ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಗಾಗಿ ಸನ್ರೈಸರ್ಸ್ ಹೈದರಾಬಾದ್ (SRH) ಫ್ರಾಂಚೈಸಿ ಆ್ಯಂಥಮ್ ಹಾಡು ಬಿಡುಗಡೆ ಮಾಡಿದೆ. ಟಪ್ಪಾಂಗುಚ್ಚಿ ಶೈಲಿಯಲ್ಲಿ ಮೂಡಿಬಂದಿರುವ ಭರ್ಜರಿ ಗೀತೆಗೆ ಎಸ್ಆರ್ಹೆಚ್ ಅಭಿಮಾನಿಗಳು ಫಿದಾ ಆಗಿದ್ದಾರೆ. ಈಗಾಗಲೇ ತಂಡದ ಹೊಸ ಗೀತೆಯು ವೈರಲ್ ಆಗಿದ್ದು, ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ವಿಶೇಷ ಹಾಡಿಗೆ ಟ್ಯೂನ್ ಕಂಪೋಸ್ ಮಾಡಿದ್ದು VuSe. ಈ ರಾಗ ಸಂಯೋಜನೆಗೆ ಶ್ರೀನಿವಾಸ್ ಮೌಳಿ ಸಾಹಿತ್ಯ ಬರೆದಿದ್ದು, VuSe ಮತ್ತು ಕ್ರಿಸ್ಪಿ ಕಂಠದಾನ ಮಾಡಿದ್ದಾರೆ. ಅಲ್ಲದೆ ಈ ಆ್ಯಂಥಮ್ ಸಾಂಗ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರರಾದ ಪ್ಯಾಮ್ ಕಮಿನ್ಸ್, ಭುವನೇಶ್ವರ್ ಕುಮಾರ್, ಟ್ರಾವಿಸ್ ಹೆಡ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್ ಸೇರಿದಂತೆ ಕೆಲ ಪ್ಲೇಯರ್ಸ್ ಕಾಣಿಸಿಕೊಂಡಿದ್ದಾರೆ. ಇದೀಗ ಎಸ್ಈ ಗೀತೆಯು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಐಪಿಎಲ್ ಆರಂಭಕ್ಕೂ ಮುನ್ನ ಅಭಿಮಾನಿಗಳಿಗೆ ಕಿಕ್ಕೇರಿಸುವಲ್ಲಿ ಎಸ್ಆರ್ಹೆಚ್ ಫ್ರಾಂಚೈಸಿ ಯಶಸ್ವಿಯಾಗಿದೆ.
𝑺𝒖𝒏𝑹𝒊𝒔𝒆𝒓𝒔 𝒎𝒆𝒎𝒖 𝒃𝒓𝒐,
𝑷𝒂𝒌𝒌𝒂 𝒊𝒏𝒌𝒐 𝒓𝒂𝒏𝒈𝒆 𝒃𝒓𝒐🧡Our new anthem is here to set your playlist on fire🔥#SRHAnthem2024 #PlayWithFire #OrangeArmy pic.twitter.com/U4xRxhYfGv
— SunRisers Hyderabad (@SunRisers) March 20, 2024
ಈ ಬಾರಿಯ ಐಪಿಎಲ್ನಲ್ಲಿ SRH ತಂಡವು ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಕಳೆದ ಸೀಸನ್ನಲ್ಲಿ ಐಡೆನ್ ಮಾರ್ಕ್ರಾಮ್ ಮುಂದಾಳತ್ವದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಕಣಕ್ಕಿಳಿದಿತ್ತು. ಆದರೆ ಟೂರ್ನಿಯುದ್ದಕ್ಕೂ ವೈಫಲ್ಯ ಅನುಭವಿಸಿದ್ದ SRH ಕೊನೆಯ ಸ್ಥಾನ ಅಲಂಕರಿಸುವ ಮೂಲಕ ನಿರಾಸೆ ಮೂಡಿಸಿತ್ತು.
ಹೀಗಾಗಿ ಐಡೆನ್ ಮಾರ್ಕ್ರಾಮ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಅಲ್ಲದೆ ಹೊಸದಾಗಿ ತಂಡಕ್ಕೆ ಬಂದಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ಗೆ ಕ್ಯಾಪ್ಟನ್ ಪಟ್ಟ ಕಟ್ಟಲಾಗಿದೆ. ಅದರಂತೆ ಈ ಬಾರಿ SRH ಕಮಿನ್ಸ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿದೆ.
ಇದನ್ನೂ ಓದಿ: IPL 2024: ಐಪಿಎಲ್ನಿಂದ 10 ಆಟಗಾರರು ಔಟ್
ಸನ್ರೈಸರ್ಸ್ ಹೈದರಾಬಾದ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಮಾರ್ಕೊ ಯಾನ್ಸೆನ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಸನ್ವಿರ್ ಸಿಂಗ್, ಹೆನ್ರಿಕ್ ಕ್ಲಾಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಅಗರ್ವಾಲ್, ಟಿ. ನಟರಾಜನ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ಮಾರ್ಕಾಂಡೆ, ಉಪೇಂದ್ರ ಸಿಂಗ್ ಯಾದವ್, ಉಮ್ರಾನ್ ಮಲಿಕ್, ನಿತೀಶ್ ಕುಮಾರ್ ರೆಡ್ಡಿ, ಫಜಲ್ಹಕ್ ಫಾರೂಕಿ, ಶಹಬಾಝ್ ಅಹ್ಮದ್, ಟ್ರಾವಿಸ್ ಹೆಡ್, ವನಿಂದು ಹಸರಂಗ, ಜಯದೇವ್ ಉನಾದ್ಕತ್, ಆಕಾಶ್ ಸಿಂಗ್, ಜಾತವೇಧ್ ಸುಬ್ರಮಣ್ಯನ್.