IPL 2024: ಆರೆಂಜ್ ಆರ್ಮಿ…ಸುನಾಮಿ: ಬೆಂಕಿ ಸಾಂಗ್​ನೊಂದಿಗೆ ಅಭಿಮಾನಿಗಳ ಕಿಕ್ಕೇರಿಸಿದ SRH

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಶುಕ್ರವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಕಣಕ್ಕಿಳಿಯಲಿದೆ. ಇನ್ನು ಸನ್​ರೈಸರ್ಸ್ ಹೈದರಾಬಾದ್ ತಂಡವು ಮಾರ್ಚ್ 23 ರಂದು ಕೆಕೆಆರ್ ವಿರುದ್ಧ ಕಣಕ್ಕಿಳಿಯುವ ಮೂಲಕ ಐಪಿಎಲ್ ಅಭಿಯಾನ ಆರಂಭಿಸಲಿದೆ.

IPL 2024: ಆರೆಂಜ್ ಆರ್ಮಿ...ಸುನಾಮಿ: ಬೆಂಕಿ ಸಾಂಗ್​ನೊಂದಿಗೆ ಅಭಿಮಾನಿಗಳ ಕಿಕ್ಕೇರಿಸಿದ SRH
Pat Cummins-Travis Head
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 21, 2024 | 10:45 AM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಗಾಗಿ  ಸನ್​ರೈಸರ್ಸ್ ಹೈದರಾಬಾದ್ (SRH) ಫ್ರಾಂಚೈಸಿ  ಆ್ಯಂಥಮ್ ಹಾಡು ಬಿಡುಗಡೆ ಮಾಡಿದೆ. ಟಪ್ಪಾಂಗುಚ್ಚಿ ಶೈಲಿಯಲ್ಲಿ ಮೂಡಿಬಂದಿರುವ ಭರ್ಜರಿ ಗೀತೆಗೆ ಎಸ್​ಆರ್​ಹೆಚ್​ ಅಭಿಮಾನಿಗಳು ಫಿದಾ ಆಗಿದ್ದಾರೆ. ಈಗಾಗಲೇ ತಂಡದ ಹೊಸ ಗೀತೆಯು ವೈರಲ್ ಆಗಿದ್ದು, ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಈ ವಿಶೇಷ ಹಾಡಿಗೆ ಟ್ಯೂನ್ ಕಂಪೋಸ್ ಮಾಡಿದ್ದು VuSe. ಈ ರಾಗ ಸಂಯೋಜನೆಗೆ ಶ್ರೀನಿವಾಸ್ ಮೌಳಿ ಸಾಹಿತ್ಯ ಬರೆದಿದ್ದು, VuSe ಮತ್ತು ಕ್ರಿಸ್ಪಿ ಕಂಠದಾನ ಮಾಡಿದ್ದಾರೆ. ಅಲ್ಲದೆ ಈ ಆ್ಯಂಥಮ್ ಸಾಂಗ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರರಾದ ಪ್ಯಾಮ್ ಕಮಿನ್ಸ್, ಭುವನೇಶ್ವರ್ ಕುಮಾರ್, ಟ್ರಾವಿಸ್ ಹೆಡ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್ ಸೇರಿದಂತೆ ಕೆಲ ಪ್ಲೇಯರ್ಸ್ ಕಾಣಿಸಿಕೊಂಡಿದ್ದಾರೆ. ಇದೀಗ ಎಸ್ಈ ಗೀತೆಯು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಐಪಿಎಲ್ ಆರಂಭಕ್ಕೂ ಮುನ್ನ ಅಭಿಮಾನಿಗಳಿಗೆ ಕಿಕ್ಕೇರಿಸುವಲ್ಲಿ ಎಸ್​ಆರ್​ಹೆಚ್ ಫ್ರಾಂಚೈಸಿ ಯಶಸ್ವಿಯಾಗಿದೆ.

SRH ತಂಡ ಆ್ಯಂಥಮ್ ಸಾಂಗ್:

SRH ತಂಡಕ್ಕೆ ಹೊಸ ನಾಯಕ:

ಈ ಬಾರಿಯ ಐಪಿಎಲ್​ನಲ್ಲಿ SRH ತಂಡವು ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಕಳೆದ ಸೀಸನ್​ನಲ್ಲಿ ಐಡೆನ್ ಮಾರ್ಕ್ರಾಮ್ ಮುಂದಾಳತ್ವದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಕಣಕ್ಕಿಳಿದಿತ್ತು. ಆದರೆ ಟೂರ್ನಿಯುದ್ದಕ್ಕೂ ವೈಫಲ್ಯ ಅನುಭವಿಸಿದ್ದ SRH ಕೊನೆಯ ಸ್ಥಾನ ಅಲಂಕರಿಸುವ ಮೂಲಕ ನಿರಾಸೆ ಮೂಡಿಸಿತ್ತು.

ಹೀಗಾಗಿ ಐಡೆನ್ ಮಾರ್ಕ್ರಾಮ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಅಲ್ಲದೆ ಹೊಸದಾಗಿ ತಂಡಕ್ಕೆ ಬಂದಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್​ಗೆ ಕ್ಯಾಪ್ಟನ್ ಪಟ್ಟ ಕಟ್ಟಲಾಗಿದೆ. ಅದರಂತೆ ಈ ಬಾರಿ SRH ಕಮಿನ್ಸ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿದೆ.

ಇದನ್ನೂ ಓದಿ: IPL 2024: ಐಪಿಎಲ್​ನಿಂದ 10 ಆಟಗಾರರು ಔಟ್

ಸನ್​ರೈಸರ್ಸ್​ ಹೈದರಾಬಾದ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಮಾರ್ಕೊ ಯಾನ್ಸೆನ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಸನ್ವಿರ್ ಸಿಂಗ್, ಹೆನ್ರಿಕ್ ಕ್ಲಾಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಅಗರ್ವಾಲ್, ಟಿ. ನಟರಾಜನ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ಮಾರ್ಕಾಂಡೆ, ಉಪೇಂದ್ರ ಸಿಂಗ್ ಯಾದವ್, ಉಮ್ರಾನ್ ಮಲಿಕ್, ನಿತೀಶ್ ಕುಮಾರ್ ರೆಡ್ಡಿ, ಫಜಲ್ಹಕ್ ಫಾರೂಕಿ, ಶಹಬಾಝ್ ಅಹ್ಮದ್, ಟ್ರಾವಿಸ್ ಹೆಡ್, ವನಿಂದು ಹಸರಂಗ, ಜಯದೇವ್ ಉನಾದ್ಕತ್, ಆಕಾಶ್ ಸಿಂಗ್, ಜಾತವೇಧ್ ಸುಬ್ರಮಣ್ಯನ್.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ