AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ ಸಲ ಕಪ್ ನಮ್ದೆ… ಬಂದ್ರು ನೋಡಿ ABD

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವನ್ನು ವೀಕ್ಷಿಸಲು ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಭಾರತಕ್ಕೆ ಆಗಮಿಸಿದ್ದಾರೆ.

IPL 2025: ಈ ಸಲ ಕಪ್ ನಮ್ದೆ... ಬಂದ್ರು ನೋಡಿ ABD
Ab De Villiers
ಝಾಹಿರ್ ಯೂಸುಫ್
|

Updated on: May 29, 2025 | 11:31 AM

Share

ಈ ಸಲ ಕಪ್ ನಮ್ದೇ ಎನ್ನುವ ಘೋಷವಾಕ್ಯದೊಂದಿಗೆ ಶುರುವಾಗುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ಅಭಿಮಾನಿಗಳ ಟ್ರೋಫಿ ಗೆಲ್ಲುವ ಕನಸು ಇದೀಗ 18ನೇ ಸೀಸನ್​ ಅಂತ್ಯಕ್ಕೆ ಬಂದು ನಿಂತಿದೆ. ಅದರಂತೆ ಆರ್​ಸಿಬಿ ತಂಡವು ಫೈನಲ್​ಗೇರಲು ಇನ್ನು ಒಂದು ಹೆಜ್ಜೆಯಷ್ಟೇ ದೂರದಲ್ಲಿದೆ. ಅಂದರೆ ಇಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದರೆ, ನೇರವಾಗಿ ಫೈನಲ್​ಗೇರಲಿದೆ.

ಈ ನಿರ್ಣಾಯಕ ಪಂದ್ಯವನ್ನು ವೀಕ್ಷಿಸಲು ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಆಗಮಿಸಿದ್ದಾರೆ. ಬುಧವಾರ ಮುಂಬೈಗೆ ಬಂದಿಳಿದಿರುವ ಎಬಿಡಿ, ಅಲ್ಲಿಂದ ಚಂಡೀಗಢ್​ಗೆ ತೆರಳುವುದಾಗಿ ತಿಳಿಸಿದ್ದಾರೆ. ಅದರಂತೆ ಇಂದು ಮುಲ್ಲನ್​ಪುರ್​ನಲ್ಲಿ ಜರುಗಲಿರುವ ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದ ವೇಳೆ ಎಬಿಡಿ ಕಾಣಿಸಿಕೊಳ್ಳಲಿದ್ದಾರೆ.

ಇದಕ್ಕೂ ಮುನ್ನ ಆರ್​ಸಿಬಿ ತಂಡ ಕಪ್ ಗೆಲ್ಲುವ ಭರವಸೆಯನ್ನು ಎಬಿಡಿ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಬಾರಿ ರಾಯಲ್ ಪಡೆ ಫೈನಲ್​​ಗೇರಿದರೆ ಟ್ರೋಫಿ ಎತ್ತಿ ಹಿಡಿಯಲು ನಾನು ಸಹ ಹಾಜರಿರಲಿದ್ದೇನೆ ಎಂದಿದ್ದರು. ಆದರೆ ಇದೀಗ ಪ್ಲೇಆಫ್ ಪಂದ್ಯಕ್ಕೂ ಮುನ್ನವೇ ಎಬಿಡಿ ಭಾರತಕ್ಕೆ ಆಗಮಿಸಿದ್ದಾರೆ. ಈ ಮೂಲಕ ಈ ಬಾರಿ ಆರ್​ಸಿಬಿ ತಂಡ ಕಪ್ ಗೆಲ್ಲುವುದು ಖಚಿತ ಎಂಬ ವಿಶ್ವಾಸವನ್ನು ಡಿವಿಲಿಯರ್ಸ್ ವ್ಯಕ್ತಪಡಿಸಿದ್ದಾರೆ.

2008 ರಿಂದ ಐಪಿಎಲ್ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಕಪ್ ಗೆದ್ದಿಲ್ಲ. ಆರ್‌ಸಿಬಿ ತನ್ನ ಇತಿಹಾಸದಲ್ಲಿ ಕ್ರಮವಾಗಿ 2009, 2011 ಮತ್ತು 2016 ರಲ್ಲಿ ಮೂರು ಬಾರಿ ಐಪಿಎಲ್ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಆದಾಗ್ಯೂ, ಮೂರು ಬಾರಿ ಕೂಡ ಫೈನಲ್​ನಲ್ಲಿ ಎಡವಿತ್ತು. ಆದರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸವಿದೆ ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

ಎಬಿಡಿ ಐಪಿಎಲ್​ ವೃತ್ತಿಜೀವನ:

ಎಬಿ ಡಿವಿಲಿಯರ್ಸ್ ತಮ್ಮ ಐಪಿಎಲ್ ವೃತ್ತಿಜೀವನವನ್ನು ಡೆಲ್ಲಿ ಕ್ಯಾಪಿಟಲ್ಸ್‌ನೊಂದಿಗೆ ಆರಂಭಿಸಿದರು. 2011 ರಲ್ಲಿ RCB ಸೇರಿದ್ದ ಎಬಿಡಿ ಸತತ 11 ಸೀಸನ್​ಗಳಲ್ಲಿ ತಂಡದ ಭಾಗವಾಗಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 157 ಪಂದ್ಯಗಳನ್ನಾಡಿರುವ ಎಬಿಡಿ ಒಟ್ಟು 4522 ರನ್ ಕಲೆಹಾಕಿದ್ದಾರೆ.

ಇದನ್ನೂ ಓದಿ: IPL 2025: ಪ್ಲೇಆಫ್ ಪಂದ್ಯಗಳಿಂದ 8 ಆಟಗಾರರು ಔಟ್

ಅಲ್ಲದೆ ಆರ್​ಸಿಬಿ ಪರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಎಬಿ ಡಿವಿಲಿಯರ್ಸ್​ ಎರಡನೇ ಸ್ಥಾನದಲ್ಲಿದ್ದಾರೆ. 2021 ರ ಐಪಿಎಲ್​ನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ವಿದಾಯ ಹೇಳಿದ ಎಬಿಡಿ ಈಗಲೂ ಆರ್​ಸಿಬಿ ತಂಡವನ್ನು ಬೆಂಬಲಿಸುತ್ತಿರುವುದು ವಿಶೇಷ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ