AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ ಮುಂಬೈ ಇಂಡಿಯನ್ಸ್‌

IPL 2024: ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಟಿಕೆಟ್ ಮಾರಾಟಕ್ಕೆ ಸಂಬಂಧಿಸಿದ ವಿಶೇಷ ಅಪ್‌ಡೇಟ್‌ ಹೊರಬಿದ್ದಿದೆ. ಫ್ರಾಂಚೈಸ್ ತನ್ನ ಪಂದ್ಯಗಳಿಗೆ ಟಿಕೆಟ್‌ಗಳ ಮಾರಾಟದ ಬಗ್ಗೆ ಶುಕ್ರವಾರ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ.

IPL 2024: ಐಪಿಎಲ್ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ ಮುಂಬೈ ಇಂಡಿಯನ್ಸ್‌
ಮುಂಬೈ ಇಂಡಿಯನ್ಸ್
ಪೃಥ್ವಿಶಂಕರ
|

Updated on:Mar 01, 2024 | 10:01 PM

Share

ಐಪಿಎಲ್ (IPL 2024) 17ನೇ ಸೀಸನ್ ಮಾರ್ಚ್ 22ರಿಂದ ಆರಂಭವಾಗಲಿದೆ. ಇಡೀ ಟೂರ್ನಿಯ ವೇಳಾಪಟ್ಟಿ ಇನ್ನೂ ಬಹಿರಂಗವಾಗಿಲ್ಲವಾದರೂ ಲೋಕಸಭಾ ಚುನಾವಣೆಯ ಕಾರಣ ಮಾರ್ಚ್ 22 ರಿಂದ ಏಪ್ರಿಲ್ 7 ರವರೆಗಿನ ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಈ ಅವಧಿಯಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ತಂಡ ನಾಲ್ಕು ಪಂದ್ಯಗಳನ್ನು ಆಡಲಿದೆ. ಮುಂಬೈ ತನ್ನ ಮೊದಲ ಎರಡು ಪಂದ್ಯಗಳನ್ನು ಅಹಮದಾಬಾದ್ ಮತ್ತು ಹೈದರಾಬಾದ್‌ನಲ್ಲಿ ಆಡಲಿದೆ. ಉಳಿದೆರಡು ಪಂದ್ಯಗಳನ್ನು ಮುಂಬೈ ತನ್ನ ತವರು ಮೈದಾನವಾದ ವಾಂಖೆಡೆಯಲ್ಲಿ ಆಡಲಿದೆ. ಹೀಗಿರುವಾಗ ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಟಿಕೆಟ್ ಮಾರಾಟಕ್ಕೆ ಸಂಬಂಧಿಸಿದ ವಿಶೇಷ ಅಪ್‌ಡೇಟ್‌ ಹೊರಬಿದ್ದಿದೆ. ಫ್ರಾಂಚೈಸ್ ತನ್ನ ಪಂದ್ಯಗಳಿಗೆ ಟಿಕೆಟ್‌ಗಳ ಮಾರಾಟದ ಬಗ್ಗೆ ಶುಕ್ರವಾರ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ.

ಟಿಕೆಟ್ ಮಾರಾಟ ಯಾವಾಗ?

ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2024 ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯ ಮಾರ್ಚ್ 24 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಮತ್ತು ಮುಂದಿನ ಮೂರು ಪಂದ್ಯಗಳ ಟಿಕೆಟ್‌ಗಳನ್ನು ನಾಲ್ಕು ಹಂತಗಳಲ್ಲಿ ಮಾರಾಟ ಮಾಡಲಾಗುತ್ತದೆ. ಫ್ರಾಂಚೈಸ್ ಈ ನಾಲ್ಕು ಹಂತಗಳ ಟಿಕೆಟ್ ಮಾರಾದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ. ಮೊದಲ ಹಂತದ ಟಿಕೆಟ್ ಮಾರಾಟ ಮಾರ್ಚ್ 6 ರಿಂದ ಪ್ರಾರಂಭವಾಗಲಿದ್ದು, ಈ ಹಂತದ ಟಿಕೆಟ್‌ಗಳನ್ನು SLICE UPI ಮೂಲಕ ಮಾತ್ರ ಖರೀದಿಸಬೇಕಾಗಿರುತ್ತದೆ.

ನಂತರ 2ನೇ ಹಂತದ ಟಿಕೆಟ್‌ಗಳ ಮಾರಾಟ ಮಾರ್ಚ್ 9 ರಿಂದ ಪ್ರಾರಂಭವಾಗಲಿದ್ದು, ಮೂರನೇ ಹಂತದಲ್ಲಿ, ಮಾರ್ಚ್ 10 ರಿಂದ ಟಿಕೆಟ್ ಬುಕಿಂಗ್ ಪ್ರಾರಂಭವಾಗುತ್ತದೆ. ಇದರ ನಂತರ, ನಾಲ್ಕನೇ ಹಂತವು ಮಾರ್ಚ್ 13 ರಿಂದ ಪ್ರಾರಂಭವಾಗಲಿದ್ದು, ಈ ಸಮಯದಲ್ಲಿ ಎಲ್ಲರಿಗೂ ಟಿಕೆಟ್ ಬುಕಿಂಗ್ ಮಾಡುವ ಅವಕಾಶ ಸಿಗಲಿದೆ.

ಅಭಿಮಾನಿಗಳು ಟಿಕೆಟ್ ಖರೀದಿಸುವುದು ಹೇಗೆ?

ಮುಂಬೈ ಇಂಡಿಯನ್ಸ್ ಈ ಪೋಸ್ಟ್‌ನಲ್ಲಿ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ. ಈ ಲಿಂಕ್ ಮೂಲಕ, ಅಭಿಮಾನಿಗಳು ನೀಲಿ, ಚಿನ್ನ, ಬೆಳ್ಳಿ ಅಥವಾ ಇತರ ಹಲವು ರೀತಿಯ ಸದಸ್ಯತ್ವವನ್ನು ಪಡೆಯಬಹುದು. ಇದರ ನಂತರ ಟಿಕೆಟ್ ಪಡೆಯುವುದು ಸುಲಭವಾಗಲಿದೆ. ಟಿಕೆಟ್‌ಗಳನ್ನು ಖರೀದಿಸುವ ಕುರಿತು ಇತರ ಮಾಹಿತಿಗಾಗಿ, ಅಭಿಮಾನಿಗಳು ಮುಂಬೈ ಇಂಡಿಯನ್ಸ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಮೊದಲಾರ್ಧದಲ್ಲಿ ಮುಂಬೈ ಇಂಡಿಯನ್ಸ್ ವೇಳಾಪಟ್ಟಿ

ಮಾರ್ಚ್ 24 (ರಾತ್ರಿ 7.30): ಗುಜರಾತ್ ಟೈಟಾನ್ಸ್, ಅಹಮದಾಬಾದ್.

ಮಾರ್ಚ್ 27 (ರಾತ್ರಿ 7.30): ಸನ್ ರೈಸರ್ಸ್ ಹೈದರಾಬಾದ್, ಹೈದರಾಬಾದ್.

ಏಪ್ರಿಲ್ 1 (ರಾತ್ರಿ 7.30): ರಾಜಸ್ಥಾನ ರಾಯಲ್ಸ್, ಮುಂಬೈ.

ಏಪ್ರಿಲ್ 7 (ಮಧ್ಯಾಹ್ನ 3.30): ದೆಹಲಿ ಕ್ಯಾಪಿಟಲ್ಸ್, ಮುಂಬೈ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Fri, 1 March 24

ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು