆ.

ಡಬ್ಲ್ಯುಪಿಎಲ್ ವೇಳಾಪಟ್ಟಿ ಬಿಡುಗಡೆ

ಮಹಿಳಾ ಪ್ರೀಮಿಯರ್ ಲೀಗ್ (WPL) ನ ಎರಡನೇ ಆವೃತ್ತಿಯ ವೇಳಾಪಟ್ಟಿಯನ್ನು ಇತ್ತೀಚೆಗೆ ಬಿಸಿಸಿಐ ಬಿಡುಗಡೆ ಮಾಡಿದೆ. ಅದರಂತೆ ಈ ಆವೃತ್ತಿಯ ಡಬ್ಲ್ಯುಪಿಎಲ್ ಫೆಬ್ರವರಿ 23 ರಿಂದ ಪ್ರಾರಂಭವಾಗಲಿದೆ. ಇದರ ಮೊದಲ ಪಂದ್ಯ ಕಳೆದ ಆವೃತ್ತಿಯ ಫೈನಲಿಸ್ಟ್‌ಗಳಾದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆಯಲಿದೆ . ಈ ಟೂರ್ನಿಯ ಫೈನಲ್ ಪಂದ್ಯ ಮಾರ್ಚ್ 17 ರಂದು ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:47 pm, Wed, 24 January 24

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ