IPL 2024: ಹಾರ್ದಿಕ್​ ಪಾಂಡ್ಯ ಹಿಂದಿರುಗುವಿಕೆಯಿಂದ ಮುಂಬೈ ಇಂಡಿಯನ್ಸ್​​ ತೊರೆಯುತ್ತಾರಾ ರೋಹಿತ್ ಶರ್ಮಾ?

Hardik Pandya: ಗುಜರಾತ್​ ಟೈಟಾನ್ಸ್​​ ತಂಡದ ನಾಯಕನಾಗಿರುವ ಹಾರ್ದಿಕ್​ ಪಾಂಡ್ಯ ಅವರು ಇಂಡಿಯಲ್​ ಪ್ರೀಮಿಯರ್​ ಲೀಗ್​​ನ ಐದು ಬಾರಿ ಚಾಂಪಿಯನ್​ ಆಗಿರುವ ಮುಂಬೈ ಇಂಡಿಯನ್ಸ್​ ತಂಡಕ್ಕೆ ಮತ್ತೆ ಕರೆತರುವ ಪ್ರಯತ್ನ ನಡೆಯುತ್ತಿದೆ. ಮುಂಬೈ ಇಂಡಿಯನ್ಸ್‌ ತಂಡಕ್ಕೆ ಹಾರ್ದಿಕ್​ ಪಾಂಡ್ಯ ಹಿಂತಿರುಗುತ್ತಿರುವುದರಿಂದ ರೋಹಿತ್ ಶರ್ಮಾ ಅವರ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಅನುಮಾನಗಳು ಶುರುವಾಗಿವೆ.

IPL 2024: ಹಾರ್ದಿಕ್​ ಪಾಂಡ್ಯ ಹಿಂದಿರುಗುವಿಕೆಯಿಂದ ಮುಂಬೈ ಇಂಡಿಯನ್ಸ್​​ ತೊರೆಯುತ್ತಾರಾ ರೋಹಿತ್ ಶರ್ಮಾ?
ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 25, 2023 | 7:47 PM

ಇಂಡಿಯನ್​ ಪ್ರೀಮಿಯರ್​ ಲೀಗ್​ 2024ರ ಚರ್ಚೆ ಸದ್ಯ ಶುರುವಾಗಿದೆ. ಡಿಸೆಂಬರ್ 19 ರಂದು ದುಬೈನ ಕೋಕಾ-ಕೋಲಾ ಅರೆನಾದಲ್ಲಿ ಐಪಿಎಲ್​​ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಗುಜರಾತ್ ಟೈಟಾನ್ಸ್​ ತಂಡದಲ್ಲಿ ಎರಡು ವರ್ಷವಾಡಿದ ಹಾರ್ದಿಕ್​ ಪಾಂಡ್ಯ (Hardik Pandya) ಮತ್ತೆ ಮುಂಬೈ ಇಂಡಿಯನ್ಸ್‌ಗೆ ಹಿಂತಿರುಗಲಿದ್ದಾರೆ ಎನ್ನಲಾಗುತ್ತಿದೆ. ಮುಂಬೈ ಇಂಡಿಯನ್ಸ್‌ ತಂಡಕ್ಕೆ ಹಾರ್ದಿಕ್​ ಪಾಂಡ್ಯ ಹಿಂತಿರುಗುತ್ತಿರುವುದರಿಂದ ರೋಹಿತ್ ಶರ್ಮಾ ಅವರ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಅನುಮಾನಗಳು ಶುರುವಾಗಿವೆ.

ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್​ನಿಂದ ಮುಂಬೈ ಇಂಡಿಯನ್ಸ್​ಗೆ ಹಿಂತಿರುಗುತ್ತಿರುವುದರಿಂದ ಇಂಡಿಯನ್ ಪ್ರೀಮಿಯರ್ ಲೀಗ್​​​ ಇತಿಹಾಸದಲ್ಲಿ ಅತಿದೊಡ್ಡ ವಹಿವಾಟಿಗೆ ಸಾಕ್ಷಿಯಾಗಲಿದೆ. ಪಾಂಡ್ಯರ ಆಗಮನದೊಂದಿಗೆ ಮುಂಬೈ ಮೂಲದ ಫ್ರಾಂಚೈಸಿಯನ್ನು ಮುನ್ನಡೆಸಲಿದ್ದಾರೆ ಎಂದು ಅವರ  ಅಭಿಮಾನಿಗಳು ಭಾವಿಸಿದ್ದಾರೆ. ಪಾಂಡ್ಯ ಅವರ ಮಾಜಿ ತಂಡಕ್ಕೆ ತೆರಳಿದಾಗ ರೋಹಿತ್ ಮುಂಬೈ ಇಂಡಿಯನ್ಸ್ ತೊರೆಯುತ್ತಾರೆಯೇ ಎಂಬ ಪ್ರಶ್ನೆಗಳು ಕೂಡ ಹುಟ್ಟಿಕೊಂಡಿವೆ.

ಇದನ್ನೂ ಓದಿ: IPL 2024: ಮುಂಬೈಗೆ ಹಾರ್ದಿಕ್ ಪಾಂಡ್ಯ? ಗುಜರಾತ್ ಸಾರಥ್ಯ ಯಾರಿಗೆ? ರೇಸ್​ನಲ್ಲಿ ಇಬ್ಬರು

ಆದರೆ ರೋಹಿತ್ ಶರ್ಮಾ ಎಲ್ಲಿಯೂ ಹೋಗುತ್ತಿಲ್ಲ ಮತ್ತು ಅವರು ಮುಂಬೈ ಇಂಡಿಯನ್ಸ್‌ನಲ್ಲಿಯೇ ಆಟವಾಡಲಿದ್ದಾರೆ ಎಂದು ಕ್ರಿಕ್‌ಬಜ್‌ ಖಚಿತಪಡಿಸಿದೆ. ಆದರೆ ತಂಡವನ್ನು ಮುನ್ನಡೆಸುತ್ತಾರೋ ಇಲ್ಲವೋ ತಿಳಿದಿಲ್ಲ. ರೋಹಿತ್ ಮತ್ತೆ T201ಕ್ರಿಕೆಟ್ ಆಡದಿರಬಹುದು ಎಂದು PTI ಇತ್ತೀಚೆಗೆ ವರದಿ ಮಾಡಿತ್ತು. ಇದು ಮುಂಬೈ ಇಂಡಿಯನ್ಸ್​ ನಾಯಕತ್ವದಲ್ಲಿ ಬದಲಾವಣೆಗೂ ಕಾರಣವಾಗಲಿದೆ. ಆದರೆ ರೋಹಿತ್ ಮುಂಬೈ ಇಂಡಿಯನ್ಸ್​ನಲ್ಲಿ ಇರಲಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರು 2015 ರಲ್ಲಿ ಮುಂಬೈ ಇಂಡಿಯನ್ಸ್​​ ತಂಡವನ್ನು ಸೇಪರ್ಡೆಗೊಂಡರು. ಎರಡನೇ ಐಪಿಎಲ್ ಆವೃತ್ತಿಗೂ ಮುನ್ನ ಈಗಾಗಲೇ ಟಿ 20 ವಿಶ್ವಕಪ್ ಕೂಡ ಆಡಿದ್ದರು. ರೋಹಿತ್ ಶರ್ಮಾ ಅವರ ಬಗ್ಗೆ ಹೇಳುವುದಾದರೆ, ಅವರು 2011 ರಲ್ಲಿ ಮುಂಬೈ ಇಂಡಿಯನ್ಸ್​​ ತಂಡವನ್ನು ಸೇಪರ್ಡೆಗೊಂಡಿದ್ದು, 2013 ಐಪಿಎಲ್​​​ ಸಮಯದಲ್ಲಿ ನಾಯಕತ್ವವನ್ನು ವಹಿಸಿಕೊಂಡರು.

ಇದನ್ನೂ ಓದಿ: ಹರಾಜಿಗೂ ಮುನ್ನ 10 ತಂಡಗಳಿಂದ ಗೇಟ್​ಪಾಸ್ ಪಡೆದ ಆಟಗಾರರು ಯಾರ್ಯಾರು? ಸಂಭಾವ್ಯ ಪಟ್ಟಿ ಇಲ್ಲಿದೆ

ರೋಹಿತ್ ನಾಯಕನಾಗಿ ಅವರ ಮೊದಲ ಆವೃತ್ತಿಯಲ್ಲಿಯೇ ಮುಂಬೈ ಇಂಡಿಯನ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. 2013 ರಲ್ಲಿ ತಂಡದ ಗೆಲುವಿಗೆ ಕಾರಣರಾದರು. IPL ನಲ್ಲಿ ರೋಹಿತ್ ನಾಯಕತ್ವದಲ್ಲಿ   ಮುಂಬೈ ಇಂಡಿಯನ್ಸ್ ಐದು ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ.

ಮಿನಿ ಹರಾಜಿಗೂ ಮುನ್ನ ತಂಡಗಳು ತಮ್ಮಲ್ಲಿ ಉಳಿಸಿಕೊಂಡಿರುವ ಮತ್ತು ಬಿಡುಗಡೆಯಾದ ಆಟಗಾರರ ಪಟ್ಟಿ ನೀಡಲು ನ. 26 ರವರೆಗೆ ಗಡುವು ನೀಡಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ