AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಆರ್​ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ; ಐಪಿಎಲ್​ಗಾಗಿ ಭಾರತಕ್ಕೆ ಬಂದ ಕಿಂಗ್ ಕೊಹ್ಲಿ..! ವಿಡಿಯೋ

IPL 2024, Virat Kohli: ಈ ಹಿಂದೆ ವರದಿಯಾದಂತೆ, ಮಾರ್ಚ್ 17 ರಂದು ವಿರಾಟ್ ಕೊಹ್ಲಿ ಭಾರತಕ್ಕೆ ಬಂದಿಳಿದಿದ್ದಾರೆ. ಕೊಹ್ಲಿ ಭಾರತಕ್ಕೆ ಬಂದಿರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದರರ್ಥ ಅವರು ಶೀಘ್ರದಲ್ಲೇ ತಮ್ಮ ಐಪಿಎಲ್ ತಂಡ ಆರ್‌ಸಿಬಿ ಕೂಡಿಕೊಳ್ಳಲಿದ್ದು, ಕೂಡಲೇ ಅಭ್ಯಾಸ ಆರಂಭಿಸಲಿದ್ದಾರೆ.

IPL 2024: ಆರ್​ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ; ಐಪಿಎಲ್​ಗಾಗಿ ಭಾರತಕ್ಕೆ ಬಂದ ಕಿಂಗ್ ಕೊಹ್ಲಿ..! ವಿಡಿಯೋ
ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on: Mar 17, 2024 | 5:04 PM

Share

ಈ ಹಿಂದೆ ವರದಿಯಾದಂತೆ, ಮಾರ್ಚ್ 17 ರಂದು ವಿರಾಟ್ ಕೊಹ್ಲಿ (Virat Kohli) ಭಾರತಕ್ಕೆ ಬಂದಿಳಿದಿದ್ದಾರೆ. ಕೊಹ್ಲಿ ಭಾರತಕ್ಕೆ ಬಂದಿರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದರರ್ಥ ಅವರು ಶೀಘ್ರದಲ್ಲೇ ತಮ್ಮ ಐಪಿಎಲ್ (IPL 2024) ತಂಡ ಆರ್‌ಸಿಬಿ ಕೂಡಿಕೊಳ್ಳಲಿದ್ದು, ಕೂಡಲೇ ಅಭ್ಯಾಸ ಆರಂಭಿಸಲಿದ್ದಾರೆ. ವಾಸ್ತವವಾಗಿ ಮಾರ್ಚ್​ 19 ರಂದು ಆರ್​ಸಿಬಿ (RCB) ಫ್ರಾಂಚೈಸಿ ಅನ್​ಬಾಕ್ಸ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ವಿರಾಟ್ ಭಾಗವಹಿಸುವ ನಿರೀಕ್ಷೆ ಇತ್ತು. ಅದರಂತೆ ಕೊಹ್ಲಿ ಈಗ ಭಾರತಕ್ಕೆ ಬಂದಿಳಿದಿದ್ದಾರೆ. 2 ತಿಂಗಳಿಗೂ ಹೆಚ್ಚು ಸಮಯದಿಂದ ಕ್ರಿಕೆಟ್​ ಕಣದಿಂದ ದೂರವಿರುವ ಕೊಹ್ಲಿ ತಮ್ಮ ಮಗ ಅಕಾಯ್ ಜನನದಿಂದಾಗಿ ಲಂಡನ್​ನಲ್ಲಿ ಮಡದಿಯೊಂದಿಗೆ ಸಮಯ ಕಳೆಯುತ್ತಿದ್ದರು. ಇದೀಗ ಐಪಿಎಲ್ ನಿಮಿತ್ತ ಭಾರತಕ್ಕೆ ಬಂದಿರುವ ಕೊಹ್ಲಿ ಆರ್​ಸಿಬಿ ಪರ ಇಡೀ ಲೀಗ್ ಆಡುವುದನ್ನು ಖಚಿತಪಡಿಸಿದ್ದಾರೆ.

2 ತಿಂಗಳಿಂದ ಕೊಹ್ಲಿ ಗೈರು

ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿ ಆರಂಭಕ್ಕೂ ಮುನ್ನ ವಿರಾಟ್ ಟೀಂ ಇಂಡಿಯಾದಿಂದ ರಜೆ ತೆಗೆದುಕೊಂಡಿದ್ದರು. ಆರಂಭದಲ್ಲಿ ಮೊದಲೆರಡು ಟೆಸ್ಟ್‌ಗಳಿಂದ ಕೊಹ್ಲಿ ಹೊರಗುಳಿಯುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಆ ನಂತರ ಇಡೀ ಸರಣಿಯಲ್ಲಿ ವಿರಾಟ್ ಆಡುವುದಿಲ್ಲ ಎಂಬುದು ಖಚಿತವಾಯಿತು. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದ ಬಿಸಿಸಿಐ, ವೈಯಕ್ತಿಕ ಕಾರಣಗಳಿಂದ ವಿರಾಟ್ ತಂಡ ತೊರೆದಿದ್ದಾರೆ ಎಂದಿತ್ತು. ಆನಂತರ ಎರಡನೇ ಮಗು ಅಕಾಯ್ ಜನನದ ಮಾಹಿತಿಯನ್ನು ವಿರಾಟ್ ಮತ್ತು ಅನುಷ್ಕಾ ದಂಪತಿಗಳು ಜಂಟಿಯಾಗಿ ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

IPL 2024: ಐಪಿಎಲ್‌ನಲ್ಲಿ ಕಿಂಗ್ ಕೊಹ್ಲಿ ಯಾವ ತಂಡದ ವಿರುದ್ಧ ಹೆಚ್ಚು ರನ್ ಕಲೆಹಾಕಿದ್ದಾರೆ ಗೊತ್ತಾ?

ಭಾರತಕ್ಕೆ ಬಂದ ವಿರಾಟ್

ಈಗ ಲೇಟೆಸ್ಟ್ ಅಪ್ಡೇಟ್ ಏನೆಂದರೆ ವಿರಾಟ್ ಕೊಹ್ಲಿ ಭಾರತಕ್ಕೆ ಮರಳಿದ್ದು, ಈ ಬಾರಿಯ ಐಪಿಎಲ್​ನಲ್ಲಿ ಕಣಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಈ ಹಿಂದೆ ಕೊಹ್ಲಿ ಐಪಿಎಲ್ ಆಡುವುದು ಅನುಮಾನ ಎಂದು ವರದಿಯಾಗಿತ್ತು. ಆದರೀಗ ಭಾರತಕ್ಕೆ ಬಂದಿರುವ ವಿರಾಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಶಿಬಿರವನ್ನು ಸೇರುವ ಮೂಲಕ ಅಭ್ಯಾಸ ಆರಂಭಿಸಲಿದ್ದಾರೆ. ಕಳೆದ 2 ತಿಂಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿರುವ ವಿರಾಟ್ ಕೊಹ್ಲಿ ತಮ್ಮ ಕೊನೆಯ ಪಂದ್ಯವನ್ನು 17 ಜನವರಿ 2024 ರಂದು ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ಆಡಿದ್ದರು.

ಅಕಾಯ್ ಹುಟ್ಟಿದ ನಂತರ ಕೊಹ್ಲಿಯ ಮೊದಲ ಪಂದ್ಯ

ಐಪಿಎಲ್ 2024 ರ ಉದ್ಘಾಟನಾ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಅಂದರೆ ಮಾರ್ಚ್ 22 ರಂದು ನಡೆಯಲಿರುವ ಐಪಿಎಲ್ ಆರಂಭಿಕ ಪಂದ್ಯದಲ್ಲಿ ಆರ್​ಸಿಬಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ ತಂಡವನ್ನು ಎದುರಿಸಲಿದೆ. ಫೆಬ್ರವರಿ 15 ರಂದು ಮಗ ಅಕಾಯ್ ಜನಿಸಿದ ನಂತರ ವಿರಾಟ್ ಕೊಹ್ಲಿ ಆಡಲಿರುವ ಮೊದಲ ಪಂದ್ಯ ಇದಾಗಿದೆ. ಈ ಪಂದ್ಯ ಚೆನ್ನೈ ಮೈದಾನದಲ್ಲಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ