AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಹೈದರಾಬಾದ್- ರಾಜಸ್ಥಾನ್ ಕದನಕ್ಕೆ ಮಳೆ ಅಡ್ಡಿ? ನಾಳೆ ಹೇಗಿರಲಿದೆ ಚೆನ್ನೈ ಹವಾಮಾನ?

IPL 2024: ಹೈದರಾಬಾದ್ ಮತ್ತು ರಾಜಸ್ಥಾನ ನಡುವಿನ ಈ ಪಂದ್ಯವನ್ನು ಗೆಲ್ಲುವ ತಂಡವು ಫೈನಲ್‌ಗೆ ಪ್ರವೇಶಿಸಲಿದ್ದು, ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಆದರೆ ಅದಕ್ಕೂ ಮುನ್ನ ಈ ಮಹತ್ವದ ಪಂದ್ಯಕ್ಕೆ ಮಳೆಯ ಕಾಟ ಇದೆಯಾ ಎಂಬುದನ್ನು ತಿಳಿಯಬೇಕಿದೆ.

IPL 2024: ಹೈದರಾಬಾದ್- ರಾಜಸ್ಥಾನ್ ಕದನಕ್ಕೆ ಮಳೆ ಅಡ್ಡಿ? ನಾಳೆ ಹೇಗಿರಲಿದೆ ಚೆನ್ನೈ ಹವಾಮಾನ?
ರಾಜಸ್ಥಾನ್- ಹೈದರಾಬಾದ್
ಪೃಥ್ವಿಶಂಕರ
|

Updated on: May 23, 2024 | 11:10 PM

Share

2024ರ ಐಪಿಎಲ್​ನ (IPL 2024) ಕ್ವಾಲಿಫೈಯರ್-2 ಪಂದ್ಯ ಶುಕ್ರವಾರ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ (Sunrisers Hyderabad vs Rajasthan Royals) ನಡುವೆ ನಡೆಯಲಿದೆ. ಹೈದರಾಬಾದ್ ಮತ್ತು ರಾಜಸ್ಥಾನ ನಡುವಿನ ಈ ಪಂದ್ಯವನ್ನು ಗೆಲ್ಲುವ ತಂಡವು ಫೈನಲ್‌ಗೆ ಪ್ರವೇಶಿಸಲಿದ್ದು, ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಆದರೆ ಅದಕ್ಕೂ ಮುನ್ನ ಈ ಮಹತ್ವದ ಪಂದ್ಯಕ್ಕೆ ಮಳೆಯ ಕಾಟ ಇದೆಯಾ ಎಂಬುದನ್ನು ತಿಳಿಯಬೇಕಿದೆ. ಏಕೆಂದರೆ ಈ ಆವೃತ್ತಿಯಲ್ಲಿ ಮಳೆಯಿಂದಾಗಿ ಮೂರು ಪಂದ್ಯಗಳು ರದ್ದಾಗಿವೆ. ಹೀಗಾಗಿ ನಾಳಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ ಎಂಬುದು ಅಭಿಮಾನಿಗಳ ಆತಂಕದ ವಿಷಯವಾಗಿದೆ.

ಮಳೆಯಾಗುವ ಸಾಧ್ಯತೆ ಇಲ್ಲ

ಹೈದರಾಬಾದ್ ಮತ್ತು ರಾಜಸ್ಥಾನ ನಡುವಿನ ಈ ಪಂದ್ಯ ಚೆನ್ನೈನಲ್ಲಿ ನಡೆಯಲಿದ್ದು, ಶುಕ್ರವಾರ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ, ಚೆನ್ನೈನಲ್ಲಿ ನಡೆಯುವ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ. ಮೇಲೆ ಹೇಲಿದಂತೆ ಪ್ರಸಕ್ತ ಐಪಿಎಲ್ ಸೀಸನ್​ನಲ್ಲಿ ಮೂರು ಪಂದ್ಯಗಳು ಮಳೆಯಿಂದಾಗಿ ಸಂಪೂರ್ಣ ರದ್ದಾಗಿದ್ದು, ಈ ಮಹತ್ವದ ಪಂದ್ಯಕ್ಕೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ಅಭಿಮಾನಿಗಳಿಗೆ ಸಮಾಧಾನದ ಸುದ್ದಿಯಾಗಿದೆ.

ಕ್ವಾಲಿಫೈಯರ್-2 ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಕಡಿಮೆ ಇದ್ದರೂ, ಈ ಪಂದ್ಯಕ್ಕೆ ಮೀಸಲು ದಿನವನ್ನು ಕಾಯ್ದಿರಿಸಿರುವ ಕಾರಣ ಪಂದ್ಯದಲ್ಲಿ ಮಳೆಯಾದರೂ ಆತಂಕ ಪಡುವ ಅಗತ್ಯವಿಲ್ಲ. ಶುಕ್ರವಾರ ಪಂದ್ಯ ನಡೆಯಲು ಸಾಧ್ಯವಾಗದಿದ್ದರೆ ಶನಿವಾರ ಪಂದ್ಯ ನಡೆಯಲಿದೆ. ಆದಾಗ್ಯೂ, ಎರಡೂ ದಿನಗಳಲ್ಲಿ ಯಾವುದೇ ಪಂದ್ಯವಿಲ್ಲದಿದ್ದರೆ, ಸನ್‌ರೈಸರ್ಸ್ ಅಂಕಪಟ್ಟಿಯಲ್ಲಿ ರಾಜಸ್ಥಾನಕ್ಕಿಂತ ಒಂದು ಸ್ಥಾನ ಮುಂದಿರುವುದರಿಂದ ಹೈದರಾಬಾದ್ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ.

IPL 2024: ಚೆಪಾಕ್ ಮೈದಾನದಲ್ಲಿ ರಾಜಸ್ಥಾನ್- ಹೈದರಾಬಾದ್‌ ಪ್ರದರ್ಶನ ಹೇಗಿದೆ?

ಪಂದ್ಯ ರದ್ದಾದರೆ ಯಾರಿಗೆ ಲಾಭ?

ಕ್ವಾಲಿಫೈಯರ್-2 ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಕಡಿಮೆಯಾದರೂ, ಈ ಪಂದ್ಯಕ್ಕೆ ಮೀಸಲು ದಿನವನ್ನು ಕಾಯ್ದಿರಿಸಿರುವ ಕಾರಣ ಪಂದ್ಯದಲ್ಲಿ ಮಳೆಯಾದರೂ ಆತಂಕ ಪಡುವ ಅಗತ್ಯವಿಲ್ಲ. ಶುಕ್ರವಾರ ಪಂದ್ಯ ನಡೆಯಲು ಸಾಧ್ಯವಾಗದಿದ್ದರೆ ಶನಿವಾರ ಪಂದ್ಯ ನಡೆಯಲಿದೆ. ಆದಾಗ್ಯೂ, ಎರಡೂ ದಿನಗಳಲ್ಲಿ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ, ಸನ್‌ರೈಸರ್ಸ್ ಅಂಕಪಟ್ಟಿಯಲ್ಲಿ ರಾಜಸ್ಥಾನಕ್ಕಿಂತ ಒಂದು ಸ್ಥಾನ ಮುಂದಿರುವುದರಿಂದ ಹೈದರಾಬಾದ್ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ.

ಪ್ಲೇಆಫ್‌ ಹೇಗಿತ್ತು?

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಕ್ವಾಲಿಫೈಯರ್-1 ಪಂದ್ಯದಲ್ಲಿ ಎರಡು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಅದ್ಭುತ ಪ್ರದರ್ಶನ ನೀಡಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಮತ್ತೊಂದೆಡೆ, ಐಪಿಎಲ್ 2024 ರ ಎಲಿಮಿನೇಟರ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಕ್ವಾಲಿಫೈಯರ್-2ಗೆ ಪ್ರವೇಶಿಸಿದೆ. ಹೈದರಾಬಾದ್ ತಂಡವು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ, ಆದ್ದರಿಂದ ಕ್ವಾಲಿಫೈಯರ್-1 ಪಂದ್ಯದಲ್ಲಿ ಸೋತರೂ, ಅದರ ಪ್ರಯಾಣವು ಕೊನೆಗೊಂಡಿಲ್ಲ. ರಾಜಸ್ಥಾನವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಕಾರಣ, ಇದೀಗ ಹೈದರಾಬಾದ್ ತಂಡವನ್ನು ಎದುರಿಸಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ