IPL 2024: ಸತತ ಸೋಲು… ಬೇಸರ ಹೊರಹಾಕಿದ ಸಂಜು ಸ್ಯಾಮ್ಸನ್

IPL 2024: ಐಪಿಎಲ್​​ನ (IPL 2024) 65ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆಲುವು ಸಾಧಿಸಿದೆ . ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್​ ತಂಡದ 20 ಓವರ್​ಗಳಲ್ಲಿ 144 ರನ್ ಕಲೆಹಾಕಿತು. ಈ ಸುಲಭ ಗುರಿಯನ್ನು 18.5 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಪಂಜಾಬ್ ಕಿಂಗ್ಸ್ ತಂಡ 5 ವಿಕೆಟ್​ಗಳ ಜಯ ಸಾಧಿಸಿತು.

IPL 2024: ಸತತ ಸೋಲು... ಬೇಸರ ಹೊರಹಾಕಿದ ಸಂಜು ಸ್ಯಾಮ್ಸನ್
Sanju Samson
Follow us
ಝಾಹಿರ್ ಯೂಸುಫ್
|

Updated on:May 16, 2024 | 7:54 AM

IPL 2024:  ರಾಜಸ್ಥಾನ್ ರಾಯಲ್ಸ್ (Rajastan Royals) ತಂಡವು ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿದೆ. ಮೊದಲ 9 ಪಂದ್ಯಗಳಲ್ಲಿ 8 ಜಯ ಸಾಧಿಸಿ ಅಬ್ಬರಿಸಿದ್ದ ರಾಜಸ್ಥಾನ್ ತಂಡವು ದ್ವಿತೀಯಾರ್ಧದ ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಅದರಲ್ಲೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಬ್ಯಾಟರ್​ಗಳು ಕಳಪೆ ಪ್ರದರ್ಶನ ನೀಡಿದ್ದರು. ಈ ಪಂದ್ಯದಲ್ಲಿ ಸೋಲಿನ ಬಳಿಕ ಮಾತನಾಡಿದ ನಾಯಕ ಸಂಜು ಸ್ಯಾಮ್ಸನ್, ತಂಡದ ಪ್ರದರ್ಶನದ ಬಗ್ಗೆ ಬೇಸರ ಹೊರಹಾಕಿದ್ದಾರೆ.

ನಾವು ಇನ್ನೂ ಹೆಚ್ಚಿನ ರನ್​ ಗಳಿಸಬೇಕಿತ್ತು. ನನ್ನ ಪ್ರಕಾರ 10-15 ರನ್ ಕಡಿಮೆ ಕಲೆಹಾಕಿದ್ದೆವು. ಬರ್ಸಾಪರಾ ಪಿಚ್​ನಲ್ಲಿ ಸುಲಭವಾಗಿ 160 ರನ್​ ಕಲೆಹಾಕಬಹುದಾಗಿತ್ತು. ಆದರೆ ನಾವು ನಮ್ಮ ನೈಜ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲವಾಗಿದ್ದೇವೆ ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

ಕಳೆದ ನಾಲ್ಕು ಪಂದ್ಯಗಳಿಂದ ನಾವು ವೈಫಲ್ಯಗಳನ್ನು ಅನುಭವಿಸುತ್ತಿದ್ದೇವೆ. ಹೀಗಾಗಿಯೇ 4 ಮ್ಯಾಚ್ ಸೋತಿದ್ದೇವೆ. ಇದಕ್ಕೆ ಮುಖ್ಯ ಕಾರಣ ತಂಡವಾಗಿ ಸಾಂಘಿಕ ಪ್ರದರ್ಶನ ನೀಡದಿರುವುದು. ನಮ್ಮಲ್ಲಿ ಹಲವು ಮ್ಯಾಚ್​ ವಿನ್ನರ್​ಗಳಿದ್ದಾರೆ. ಆದರೆ ಯಾರೂ ಕೂಡ ಪಂದ್ಯ ಗೆಲ್ಲಿಸಿಕೊಡುವಂತಹ ಪ್ರದರ್ಶನ ನೀಡುತ್ತಿಲ್ಲ. ಯಾರಾದೂ ಒಬ್ಬರು ಪಂದ್ಯ ಗೆಲ್ಲಿಸುವಂತಹ ಇನಿಂಗ್ಸ್ ಆಡೇಬೇಕಿದೆ ಎಂದು ಇದೇ ವೇಳೆ ಸಂಜು ಸ್ಯಾಮ್ಸನ್ ಹೇಳಿದರು.

ಈ ಹಿಂದೆ ನಾವು 200 ಪ್ಲಸ್​ ರನ್​ಗಳನ್ನು ಸುಲಭವಾಗಿ ಕಲೆಹಾಕಿದ್ದೇವೆ. ಇದೀಗ ರನ್​ಗಳಿಸಲು ಪರದಾಡುತ್ತಿದ್ದೇವೆ. ಪಂಜಾಬ್ ಕಿಂಗ್ಸ್ ವಿರುದ್ಧ 160-170 ರನ್​ ಬಾರಿಸಿದ್ದರೂ ಅದು ಉತ್ತಮ ಮೊತ್ತವಾಗುತ್ತಿತ್ತು. ಆದರೆ ನಾವು ಬ್ಯಾಟಿಂಗ್ ವೇಳೆ ಜಾಣತನದ ಆಟ ಪ್ರದರ್ಶಿಸುವಲ್ಲಿ ವಿಫಲವಾಗಿದ್ದೇವೆ. ಆಶಾದಾಯಕವಾಗಿ, ಮುಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ. ಅಲ್ಲದೆ ಕೊನೆಯ ಲೀಗ್ ಪಂದ್ಯದಲ್ಲಿ ಜಯ ಸಾಧಿಸುತ್ತೇವೆ ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

ಪ್ಲೇಆಫ್​ಗೆ ರಾಜಸ್ಥಾನ್ ರಾಯಲ್ಸ್​:

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸೋತರೂ ರಾಜಸ್ಥಾನ್ ರಾಯಲ್ಸ್ ತಂಡವು ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಅಂದರೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವು ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಏಕೆಂದರೆ ಆರ್​ಆರ್​ ತಂಡವು ಈಗಾಗಲೇ 16 ಅಂಕಗಳನ್ನು ಕಲೆಹಾಕಿದೆ.

ಇದನ್ನೂ ಓದಿ: IPL 2024: SRH ವಿರುದ್ಧದ ಪಂದ್ಯಕ್ಕೆ ಪಂಜಾಬ್ ಕಿಂಗ್ಸ್ ತಂಡದ 6 ಆಟಗಾರರು ಅಲಭ್ಯ..!

ಇನ್ನು ಸಿಎಸ್​ಕೆ ಮತ್ತು ಎಸ್​ಆರ್​ಹೆಚ್​ ತಂಡಗಳಿಗೆ ಮಾತ್ರ 16 ಅಂಕಗಳನ್ನು ಸಂಪಾದಿಸಲು ಅವಕಾಶವಿದೆ. ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು 16 ಅಂಕಗಳನ್ನು ಕಲೆಹಾಕಿದರೂ ರಾಜಸ್ಥಾನ್ ರಾಯಲ್ಸ್ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ. ಹೀಗಾಗಿಯೇ ಪಂಜಾಬ್ ಕಿಂಗ್ಸ್ ವಿರುದ್ಧ ಸೋತರೂ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ.

Published On - 7:53 am, Thu, 16 May 24

ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು