IPL 2024: ಚೆಪಾಕ್ ಮೈದಾನದಲ್ಲಿ ರಾಜಸ್ಥಾನ್- ಹೈದರಾಬಾದ್‌ ಪ್ರದರ್ಶನ ಹೇಗಿದೆ?

IPL 2024: ಶುಕ್ರವಾರ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡನೇ ಕ್ವಾಲಿಫೈಯರ್‌ನ ವಿಜೇತ ತಂಡವು ಮೇ 26 ರಂದು ಫೈನಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.

IPL 2024: ಚೆಪಾಕ್ ಮೈದಾನದಲ್ಲಿ ರಾಜಸ್ಥಾನ್- ಹೈದರಾಬಾದ್‌ ಪ್ರದರ್ಶನ ಹೇಗಿದೆ?
ರಾಜಸ್ಥಾನ್- ಹೈದರಾಬಾದ್
Follow us
ಪೃಥ್ವಿಶಂಕರ
|

Updated on: May 23, 2024 | 10:35 PM

ಶುಕ್ರವಾರ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ ರಾಯಲ್ಸ್ ( Sunrisers Hyderabad and Rajasthan Royals) ತಂಡವನ್ನು ಎದುರಿಸಲಿದೆ. ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ (MA Chidambaram Stadium) ನಡೆಯಲಿದೆ. ಎರಡನೇ ಕ್ವಾಲಿಫೈಯರ್‌ನ ವಿಜೇತ ತಂಡವು ಮೇ 26 ರಂದು ಫೈನಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಅದಕ್ಕೂ ಮುನ್ನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

ಹೈದರಾಬಾದ್​ಗೆ ಏಕೈಕ ಗೆಲುವು

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಇದುವರೆಗೆ 10 ಪಂದ್ಯಗಳನ್ನು ಆಡಿದೆ. ಈ ಅವಧಿಯಲ್ಲಿ ಎಸ್‌ಆರ್‌ಎಚ್‌ 1 ಪಂದ್ಯ ಗೆದ್ದಿದ್ದು, 8ರಲ್ಲಿ ತಂಡ ಸೋಲಿನ ರುಚಿ ಅನುಭವಿಸಿದೆ. ಚೆಪಾಕ್‌ನಲ್ಲಿ ನಡೆದ ಸೂಪರ್ ಓವರ್‌ನಲ್ಲಿ ಹೈದರಾಬಾದ್ 1 ಪಂದ್ಯವನ್ನು ಸೋತಿದೆ. ಅಂದರೆ ಚೆಪಾಕ್‌ನಲ್ಲಿ ಹೈದರಾಬಾದ್‌ನ ಗೆಲುವಿನ ಶೇಕಡಾವಾರು ಕೇವಲ 10 ಆಗಿದೆ. ಈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಯಾವುದೇ ಪಂದ್ಯವನ್ನು ಗೆದ್ದಿಲ್ಲ. ಅಲ್ಲದೆ, ಚೇಸಿಂಗ್ ವೇಳೆ ತಂಡಕ್ಕೆ 1 ಗೆಲುವು ಲಭಿಸಿದೆ. ಈ ಮೈದಾನದಲ್ಲಿ ಹೈದರಾಬಾದ್‌ನ ಗರಿಷ್ಠ ಸ್ಕೋರ್ 177 ರನ್ ಮತ್ತು ಕಡಿಮೆ ಸ್ಕೋರ್ 134 ರನ್ ಆಗಿದೆ.

IPL 2024: ಮಳೆಯಿಂದ ಕ್ವಾಲಿಫೈಯರ್ 2 ರದ್ದಾದರೆ ಯಾವ ತಂಡ ಫೈನಲ್​ಗೇರಲಿದೆ? ಇಲ್ಲಿದೆ ವಿವರ

ರಾಜಸ್ಥಾನಕ್ಕೆ 2 ಗೆಲುವು

ಚೆಪಾಕ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಇದುವರೆಗೆ 9 ಪಂದ್ಯಗಳನ್ನು ಆಡಿದೆ. ಈ ಅವಧಿಯಲ್ಲಿ, ತಂಡವು 2 ಪಂದ್ಯಗಳನ್ನು ಗೆದ್ದಿದ್ದು, 7 ರಲ್ಲಿ ಸೋತಿದೆ. ಈ ಮೈದಾನದಲ್ಲಿ ಮೊದಲು ಬ್ಯಾಟ್ ಮಾಡಿದ ವೇಳೆ ರಾಜಸ್ಥಾನ್ ರಾಯಲ್ಸ್ 2 ಪಂದ್ಯಗಳನ್ನು ಗೆದ್ದಿದೆ. ಇನ್ನು ಚೇಸಿಂಗ್ ಮಾಡುವಾಗ ಆರ್‌ಆರ್ ಯಾವುದೇ ಗೆಲುವು ಪಡೆದಿಲ್ಲ. ಚೆನ್ನೈನ ಈ ಮೈದಾನದಲ್ಲಿ ರಾಜಸ್ಥಾನ ರಾಯಲ್ಸ್‌ನ ಗರಿಷ್ಠ ಸ್ಕೋರ್ 223 ಮತ್ತು ಕಡಿಮೆ ಸ್ಕೋರ್ 141 ರನ್ ಆಗಿದೆ.

ಸಂಭಾವ್ಯ ತಂಡಗಳು

ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ರಾಹುಲ್ ತ್ರಿಪಾಠಿ, ಹೆನ್ರಿಚ್ ಕ್ಲಾಸೆನ್, ನಿತೀಶ್ ರೆಡ್ಡಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಟಿ ನಟರಾಜನ್, ವಿಜಯಕಾಂತ್ ವ್ಯಾಸಕಾಂತ್

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ