VIDEO: ನಿವೃತ್ತಿ ಘೋಷಿಸಿ 3 ವರ್ಷ ಕಳೆದರೂ ನಿಲ್ಲದ ABD ಕ್ರೇಝ್: ಇದಕ್ಕೆ ಸಾಕ್ಷಿ ಈ ವಿಡಿಯೋ
IPL 2025 RCB Unbox Event: IPL 2024: RCB ಪರ 11 ವರ್ಷಗಳ ಕಾಲ ಆಡಿದ್ದ ಎಬಿಡಿ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಈ ವೇಳೆ 157 ಪಂದ್ಯಗಳಿಂದ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಸಹ ಬರೆದಿದ್ದಾರೆ. ಹೀಗೆ ಆರ್ಸಿಬಿ ತಂಡದ ಆಪತ್ಬಾಂಧವನಾಗಿ ಗುರುತಿಸಿಕೊಂಡಿದ್ದ ಎಬಿ ಡಿವಿಲಿಯರ್ಸ್ ಅವರ ಕ್ರೇಝ್ ಇನ್ನೂ ಸಹ ನಿಂತಿಲ್ಲ. ಇದಕ್ಕೆ ಸಾಕ್ಷಿ ಈ ವಿಡಿಯೋ...

ಅಬ್ರಹಾಂ ಬೆಂಜಮಿನ್ ಡಿವಿಲಿಯರ್ಸ್ ಅಲಿಯಾಸ್ ಎಬಿಡಿ ಐಪಿಎಲ್ನಿಂದ ನಿವೃತ್ತರಾಗಿ ಮೂರು ವರ್ಷಗಳೇ ಕಳೆದಿದೆ. 2021, ಅಕ್ಟೋಬರ್ 11 ರಂದು ಕೊನೆಯ ಬಾರಿ ಆರ್ಸಿಬಿ ಪರ ಕಣಕ್ಕಿಳಿದಿದ್ದ ಎಬಿಡಿ ಆರ್ಸಿಬಿ ಅಭಿಮಾನಿಗಳ ಪಾಲಿಗೆ ಅಜರಾಮರ. ಇದಕ್ಕೆ ಸಾಕ್ಷಿ ಈ ಬಾರಿಯ ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮದಲ್ಲಿ ಕೇಳಿ ಬಂದ ABD, ABD ಎಂಬ ಹರ್ಷೋದ್ಗಾರ.
ಹೌದು, ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್ಸಿಬಿ ತಂಡದ ಅನ್ಬಾಕ್ಸ್ ಕಾರ್ಯಕ್ರಮದಲ್ಲೂ ಎಬಿ ಡಿವಿಲಿಯರ್ಸ್ ಹೆಸರು ರಾರಾಜಿಸಿದೆ. ಅದು ಸಹ ಅಭಿಮಾನಿಗಳಿಂದಲೇ.
ಮೂರು ವರ್ಷಗಳ ಹಿಂದೆಯೇ ಅರ್ಸಿಬಿ ತಂಡವನ್ನು ತೊರೆದಿರುವ ಎಬಿ ಡಿವಿಲಿಯರ್ಸ್ ಅವರನ್ನು ಅಭಿಮಾನಿಗಳು ಈ ವಿಶೇಷ ಕಾರ್ಯಕ್ರಮದಲ್ಲಿ ನೆನೆದಿದ್ದಾರೆ. ಅಲ್ಲದೆ ಸ್ಟೇಡಿಯಂನಲ್ಲಿದ್ದ ಆರ್ಸಿಬಿ ಫ್ಯಾನ್ಸ್ ಎಬಿಡಿ ಹೆಸರನ್ನು ಕೂಗುವ ಮೂಲಕ ವಿಶೇಷ ಗೌರವವನ್ನು ಸಲ್ಲಿಸಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಆರ್ಸಿಬಿ ಅಭಿಮಾನಿಗಳ ಹರ್ಷೋದ್ಗಾರ:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 11 ವರ್ಷಗಳ ಕಾಲ ಆಡಿದ್ದ ಎಬಿ ಡಿವಿಲಿಯರ್ಸ್ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಈ ವೇಳೆ 157 ಪಂದ್ಯಗಳನ್ನಾಡಿರುವ ಅವರು ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು.
ಅಷ್ಟೇ ಅಲ್ಲದೆ ಆರ್ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಹೊಂದಿದ್ದಾರೆ. ಹಾಗೆಯೇ ಆರ್ಸಿಬಿ ಪರ ವಿರಾಟ್ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ.
ಇನ್ನು ಐಪಿಎಲ್ ವೃತ್ತಿಜೀವನದಲ್ಲಿ ಒಟ್ಟು 184 ಪಂದ್ಯಗಳನ್ನಾಡಿರುವ ಎಬಿ ಡಿವಿಲಿಯರ್ಸ್ ಒಟ್ಟು 5162 ರನ್ ಕಲೆಹಾಕಿದ್ದಾರೆ. ಈ ವೇಳೆ 3 ಭರ್ಜರಿ ಶತಕಗಳು, 40 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಆರ್ಸಿಬಿ ಪರ ಅತೀ ಹೆಚ್ಚು ಪಂದ್ಯವಾಡಿದ ಹಾಗೂ ಅತೀ ಹೆಚ್ಚು ಕಾಲ ಆಡಿದ ವಿದೇಶಿ ಆಟಗಾರ ಎಂಬ ದಾಖಲೆಯನ್ನು ಡಿವಿಲಿಯರ್ಸ್ ನಿರ್ಮಿಸಿದ್ದಾರೆ.
ಇದನ್ನೂ ಓದಿ: IPL 2025: 8 ಆಟಗಾರರು ಎಂಟ್ರಿ: RCB ಅಭಿಮಾನಿಗಳಿಗೆ ಗುಡ್ ನ್ಯೂಸ್
ಹೀಗೆ 11 ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ ಎಬಿ ಡಿವಿಲಿಯರ್ಸ್ ಅವರನ್ನು ವಿಶೇಷ ಕಾರ್ಯಕ್ರಮದ ವೇಳೆ ಆರ್ಸಿಬಿ ಅಭಿಮಾನಿಗಳು ಸ್ಮರಿಸುತ್ತಿರುವುದೇ ವಿಶೇಷ.