AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಕಾಲಿಕ ಐಪಿಎಲ್ ಇಲೆವೆನ್: ಪ್ರಶಸ್ತಿ ಗೆಲ್ಲದ ಕೊಹ್ಲಿಯನ್ನು ಕೈಬಿಟ್ಟ ಗಿಲ್​ಕ್ರಿಸ್ಟ್​

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್-18 ಇಂದಿನಿಂದ ಪುನರಾರಂಭಗೊಳ್ಳಲಿದೆ. ಶನಿವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೂ ಮುನ್ನ ಐಪಿಎಲ್​ನ ಮಾಜಿ ಆಟಗಾರ ಆ್ಯಡಂ ಗಿಲ್​ಕ್ರಿಸ್ಟ್​ ಸಾರ್ವಕಾಲಿಕ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ್ದಾರೆ.

ಸಾರ್ವಕಾಲಿಕ ಐಪಿಎಲ್ ಇಲೆವೆನ್: ಪ್ರಶಸ್ತಿ ಗೆಲ್ಲದ ಕೊಹ್ಲಿಯನ್ನು ಕೈಬಿಟ್ಟ ಗಿಲ್​ಕ್ರಿಸ್ಟ್​
Adam Gilchrist
ಝಾಹಿರ್ ಯೂಸುಫ್
|

Updated on:May 17, 2025 | 9:54 AM

Share

ಡೆಕ್ಕನ್ ಚಾರ್ಜರ್ಸ್ ತಂಡದ ಮಾಜಿ ನಾಯಕ, ಆಸ್ಟ್ರೇಲಿಯನ್ ಕ್ರಿಕೆಟಿಗ ಆ್ಯಡಂ ಗಿಲ್​ಕ್ರಿಸ್ಟ್​ ಐಪಿಎಲ್​ನ ಸಾರ್ವಕಾಲಿಕ ಚಾಂಪಿಯನ್ ಇಲೆವೆನ್ ಹೆಸರಿಸಿದ್ದಾರೆ. ಈ ಇಲೆವೆನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕಾಣಿಸಿಕೊಂಡಿಲ್ಲ. ಇದಕ್ಕೆ ಮುಖ್ಯ ಕಾರಣ ಕಿಂಗ್ ಕೊಹ್ಲಿ ಈವರೆಗೆ ಐಪಿಎಲ್ ಟ್ರೋಫಿ ಗೆಲ್ಲದಿರುವುದು.

ಅಂದರೆ ಐಪಿಎಲ್ ಟ್ರೋಫಿ ಗೆದ್ದಿರುವ 11 ಆಟಗಾರರನ್ನು ಒಳಗೊಂಡಂತಹ ಚಾಂಪಿಯನ್ಸ್ ಇಲೆವೆನ್​ ಅನ್ನು ಆ್ಯಡಂ ಗಿಲ್​ಕ್ರಿಸ್ಟ್ ಹೆಸರಿಸಿದ್ದಾರೆ. ಈ ತಂಡದ ನಾಯಕನಾಗಿ 5 ಬಾರಿ ಟ್ರೋಫಿ ಎತ್ತಿ ಹಿಡಿದ ಮಹೇಂದ್ರ ಸಿಂಗ್ ಧೋನಿಯನ್ನು ಆಯ್ಕೆ ಮಾಡಿದ್ದಾರೆ.

ಈ ತಂಡದ ಆರಂಭಿಕ ಜೋಡಿಯಾಗಿ ಆ್ಯಡಂ ಗಿಲ್​ಕ್ರಿಸ್ಟ್ ಆಯ್ಕೆ ಮಾಡಿದ್ದು ಡೇವಿಡ್ ವಾರ್ನರ್ ಹಾಗೂ ರೋಹಿತ್ ಶರ್ಮಾ ಅವರನ್ನು. ಇನ್ನು ಮೂರನೇ ಕ್ರಮಾಂಕದಲ್ಲಿ ಸುರೇಶ್ ರೈನಾ ಅವರನ್ನು ಹೆಸರಿಸಿದ್ದಾರೆ.

ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ಐದನೇ ಕ್ರಮಾಂಕದಲ್ಲಿ ಕೀರನ್ ಪೊಲಾರ್ಡ್ ಇದ್ದಾರೆ. ಇನ್ನು ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿರುವುದು ಮಹೇಂದ್ರ ಸಿಂಗ್ ಧೋನಿ.

ಹಾಗೆಯೇ ಆಲ್​ರೌಂಡರ್​ಗಳಾಗಿ ಸುನಿಲ್ ನರೈನ್ ಹಾಗೂ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿದ್ದಾರೆ. ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಲಸಿತ್ ಮಾಲಿಂಗ ಹಾಗೂ ಭುವನೇಶ್ವರ್ ಕುಮಾರ್ ಅವರನ್ನು ಹೆಸರಿಸಿದ್ದಾರೆ.

ಇದನ್ನೂ ಓದಿ: IPL 2025: RCB ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ CWI

ಈ ಎಲ್ಲಾ ಆಟಗಾರರು ಐಪಿಎಲ್​ನಲ್ಲಿ ಚಾಂಪಿಯನ್ಸ್ ತಂಡದ ಭಾಗವಾಗಿದ್ದಾರೆ. ಹೀಗಾಗಿಯೇ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್​​ಗೆ ಚಾಂಪಿಯನ್ಸ್ ಇಲೆವೆನ್​ನಲ್ಲಿ ಆ್ಯಡಂ ಗಿಲ್​ಕ್ರಿಸ್ಟ್ ಸ್ಥಾನ ನೀಡಿಲ್ಲ. ಅದರಂತೆ ಗಿಲ್ಲಿಯ ಸಾರ್ವಕಾಲಿಕ ಚಾಂಪಿಯನ್ಸ್​ ಇಲೆವೆನ್ ಈ ಕೆಳಗಿನಂತಿದೆ…

  • ಮಹೇಂದ್ರ ಸಿಂಗ್ ಧೋನಿ (ಚೆನ್ನೈ ಸೂಪರ್ ಕಿಂಗ್ಸ್)
  • ಡೇವಿಡ್ ವಾರ್ನರ್ (ಸನ್​ರೈಸರ್ಸ್ ಹೈದರಾಬಾದ್)
  • ರೋಹಿತ್ ಶರ್ಮಾ (ಡೆಕ್ಕನ್ ಚಾರ್ಜರ್ಸ್​, ಮುಂಬೈ ಇಂಡಿಯನ್ಸ್)
  • ಸುರೇಶ್ ರೈನಾ (ಚೆನ್ನೈ ಸೂಪರ್ ಕಿಂಗ್ಸ್)
  • ಸೂರ್ಯಕುಮಾರ್ ಯಾದವ್ (ಕೊಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್)
  • ಕೀರನ್ ಪೊಲಾರ್ಡ್ (ಮುಂಬೈ ಇಂಡಿಯನ್ಸ್)
  • ಸುನಿಲ್ ನರೈನ್ (ಕೊಲ್ಕತ್ತಾ ನೈಟ್ ರೈಡರ್ಸ್​)
  • ರವೀಂದ್ರ ಜಡೇಜಾ (ಚೆನ್ನೈ ಸೂಪರ್ ಕಿಂಗ್ಸ್​)
  • ಜಸ್​ಪ್ರೀತ್ ಬುಮ್ರಾ (ಮುಂಬೈ ಇಂಡಿಯನ್ಸ್)
  • ಲಸಿತ್ ಮಾಲಿಂಗ (ಮುಂಬೈ ಇಂಡಿಯನ್ಸ್)
  • ಭುವನೇಶ್ವರ್ ಕುಮಾರ್ (ಸನ್​ರೈಸರ್ಸ್ ಹೈದರಾಬಾದ್)

Published On - 9:54 am, Sat, 17 May 25

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್