IPL 2024: KKR ತಂಡಕ್ಕೆ ಶ್ರೇಯಸ್ ಅಯ್ಯರ್ ಕ್ಯಾಪ್ಟನ್
IPL 2024 Auction: ಈ ಬಾರಿಯ ಐಪಿಎಲ್ಗೂ ಮುನ್ನ ಕೆಕೆಆರ್ ಫ್ರಾಂಚೈಸಿ ಒಟ್ಟು 12 ಆಟಗಾರರನ್ನು ಬಿಡುಗಡೆ ಮಾಡಿದೆ. ಹಾಗೆಯೇ 15 ಆಟಗಾರರನ್ನು ಉಳಿಸಿಕೊಂಡಿದೆ. ಅಂದರೆ ಈ ಮಿನಿ ಹರಾಜಿನ ಮೂಲಕ ಕೆಕೆಆರ್ ಒಟ್ಟು 10 ಆಟಗಾರರನ್ನು ಖರೀದಿಸುವ ಅವಕಾಶವನ್ನು ಹೊಂದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಶ್ರೇಯಸ್ ಅಯ್ಯರ್ (Shreyas Iyer) ಮುನ್ನಡೆಸಲಿದ್ದಾರೆ. ಕಳೆದ ಸೀಸನ್ನಲ್ಲಿ ಕೆಕೆಆರ್ ತಂಡದ ನಾಯಕರಾಗಿದ್ದ ನಿತೀಶ್ ರಾಣಾ ಈ ಬಾರಿ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.
ಐಪಿಎಲ್ 2022 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಿದ್ದರು. ಈ ವೇಳೆ ಕೆಕೆಆರ್ ತಂಡ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಇದಾಗ್ಯೂ 401 ರನ್ ಕಲೆಹಾಕುವ ಮೂಲಕ ಕ್ಯಾಪ್ಟನ್ ಅಯ್ಯರ್ ಮಿಂಚಿದ್ದರು.
ಆದರೆ 2023 ರಲ್ಲಿ ಗಾಯಗೊಂಡಿದ್ದ ಹಿನ್ನಲೆ ಶ್ರೇಯಸ್ ಅಯ್ಯರ್ ಐಪಿಎಲ್ನಿಂದ ಹಿಂದೆ ಸರಿದಿದ್ದರು. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಹೊಸ ನಾಯಕನಾಗಿ ನಿತೀಶ್ ರಾಣಾ ಅವರನ್ನು ಆಯ್ಕೆ ಮಾಡಲಾಗಿತ್ತು.
ಇದೀಗ ಕೆಕೆಆರ್ ಪರ ಮತ್ತೆ ಕಣಕ್ಕಿಳಿಯಲು ಸಜ್ಜಾಗಿರುವ ಶ್ರೇಯಸ್ ಅಯ್ಯರ್ಗೆ ಮತ್ತೆ ನಾಯಕನ ಸ್ಥಾನ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಅದರಂತೆ ಐಪಿಎಲ್ ಸೀಸನ್ 17 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಶ್ರೇಯಸ್ ಮುನ್ನಡೆಸಲಿದ್ದಾರೆ.
12 ಆಟಗಾರರನ್ನು ರಿಲೀಸ್ ಮಾಡಿದ ಕೆಕೆಆರ್:
ಈ ಬಾರಿಯ ಐಪಿಎಲ್ಗೂ ಮುನ್ನ ಕೆಕೆಆರ್ ಫ್ರಾಂಚೈಸಿ ಒಟ್ಟು 12 ಆಟಗಾರರನ್ನು ಬಿಡುಗಡೆ ಮಾಡಿದೆ. ಹಾಗೆಯೇ 15 ಆಟಗಾರರನ್ನು ಉಳಿಸಿಕೊಂಡಿದೆ. ಅಂದರೆ ಈ ಮಿನಿ ಹರಾಜಿನ ಮೂಲಕ ಕೆಕೆಆರ್ ಒಟ್ಟು 10 ಆಟಗಾರರನ್ನು ಖರೀದಿಸುವ ಅವಕಾಶವನ್ನು ಹೊಂದಿದೆ. ಹೀಗಾಗಿ ಈ ಬಾರಿ ಕೆಕೆಆರ್ ತಂಡದಲ್ಲಿ ಕೆಲ ಹೊಸ ಮುಖಗಳು ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.
ಕೋಲ್ಕತ್ತಾ ನೈಟ್ ರೈಡರ್ಸ್ ಬಿಡುಗಡೆ ಮಾಡಿದ ಆಟಗಾರರು: ಶಕೀಬ್ ಅಲ್ ಹಸನ್, ಲಿಟ್ಟನ್ ದಾಸ್, ಆರ್ಯ ದೇಸಾಯಿ, ಡೇವಿಡ್ ವೀಝ, ಶಾರ್ದೂಲ್ ಠಾಕೂರ್, ನಾರಾಯಣ್ ಜಗದೀಸನ್, ಮಂದೀಪ್ ಸಿಂಗ್, ಕುಲ್ವಂತ್ ಖೆಜ್ರೋಲಿಯಾ, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ಜಾನ್ಸನ್ ಚಾರ್ಲ್ಸ್.
ಇದನ್ನೂ ಓದಿ: RCB ತಂಡದ ಅತ್ಯಂತ ಕೆಟ್ಟ ಆಯ್ಕೆಗಳಾವುವು ಗೊತ್ತಾ?
ಕೋಲ್ಕತ್ತಾ ನೈಟ್ ರೈಡರ್ಸ್ ಉಳಿಸಿಕೊಂಡಿರುವ ಆಟಗಾರರು: ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ರಹಮಾನುಲ್ಲಾ ಗುರ್ಬಾಝ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್, ವೈಭವ್ ಅರೋರಾ, ಸುಯಶ್ ಶರ್ಮಾ, ಕುಲ್ವಂತ್ ಖೆಜ್ರೋಲಿಯಾ, ಮನ್‌ದೀಪ್ ಸಿಂಗ್, ಜೇಸನ್ ರಾಯ್.