AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೋಂಟ್ ಕೇರ್… ಹಾರ್ದಿಕ್ ಪಾಂಡ್ಯ ವಿರುದ್ಧ ಕೋಪಗೊಂಡ ಆಕಾಶ್ ಅಂಬಾನಿ

IPL 2025 LSG vs MI: ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 16ನೇ​ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು 203 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು 191 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ 12 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಡೋಂಟ್ ಕೇರ್... ಹಾರ್ದಿಕ್ ಪಾಂಡ್ಯ ವಿರುದ್ಧ ಕೋಪಗೊಂಡ ಆಕಾಶ್ ಅಂಬಾನಿ
Hardik Akash
Follow us
ಝಾಹಿರ್ ಯೂಸುಫ್
|

Updated on: Apr 05, 2025 | 8:33 AM

IPL 2025: ಕ್ರಿಕೆಟ್​ ಅಂಗಳದ ಡೋಂಟ್ ಕೇರ್ ಆಟಗಾರ ಯಾರೆಂದು ಕೇಳಿದರೆ ಥಟ್ಟನೆ ಬರುವ ಉತ್ತರ ಹಾರ್ದಿಕ್ ಪಾಂಡ್ಯ (Hardik Pandya). ಯಾರು ಏನೇ ಹೇಳಲಿ, ಯಾವುದೇ ಯೋಜನೆ ಇರಲಿ. ಹಾರ್ದಿಕ್ ಪಾಂಡ್ಯ ಆಡುವುದು ತನ್ನಿಷ್ಟದಂತೆ. ಇಂತಹದೊಂದು ಅಟಿಟ್ಯೂಡ್​ ಮೂಲಕವೇ ಪಾಂಡ್ಯ ಹಲವು ಬಾರಿ ಪಂದ್ಯ ಗೆಲ್ಲಿಸಿಕೊಟ್ಟಿದ್ದಾರೆ. ಆದರೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ವೇಳೆ ಪಾಂಡ್ಯರ ಇಂತಹ ನಿರ್ಧಾರಗಳೇ ತಂಡದ ಪಾಲಿಗೆ ಮುಳುವಾಯಿತು ಎಂದರೆ ತಪ್ಪಾಗಲಾರದು.

ಏಕೆಂದರೆ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 203 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 18 ಓವರ್​ಗಳ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 175 ರನ್ ಗಳಿಸಿತು.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಕೊನೆಯ 12 ಎಸೆತಗಳಲ್ಲಿ ಮುಂಬೈ ಇಂಡಿಯನ್ಸ್​ಗೆ 29 ರನ್​ಗಳ ಅವಶ್ಯಕತೆಯಿತ್ತು. ಮೊದಲ ಎಸೆತದಲ್ಲಿ ಪಾಂಡ್ಯ 1 ರನ್ ಕಲೆಹಾಕಿದರು. ಇನ್ನು ಎರಡನೇ ಎಸೆತದಲ್ಲಿ ತಿಲಕ್ ವರ್ಮಾ 1 ರನ್ ಓಡಿದರು. ಮೂರನೇ ಮತ್ತು ನಾಲ್ಕನೇ ಎಸೆತಗಳಲ್ಲಿ ಒಂದೊಂದು ರನ್ ಮೂಡಿಬಂತು. 5ನೇ ಎಸೆತದಲ್ಲಿ ತಿಲಕ್ ವರ್ಮಾ ಅವರನ್ನು ಹಾರ್ದಿಕ್ ಪಾಂಡ್ಯ ರಿಟೈರ್ಡ್​ ಹರ್ಟ್​ ಎಂದು ವಾಪಸ್ ಕಳುಹಿಸಿದರು.

ಬ್ಯಾಟಿಂಗ್ ಮಾಡಲು ಯಾವುದೇ ಸಮಸ್ಯೆ ಇಲ್ಲದಿದ್ದರೂ ತಿಲಕ್ ವರ್ಮಾ ಅವರನ್ನು ವಾಪಸ್ ಕಳಿಸಿರುವುದನ್ನು ನೋಡಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮಾಲೀಕರಾದ ಆಕಾಶ್ ಅಂಬಾನಿ ಕೋಪಗೊಂಡರು. ಅಲ್ಲದೆ ಡಗೌಟ್ ಬಳಿ ಕೂತಿದ್ದ ಅವರ ಕೈ ಸನ್ನೆಗಳೊಂದಿಗೆ ಪಾಂಡ್ಯ ನಡೆಗೆ ಆಕ್ರೋಶವನ್ನು ಹೊರಹಾಕಿದ್ದಾರೆ.

ಹಾರ್ದಿಕ್ ಪಾಂಡ್ಯ ನಡೆಗೆ ಆಕಾಶ್ ಅಂಬಾನಿ ರಿಯಾಕ್ಷನ್:

ಇಂಟ್ರೆಸ್ಟಿಂಗ್ ವಿಷಯ ಎಂದರೆ ತಿಲಕ್ ವರ್ಮಾ ಅವರನ್ನು ಕಳುಹಿಸಿ ಮಿಚೆಲ್ ಸ್ಯಾಂಟ್ನರ್ ಅವರನ್ನು ಕಣಕ್ಕಿಳಿಸಿದರೂ, ಹಾರ್ದಿಕ್ ಪಾಂಡ್ಯ ಅವರಿಗೂ ಸ್ಟ್ರೈಕ್ ನೀಡಲಿಲ್ಲ. ಕೊನೆಯ ಓವರ್​ನ ಮೂರನೇ ಎಸೆತದಲ್ಲಿ ರನ್ ಓಡುವ ಅವಕಾಶವಿದ್ದರೂ ಪಾಂಡ್ಯ ನಿರಾಕರಿಸಿದರು. ನಾಲ್ಕನೇ ಎಸೆತದಲ್ಲೂ ಯಾವುದೇ ರನ್ ಕಲೆಹಾಕಲಿಲ್ಲ.

ಇನ್ನು ಐದನೇ ಎಸೆತದಲ್ಲಿ ಸಿಂಗಲ್ ತೆಗೆದರು. ಅಷ್ಟರಲ್ಲಾಗಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಗೆಲುವು ಖಚಿತವಾಗಿತ್ತು. ಅಂತಿಮವಾಗಿ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 191 ರನ್​ಗಳಿಸಿ 12 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಗೆ ಗಾಯ: ಬಿಗ್ ಅಪ್​ಡೇಟ್ ನೀಡಿದ RCB ಕೋಚ್

ಅಂದರೆ ಈ ಪಂದ್ಯದ ಕೊನೆಯ ಓವರ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಪಡೆದ ಗುರಿ ಕೇವಲ 29 ರನ್​ಗಳು ಮಾತ್ರ. ಇದಾಗ್ಯೂ ಹಾರ್ದಿಕ್ ಪಾಂಡ್ಯ ಅವರ ಡೋಂಟ್ ಕೇರ್ ನಡೆಯಿಂದಾಗಿ, ಮುಂಬೈ ಇಂಡಿಯನ್ಸ್ ತಂಡವು ಪಂದ್ಯವನ್ನು ಕೈಚೆಲ್ಲಿಕೊಳ್ಳಬೇಕಾಯಿತು.

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ