IPL 2025: ಮುಂಬೈ ವಿರುದ್ಧ ಕಣಕ್ಕಿಳಿಯದ ಅಕ್ಷರ್ ಪಟೇಲ್; ಡು ಪ್ಲೆಸಿಸ್‌ಗೆ ನಾಯಕತ್ವ
IPL 2025: ಐಪಿಎಲ್ 2025 ರ 63ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಅನಾರೋಗ್ಯದ ಕಾರಣ ಹೊರಗುಳಿದಿದ್ದಾರೆ. ಅವರ ಬದಲಿಗೆ ಫಾಫ್ ಡು ಪ್ಲೆಸಿಸ್ ನಾಯಕತ್ವ ವಹಿಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಮಹತ್ವದ ಪಂದ್ಯದಲ್ಲಿ ಡೆಲ್ಲಿಯ ಗೆಲುವಿಗೆ ಡು ಪ್ಲೆಸಿಸ್ ಅವರ ಅನುಭವ ಮತ್ತು ಆಕ್ರಮಣಕಾರಿ ಬ್ಯಾಟಿಂಗ್ ಪ್ರಮುಖ ಪಾತ್ರ ವಹಿಸಲಿದೆ. ಪಂದ್ಯದ ಫಲಿತಾಂಶ ಪ್ಲೇಆಫ್ ಅರ್ಹತೆಯ ಮೇಲೆ ಪರಿಣಾಮ ಬೀರಲಿದೆ.

ಐಪಿಎಲ್ 2025 (IPL 2025) ರ 63 ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂದ್ಧ ಡೆಲ್ಲಿ ಕ್ಯಾಪಿಟಲ್ಸ್ (MI vs DC) ನಡುವೆ ನಡೆಯುತ್ತಿದೆ. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೆ ಅತ್ಯಂತ ಮಹತ್ವದಾಗಿದೆ. ಆದರೆ ಈ ಮಹತ್ವದ ಪಂದ್ಯದಲ್ಲೇ ಡೆಲ್ಲಿ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ನಾಯಕ ಅಕ್ಷರ್ ಪಟೇಲ್ (Axar Patel) ಈ ಪಂದ್ಯದಿಂದ ಹೊರಗುಳಿದ್ದಾರೆ. ಹೀಗಾಗಿ ಅವರ ಬದಲಿಗೆ ಫಾಫ್ ಡು ಪ್ಲೆಸಿಸ್ (Faf du Plessis) ತಂಡದ ನಾಯಕತ್ವವಹಿಸಿಕೊಂಡಿದ್ದಾರೆ. ಅಕ್ಷರ್ ಪಟೇಲ್ ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ, ಅವರಿಗೆ ಜ್ವರವಿದೆ. ಅವರು ಶೀಘ್ರದಲ್ಲೇ ಫಿಟ್ ಆಗುತ್ತಾರೆ ಎಂದು ಆಶಿಸುತ್ತೇನೆ. ಈ ಸೀಸನ್ನಲ್ಲಿ ಅಕ್ಷರ್ ಪಟೇಲ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ನಾವು ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಫಾಫ್ ಟಾಸ್ ಸಮಯದಲ್ಲಿ ಹೇಳಿದರು.
ಡು ಪ್ಲೆಸಿಸ್‌ಗೆ ನಾಯಕತ್ವ
ಡೆಲ್ಲಿ ತಂಡದ ಪಾಲಿಗೆ ಒಳ್ಳೆಯ ವಿಷಯವೆಂದರೆ ಡು ಪ್ಲೆಸಿಸ್ ನಾಯಕತ್ವದ ಉತ್ತಮ ಅನುಭವ ಹೊಂದಿದ್ದಾರೆ. ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿದ್ದ ಫಾಫ್ ಡು ಪ್ಲೆಸಿಸ್, ತಮ್ಮ ಅನುಭವದೊಂದಿಗೆ ದೆಹಲಿಗೆ ಹೊಸ ದಿಕ್ಕನ್ನು ನೀಡಬಲ್ಲರು. ಇತ್ತೀಚಿಗೆ ಗಾಯದಿಂದ ಚೇತರಿಸಿಕೊಂಡು ಫಿಟ್ ಆಗಿರುವ ಫಾಫ್ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಈ ಪಂದ್ಯದಲ್ಲಿ ಡೆಲ್ಲಿ ತಂಡಕ್ಕೆ ಡು ಪ್ಲೆಸಿಸ್ ಅವರ ಆಕ್ರಮಣಕಾರಿ ಬ್ಯಾಟಿಂಗ್ ಮತ್ತು ಕಾರ್ಯತಂತ್ರದ ಚಿಂತನೆ ಮುಖ್ಯವಾಗಲಿದೆ.
ಮಾಡು ಇಲ್ಲವೇ ಮಡಿ ಪಂದ್ಯ
ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯ ಡೆಲ್ಲಿ ತಂಡಕ್ಕೆ ಮಾಡು ಇಲ್ಲವೇ ಮಡಿ ಎಂಬಂತ್ತಾಗಿದೆ. ಕಳೆದ ಪಂದ್ಯದಲ್ಲಿ ಮುಂಬೈ ತಂಡವು ಡೆಲ್ಲಿ ತಂಡವನ್ನು 12 ರನ್‌ಗಳಿಂದ ಸೋಲಿಸಿತ್ತು, ಆ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ವೈಫಲ್ಯ ಮತ್ತು ಕಳಪೆ ಫೀಲ್ಡಿಂಗ್ ಸೋಲಿಗೆ ಕಾರಣವಾಗಿತ್ತು. ಡು ಪ್ಲೆಸಿಸ್ ನಾಯಕತ್ವದಲ್ಲಿ, ಡೆಲ್ಲಿ ಈ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಪ್ರಯತ್ನಿಸಲಿದೆ.
Rohit Sharma: ಐಪಿಎಲ್ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ರೋಹಿತ್ ಶರ್ಮಾ
ಉಭಯ ತಂಡಗಳು
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಫಾಫ್ ಡು ಪ್ಲೆಸಿಸ್ (ನಾಯಕ), ಅಭಿಷೇಕ್ ಪೊರೆಲ್, ಸಮೀರ್ ರಿಜ್ವಿ, ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಾಜ್ ನಿಗಮ್, ಮಾಧವ್ ತಿವಾರಿ, ಕುಲ್ದೀಪ್ ಯಾದವ್, ದುಷ್ಮಂತ ಚಮೀರಾ, ಮುಸ್ತಿಫಿಜುರ್ ರೆಹಮಾನ್, ಮುಖೇಶ್ ಕುಮಾರ್.
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರಿಯಾನ್ ರಿಕಲ್ಟನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.
Published On - 7:58 pm, Wed, 21 May 25
