SRH vs RCB, IPL 2024: ಸೇಡಿನ ಸಮರದಲ್ಲಿ ಟಾಸ್ ಗೆದ್ದ ಆರ್​ಸಿಬಿ; ಉಭಯ ತಂಡಗಳು ಹೀಗಿವೆ

|

Updated on: Apr 25, 2024 | 8:11 PM

SRH vs RCB, IPL 2024: ಐಪಿಎಲ್ 17ನೇ ಸೀಸನ್​ನ 41ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಿದೆ.

SRH vs RCB, IPL 2024: ಸೇಡಿನ ಸಮರದಲ್ಲಿ ಟಾಸ್ ಗೆದ್ದ ಆರ್​ಸಿಬಿ; ಉಭಯ ತಂಡಗಳು ಹೀಗಿವೆ
ಆರ್​ಸಿಬಿ- ಎಸ್​ಆರ್​ಹೆಚ್
Follow us on

ಐಪಿಎಲ್ 17ನೇ (IPL 2024) ಸೀಸನ್​ನ 41ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (Sunrisers Hyderabad vs Royal Challengers Bengaluru) ತಂಡವನ್ನು ಎದುರಿಸಿದೆ. ಇದು ಹೈದರಾಬಾದ್‌ಗೆ ಎಂಟನೇ ಮತ್ತು ಆರ್‌ಸಿಬಿಗೆ ಒಂಬತ್ತನೇ ಪಂದ್ಯವಾಗಿದೆ. ಹೈದರಾಬಾದ್ ಇದುವರೆಗೆ ಆಡಿರುವ 7 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿದ್ದರೆ, ಇತ್ತ ಆರ್‌ಸಿಬಿ 9 ಪಂದ್ಯಗಳಲ್ಲಿ 1 ರಲ್ಲಿ ಮಾತ್ರ ಗೆದ್ದಿದೆ. ಹೀಗಾಗಿ ಲೀಗ್​ನಲ್ಲಿ ಆರ್‌ಸಿಬಿ ಸವಾಲು ಬಹುತೇಕ ಮುಗಿದಿದೆ. ಆದರೆ ಹೈದರಾಬಾದ್​ಗೆ ಈ ಪಂದ್ಯದಲ್ಲಿ ಗೆಲುವು ಅತ್ಯವಶ್ಯಕವಾಗಿದೆ. ಏಕೆಂದರೆ ಈ ಪಂದ್ಯದ ಫಲಿತಾಂಶ ಪಾಯಿಂಟ್ ಪಟ್ಟಿಯಲ್ಲಿ ತಂಡಕ್ಕೆ ಬಹಳ ಮಹತ್ವದಕ್ಕಾಗಿದೆ. ಇನ್ನು ಈ ಪಂದ್ಯದ ವಿಚಾರಕ್ಕೆ ಬರುವುದಾದರೆ.. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಹೊರಬಿದ್ದಿದೆ.

ಸೇಡಿನ ಸಮರ

ಈ ಸೀಸನ್​ನಲ್ಲಿ ಆರ್‌ಸಿಬಿ-ಹೈದಾಬಾದ್ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು ಉಭಯ ತಂಡಗಳು ಏಪ್ರಿಲ್ 15 ರಂದು ಪಂದ್ಯ ಆಡಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ದಾಖಲೆಯ 287 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಆರ್​ಸಿಬಿ 25 ರನ್​ಗಳಿಂದ ಸೋಲೊಪ್ಪಿಕೊಂಡಿತು. ಆದರೆ ತವರಿನಲ್ಲಿ ಹೈದರಾಬಾದ್ ವಿರುದ್ಧ ಸೋತಿದ್ದ ಆರ್​ಸಿಬಿ ಇದೀಗ ಅವರ ನೆಲದಲ್ಲಿ ಅವರನ್ನು ಸೋಲಿಸುವ ಇರಾದೆಯಲ್ಲಿ ಕಣಕ್ಕಿಳಿಯುತ್ತಿದೆ.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು:  ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ವಿಲ್ ಜಾಕ್ವೆಸ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮೊರೊರ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್.

ಇಂಪ್ಯಾಕ್ಟ್ ಪ್ಲೇಯರ್: ಸುಯ್ಯಾಶ್ ಪ್ರಭುದೇಸಾಯಿ, ಅನುಜ್ ರಾವತ್, ಹಿಮಾಂಶು ಶರ್ಮಾ, ವಿಜಯಕುಮಾರ್ ವೈಶ್, ಸ್ವಪ್ನಿಲ್ ಸಿಂಗ್.

ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಏಡೆನ್ ಮಾರ್ಕ್‌ರಾಮ್, ಹೆನ್ರಿಚ್ ಕ್ಲಾಸೆನ್ (ವಾಕ್), ನಿತೀಶ್ ರೆಡ್ಡಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕಟ್, ಮಯಾಂಕ್ ಮಾರ್ಕಂಡೇ, ಟಿ ನಟರಾಜನ್.

ಇಂಪ್ಯಾಕ್ಟ್ ಪ್ಲೇಯರ್: ಉಮ್ರಾನ್ ಮಲಿಕ್, ಅನ್ಮೋಲ್‌ಪ್ರೀತ್ ಸಿಂಗ್, ಆಕಾಶ್ ಮಹಾರಾಜ್ ಸಿಂಗ್, ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Thu, 25 April 24