IPL 2025: ಯಾಕೆ ಬಿಡ್ತಿದ್ದಾರೆ? ರಾಹುಲ್​ ದ್ರಾವಿಡ್​ನ ಹೀಯಾಳಿಸಿದ ಅಂಬಾಟಿ ರಾಯುಡು

|

Updated on: Apr 02, 2025 | 9:55 AM

IPL 2025: ಐಪಿಎಲ್​ನ 11ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 182 ರನ್ ಕಲೆಹಾಕಿದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡ 176 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು 6 ರನ್​ಗಳ ಜಯ ಸಾಧಿಸಿದೆ.

IPL 2025: ಯಾಕೆ ಬಿಡ್ತಿದ್ದಾರೆ? ರಾಹುಲ್​ ದ್ರಾವಿಡ್​ನ ಹೀಯಾಳಿಸಿದ ಅಂಬಾಟಿ ರಾಯುಡು
Dravid - Rayudu
Follow us on

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಆರಂಭದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಸಖತ್ ಸುದ್ದಿಯಲ್ಲಿದ್ದಾರೆ. ಅದು ಸಹ ತನ್ನ ವಿಭಿನ್ನ ಹೇಳಿಕೆಗಳೊಂದಿಗೆ… ಇಂತಹ ಹೇಳಿಕೆಗಳಿಂದಲೇ ರಾಯುಡು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದೀಗ ಲೆಜೆಂಡ್ ರಾಹುಲ್ ದ್ರಾವಿಡ್ ಅಭಿಮಾನಿಗಳು ಕೂಡ ಅಂಬಾಟಿ ರಾಯುಡು ವಿರುದ್ಧ ತಿರುಗಿಬಿದ್ದಿದ್ದಾರೆ.

ಗುವಾಹಟಿಯಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್ ರಾಹುಲ್ ದ್ರಾವಿಡ್ ಪಿಚ್ ಬಳಿ ಕಾಣಿಸಿಕೊಂಡಿದ್ದರು.

ಕಾಲಿಗೆ ಗಾಯ ಮಾಡಿಕೊಂಡಿರುವ ದ್ರಾವಿಡ್ ವೀಲ್​ಚೇರ್​ನಲ್ಲಿ ಕೂತು ರಾಜಸ್ಥಾನ್ ರಾಯಲ್ಸ್ ಪರ ಕಾರ್ಯ ನಿರ್ವಹಿಸುತ್ತಿದ್ದಾರೆ. ನೋವಿನ ನಡುವೆ ತನ್ನ ಬದ್ಧತೆ ಪ್ರದರ್ಶಿಸಿರುವ ದ್ರಾವಿಡ್ ಅವರ ಕಾರ್ಯಕ್ಕೆ ಕ್ರಿಕೆಟ್ ಪ್ರೇಮಿಗಳಿಂದ ಭಾರೀ ಮೆಚ್ಚುಗೆಗಳು ಸಹ ವ್ಯಕ್ತವಾಗಿದ್ದವು. ಆದರೆ ಸಿಎಸ್​ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ರಾಹುಲ್ ದ್ರಾವಿಡ್ ವೀಲ್​ಚೇರ್​ನಲ್ಲಿ ಬಂದು ಪಿಚ್ ಪರಿಶೀಲಿಸಿರುವುದನ್ನು ಅಂಬಾಟಿ ರಾಯುಡು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್​ಗೆ ವೀಲ್​ಚೇರ್​ನಲ್ಲಿ ಪಿಚ್​ ಬಳಿ ಹೋಗಲು ಯಾರು ಅನುಮತಿ ನೀಡಿದ್ದಾರೆ. ಇದಕ್ಕೆ ಅವಕಾಶವಿದೆಯೇ ಎಂದು ಅಂಬಾಟಿ ರಾಯುಡು ಪ್ರಶ್ನೆಗಳೆನ್ನೆತ್ತಿದ್ದಾರೆ.

ಚಾನೆಲ್​ ಚರ್ಚೆಯೊಂದರಲ್ಲಿ ಕಾಣಿಸಿಕೊಂಡ ರಾಯುಡು, ರಾಹುಲ್ ದ್ರಾವಿಡ್​ನ ವೀಲ್​ಚೇರ್​ನಲ್ಲಿ ಪಿಚ್​ ಬಳಿಗೆ ಯಾಕೆ ಬಿಡ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ಇದನ್ನೆಲ್ಲಾ ನೋಡಿದರೆ ನಿಜಕ್ಕೂ ನಗು ಬರುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ರಾಯುಡು ಅವರ ಈ ಹೇಳಿಕೆಗೆ ಇದೀಗ ರಾಹುಲ್ ದ್ರಾವಿಡ್ ಅಭಿಮಾನಿಗಳು ಆಕ್ರೋಶಗಳನ್ನು ಹೊರಹಾಕುತ್ತಿದ್ದಾರೆ.

ಇದಕ್ಕೂ ಮುನ್ನ ಅಂಬಾಟಿ ರಾಯುಡು ಆರ್​ಸಿಬಿ ತಂಡವನ್ನು ಗೇಲಿ ಮಾಡಿದ್ದರು. ರಾಯಲ್ ಚಾಲೆಂಜರ್ಸ್​ ಬೆಂಗಳೂರುನಂತಹ ತಂಡ ಇರಬೇಕು. ಏಕೆಂದರೆ ನಿರೀಕ್ಷೆಗಳನ್ನು ಹೆಚ್ಚಿಸಿ ಅದನ್ನು ಪೂರೈಸಲು ವಿಫಲವಾಗುವ ತಂಡ ಇದ್ದರೇನೇ ಮನರಂಜನೆ ಸಿಗೋದು. ಹೀಗಾಗಿ ಆರ್​ಸಿಬಿಯಂತಹ ತಂಡ ಐಪಿಎಲ್​ನಲ್ಲಿ ಇರಬೇಕೆಂದು ನಾನು ಬಯಸುತ್ತೇನೆ.

ಅಲ್ಲದೆ ಆರ್‌ಸಿಬಿ ತಂಡವು ಗೆಲ್ಲಲು ಹೆಣಗಾಡುವುದನ್ನು ನೋಡಿ ನಾನು ಸದಾ ಆನಂದಿಸುತ್ತೇನೆ. ಇದಾಗ್ಯೂ ಅವರು ಟ್ರೋಫಿ ಗೆಲ್ಲಲಿ ಎಂದು ಬಯಸುತ್ತೇನೆ. ಆದರೆ ಈ ಬಾರಿ ಅವರು ಕಪ್ ಗೆಲ್ಲಬಾರದು. ಮುಂದೊಂದು ದಿನ ಯಾವತ್ತಾದರು ಗೆಲ್ಲಲಿ. ಈ ಸಲ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟ್ರೋಫಿ ಎತ್ತಿ ಹಿಡಿಯಬೇಕು ಎಂದು ಅಂಬಾಟಿ ರಾಯುಡು ಹೇಳಿದ್ದರು.

ಇದನ್ನೂ ಓದಿ: IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್​ಗೆ ಸಂಜೀವ್ ಗೊಯೆಂಕಾ ಖಡಕ್ ಸೂಚನೆ

ಈ ಹೇಳಿಕೆ ವಿರುದ್ಧ ಆರ್​ಸಿಬಿ ಅಭಿಮಾನಿಗಳು ತಿರುಗಿಬಿದ್ದಿದ್ದರು. ಅಲ್ಲದೆ ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶಗಳನ್ನು ಹೊರಹಾಕಿದ್ದರು. ಇದೀಗ ರಾಹುಲ್ ದ್ರಾವಿಡ್ ಅವರ ಬದ್ಧತೆಯನ್ನು ಹೀಯಾಳಿಸಿ ರಾಯುಡು ದಿ ವಾಲ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.