
ಐಪಿಎಲ್ 2025 (IPL 2025) ರ 63 ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂದ್ಧ ಡೆಲ್ಲಿ ಕ್ಯಾಪಿಟಲ್ಸ್ (MI vs DC) ನಡುವೆ ನಡೆಯುತ್ತಿದೆ. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೆ ಅತ್ಯಂತ ಮಹತ್ವದಾಗಿದೆ. ಆದರೆ ಈ ಮಹತ್ವದ ಪಂದ್ಯದಲ್ಲೇ ಡೆಲ್ಲಿ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ನಾಯಕ ಅಕ್ಷರ್ ಪಟೇಲ್ (Axar Patel) ಈ ಪಂದ್ಯದಿಂದ ಹೊರಗುಳಿದ್ದಾರೆ. ಹೀಗಾಗಿ ಅವರ ಬದಲಿಗೆ ಫಾಫ್ ಡು ಪ್ಲೆಸಿಸ್ (Faf du Plessis) ತಂಡದ ನಾಯಕತ್ವವಹಿಸಿಕೊಂಡಿದ್ದಾರೆ. ಅಕ್ಷರ್ ಪಟೇಲ್ ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ, ಅವರಿಗೆ ಜ್ವರವಿದೆ. ಅವರು ಶೀಘ್ರದಲ್ಲೇ ಫಿಟ್ ಆಗುತ್ತಾರೆ ಎಂದು ಆಶಿಸುತ್ತೇನೆ. ಈ ಸೀಸನ್ನಲ್ಲಿ ಅಕ್ಷರ್ ಪಟೇಲ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ನಾವು ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಫಾಫ್ ಟಾಸ್ ಸಮಯದಲ್ಲಿ ಹೇಳಿದರು.
ಡೆಲ್ಲಿ ತಂಡದ ಪಾಲಿಗೆ ಒಳ್ಳೆಯ ವಿಷಯವೆಂದರೆ ಡು ಪ್ಲೆಸಿಸ್ ನಾಯಕತ್ವದ ಉತ್ತಮ ಅನುಭವ ಹೊಂದಿದ್ದಾರೆ. ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿದ್ದ ಫಾಫ್ ಡು ಪ್ಲೆಸಿಸ್, ತಮ್ಮ ಅನುಭವದೊಂದಿಗೆ ದೆಹಲಿಗೆ ಹೊಸ ದಿಕ್ಕನ್ನು ನೀಡಬಲ್ಲರು. ಇತ್ತೀಚಿಗೆ ಗಾಯದಿಂದ ಚೇತರಿಸಿಕೊಂಡು ಫಿಟ್ ಆಗಿರುವ ಫಾಫ್ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಈ ಪಂದ್ಯದಲ್ಲಿ ಡೆಲ್ಲಿ ತಂಡಕ್ಕೆ ಡು ಪ್ಲೆಸಿಸ್ ಅವರ ಆಕ್ರಮಣಕಾರಿ ಬ್ಯಾಟಿಂಗ್ ಮತ್ತು ಕಾರ್ಯತಂತ್ರದ ಚಿಂತನೆ ಮುಖ್ಯವಾಗಲಿದೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯ ಡೆಲ್ಲಿ ತಂಡಕ್ಕೆ ಮಾಡು ಇಲ್ಲವೇ ಮಡಿ ಎಂಬಂತ್ತಾಗಿದೆ. ಕಳೆದ ಪಂದ್ಯದಲ್ಲಿ ಮುಂಬೈ ತಂಡವು ಡೆಲ್ಲಿ ತಂಡವನ್ನು 12 ರನ್‌ಗಳಿಂದ ಸೋಲಿಸಿತ್ತು, ಆ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ವೈಫಲ್ಯ ಮತ್ತು ಕಳಪೆ ಫೀಲ್ಡಿಂಗ್ ಸೋಲಿಗೆ ಕಾರಣವಾಗಿತ್ತು. ಡು ಪ್ಲೆಸಿಸ್ ನಾಯಕತ್ವದಲ್ಲಿ, ಡೆಲ್ಲಿ ಈ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಪ್ರಯತ್ನಿಸಲಿದೆ.
Rohit Sharma: ಐಪಿಎಲ್ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ರೋಹಿತ್ ಶರ್ಮಾ
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಫಾಫ್ ಡು ಪ್ಲೆಸಿಸ್ (ನಾಯಕ), ಅಭಿಷೇಕ್ ಪೊರೆಲ್, ಸಮೀರ್ ರಿಜ್ವಿ, ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಾಜ್ ನಿಗಮ್, ಮಾಧವ್ ತಿವಾರಿ, ಕುಲ್ದೀಪ್ ಯಾದವ್, ದುಷ್ಮಂತ ಚಮೀರಾ, ಮುಸ್ತಿಫಿಜುರ್ ರೆಹಮಾನ್, ಮುಖೇಶ್ ಕುಮಾರ್.
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರಿಯಾನ್ ರಿಕಲ್ಟನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.
Published On - 7:58 pm, Wed, 21 May 25