IPL 2024: ಗುಜರಾತ್​ಗೆ ಬಿಗ್ ಶಾಕ್; ಐಪಿಎಲ್​ನಿಂದ ಹೊರಬಿದ್ದ ಮೊಹಮ್ಮದ್ ಶಮಿ..!

Mohammed Shami: ಏಕದಿನ ವಿಶ್ವಕಪ್ ನಂತರ ಇಂಜುರಿ ಸಮಸ್ಯೆಯಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ತಂಡದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಇದೀಗ ಐಪಿಎಲ್​ನಿಂದಲೂ ಹೊರಬಿದ್ದಿದ್ದಾರೆ. ಕಾಲಿನ ಇಂಜುರಿಯಿಂದ ಬಳಲುತ್ತಿರುವ ಶಮಿ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ವರದಿಯಾಗಿದೆ.

IPL 2024: ಗುಜರಾತ್​ಗೆ ಬಿಗ್ ಶಾಕ್; ಐಪಿಎಲ್​ನಿಂದ ಹೊರಬಿದ್ದ ಮೊಹಮ್ಮದ್ ಶಮಿ..!
ಮೊಹಮ್ಮದ್ ಶಮಿ
Follow us
|

Updated on:Feb 22, 2024 | 3:16 PM

ಐಪಿಎಲ್ (IPL 2024) ಆರಂಭಕ್ಕೂ ಮುನ್ನ ತಂಡದ ನಾಯಕ ಹಾರ್ದಿಕ್ ಪಾಂಡ್ಯರನ್ನು (Hardik Pandya) ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯೊಂದಿಗೆ ಟ್ರೇಡ್ ಮಾಡಿಕೊಂಡು ಕೊಂಚ ಹಿನ್ನಡೆ ಅನುಭವಿಸಿದ್ದ ಗುಜರಾತ್ ಟೈಟಾನ್ಸ್ (Gujarat Titans) ತಂಡಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ತಂಡದ ಪ್ರಮುಖ ಬೌಲರ್ ಮೊಹಮ್ಮದ್ ಶಮಿ (Mohammed Shami) ಇದೀಗ ಇಡೀ ಐಪಿಎಲ್​ನಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ. ಕಳೆದೆರಡು ಆವೃತ್ತಿಗಳಿಂದ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿರುವ ಶಮಿ, ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿದ್ದರು. ಆದರೀಗ ಶಮಿ ಅಲಭ್ಯತೆ ಗುಜರಾತ್ ತಂಡಕ್ಕೆ ಸಂಕಷ್ಟ ತಂದೊಡ್ಡಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಕಾಲಿನ ನೋವಿನಿಂದ ಬಳಲುತ್ತಿರುವ ಶಮಿ, ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.

ಗುಜರಾತ್ ತಂಡದ ಬೌಲಿಂಗ್ ಜೀವಾಳ

2022 ರಲ್ಲಿ ಗುಜರಾತ್ ಟೈಟಾನ್ ತಂಡವನ್ನು ಸೇರಿಕೊಂಡ ಶಮಿ, ತಂಡ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆ ಸೀಸನ್​ನಲ್ಲಿ ಶಮಿ ಒಟ್ಟು 20 ವಿಕೆಟ್​ಗಳನ್ನು ಕಬಳಿಸಿ, ಪ್ರಮುಖ ವಿಕೆಟ್ ಟೇಕರ್ ಎನಿಸಿಕೊಂಡಿದ್ದರು. ಆ ನಂತರ 2023 ರಲ್ಲಿ ನಡೆದ ಐಪಿಎಲ್​ನಲ್ಲಿ ಮತ್ತೊಮ್ಮೆ ಗುಜರಾತ್ ತಂಡದ ಬೌಲಿಂಗ್ ಜೀವಾಳ ಎನಿಸಿಕೊಂಡಿದ್ದ ಶಮಿ, ಈ ಸೀಸನ್​ನಲ್ಲೂ ಆಡಿದ 17 ಪಂದ್ಯಗಳಲ್ಲಿ 28 ವಿಕೆಟ್​ಗಳನ್ನು ಪಡೆದು ತಂಡ ಫೈನಲ್​ಗೇರುವಲ್ಲಿ ಪ್ರಮುಖ ಕೊಡುಗೆ ನೀಡಿದ್ದರು. ಆದರೆ ಫೈನಲ್ ಪಂದ್ಯದಲ್ಲಿ ಸಿಎಸ್​ಕೆ ಎದುರು ಸೋತಿದ್ದ ಗುಜರಾತ್ ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಕೈಚೆಲ್ಲಿತ್ತು.

ತಂಡದ ನಾಯಕತ್ವ ಶುಭ್​ಮನ್​ ಗಿಲ್​ ಕೈಯಲ್ಲಿದೆ

ಇದೀಗ ಇಡೀ ಸೀಸನ್​ನಿಂದ ಶಮಿ ಹೊರಬಿದ್ದಿರುವುದು ಗುಜರಾತ್ ಟೈಟಾನ್ಸ್ ತಂಡವನ್ನು ಸಂಕಷ್ಟಕ್ಕೆ ದೂಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಮೇಲೆ ಹೇಳಿದಂತೆ ತಂಡದ ಯಶಸ್ವಿ ನಾಯಕ ಹಾರ್ದಿಕ್ ಪಾಂಡ್ಯ ಈಗಾಗಲೇ ತಂಡ ತೊರೆದಿದ್ದಾರೆ. ಇದೀಗ ಶಮಿ ಆಡದ ಕಾರಣ ಮತ್ತೊಬ್ಬ ಅನುಭವಿ ಆಟಗಾರನನ್ನು ಮಿಸ್ ಮಾಡಿಕೊಳ್ಳುತ್ತಿರುವುದು ಗುಜರಾತ್ ಪಾಲಿಗೆ ದೊಡ್ಡ ಹಿನ್ನಡೆಯಾಗಿದೆ. ಇದೆಲ್ಲದರ ನಡುವೆ ಕೇನ್ ವಿಲಿಯಮ್ಸನ್​ರಂತಹ ಅನುಭವಿ ಆಟಗಾರ ತಂಡದಲ್ಲಿದ್ದರೂ ಗುಜರಾತ್ ಫ್ರಾಂಚೈಸಿ, ಈ ಬಾರಿ ತಂಡದ ನಾಯಕತ್ವವನ್ನು ಶುಭ್​ಮನ್​ ಗಿಲ್​ಗೆ ನೀಡಿದೆ. ಇದೀಗ ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಾಯಕನಾಗಿ ಕಣಕ್ಕಿಳಿಯುತ್ತಿರುವ ಗಿಲ್, ಈ ಇಬ್ಬರು ಅನುಭವಿಗಳ ಅಲಭ್ಯತೆಯಲ್ಲಿ ತಂಡವನ್ನು ಹೇಗೆ ಮುನ್ನಡೆಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಶಮಿ ಕೊರತೆಯನ್ನು ಸರಿದೂಗಿಸುವುದು ಅಸಾಧ್ಯ

ಗುಜರಾತ್ ಟೈಟಾನ್ಸ್ ಈಗ ಶಮಿ ಬದಲಿಗೆ ಇತರ ವೇಗದ ಬೌಲರ್‌ಗಳನ್ನು ತಂಡಕ್ಕೆ ಸೇರಿಸಿಕೊಳ್ಳಲು ಬಯಸಿದೆ. ಆದರೆ, ವೇಗದ ಬೌಲರ್‌ಗಳಾದ ಉಮೇಶ್ ಯಾದವ್, ಕಾರ್ತಿಕ್ ತ್ಯಾಗಿ ಮತ್ತು ಸ್ಪೆನ್ಸರ್ ಜಾನ್ಸನ್ ತಂಡದಲ್ಲಿದ್ದಾರೆ. ಆದರೆ ಪ್ರಸ್ತುತ ಉಮೇಶ್ ಯಾದವ್ ಫಾರ್ಮ್​ನಲ್ಲಿಲ್ಲ. ಕಾರ್ತಿಕ್ ತ್ಯಾಗಿ ಕೂಡ ಯುವ ಬೌಲರ್ ಆಗಿದ್ದು, ಅವರಿಗೂ ಅನುಭವದ ಕೊರತೆ ಇದೆ. ಇತ್ತ ಸ್ಪೆನ್ಸರ್ ಜಾನ್ಸನ್​ಗೂ ಕೂಡ ಐಪಿಎಲ್​ನಲ್ಲಿ ಹೆಚ್ಚು ಆಡಿದ ಅನುಭವವಿಲ್ಲ. ಹೀಗಾಗಿ ಶಮಿ ಕೊರತೆಯನ್ನು ಸರಿದೂಗಿಸುವುದು ಗುಜರಾತ್ ತಂಡಕ್ಕೆ ಅಸಾಧ್ಯವಾಗಿದೆ.

ಟಿ20 ವಿಶ್ವಕಪ್‌ ಆಡ್ತಾರಾ ಶಮಿ?

ಇಲ್ಲಿ ದೊಡ್ಡ ಪ್ರಶ್ನೆ ಏನೆಂದರೆ ಐಪಿಎಲ್​ನಿಂದ ಹೊರಬಿದ್ದಿರುವ ಮೊಹಮ್ಮದ್ ಶಮಿ ಟಿ20 ವಿಶ್ವಕಪ್‌ ವೇಳೆಗೆ ಫಿಟ್ ಆಗುತ್ತಾರಾ? ಎಂಬುದು. ಐಪಿಎಲ್ ಮುಗಿದ ತಕ್ಷಣ ಟಿ20 ವಿಶ್ವಕಪ್ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿದೆ. ಶಮಿ ತುತ್ತಾಗಿರುವ ಗಾಯವನ್ನು ನೋಡಿದರೆ ಟೀಂ ಇಂಡಿಯಾ ಬಹುಶಃ ಶಮಿ ಇಲ್ಲದೆಯೇ ಟಿ20 ವಿಶ್ವಕಪ್‌ಗೆ ಎಂಟ್ರಿ ಕೊಡಬೇಕಾಗುತ್ತಿದೆ. ಒಂದು ವೇಳೆ  ಶಮಿ ವಿಶ್ವಕಪ್ ವೇಳಗೆ ಫಿಟ್ ಆದರೂ ಸಹ ಅವರು ಯಾವುದೇ ಅಭ್ಯಾಸವಿಲ್ಲದೆ ಕಣಕ್ಕಿಳಿಯಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ತಂಡದಲ್ಲಿ ಆಡಳಿತ ಮಂಡಳಿ ಶಮಿ ಬಗ್ಗೆ ಯಾವ ರೀತಿಯ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Thu, 22 February 24

ತಾಜಾ ಸುದ್ದಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ