
ಬರೋಬ್ಬರಿ 17 ವರ್ಷಗಳ ಬಳಿಕ ಮಿಲಿಯನ್ ಡಾಲರ್ ಟೂರ್ನಿಯನ್ನು ಗೆದ್ದುಬೀಗಿರುವ ಆರ್‌ಸಿಬಿ ತಂಡ, ಇದೀಗ ಟ್ರೋಫಿಯೊಂದಿಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಇಡೀ ತಂಡವನ್ನು ಸ್ವಾಗತಿಸಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆಚ್‌ಎಎಲ್ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ. ಆ ಬಳಿಕ ತಂಡದ ಆಟಗಾರರು ಎರಡು ಬಸ್ಗಳಲ್ಲಿ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ತಲುಪಲಿದ್ದಾರೆ. ಹೋಟೆಲ್ನಲ್ಲಿ ಸ್ವಲ್ಪ ಸಮಯ ವಿಶ್ರಾಂತಿ ಪಡೆಯಲ್ಲಿರುವ ಆಟಗಾರರು ಆ ನಂತರ ಟ್ರೋಫಿಯೊಂದಿಗೆ ವಿಧಾನ ಸೌಧ ತಲುಪಲಿದ್ದಾರೆ. ಅಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಬಳಿಕ ಇಡೀ ತಂಡ ಚಿನ್ನಸ್ವಾಮಿ ಕ್ರೀಡಾಂಗಣವನ್ನು ತಲುಪಲಿದ್ದಾರೆ. ಅಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಪ್ರೇಕ್ಷಕಕರಿಗೆ ಬರಪೂರ ಮನರಂಜನೆ ಸಿಗಲಿದೆ.
ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಹೊರತುಪಡಿಸಿ, ನಾಯಕ ರಜತ್ ಪಟಿದಾರ್ 26 ರನ್, ಲಿಯಾಮ್ ಲಿವಿಂಗ್‌ಸ್ಟೋನ್ 25 ರನ್ ಗಳಿಸಿದರು. ಜಿತೇಶ್ ಶರ್ಮಾ 24 ರನ್, ಮಯಾಂಕ್ ಅಗರ್ವಾಲ್ ಕೂಡ 24 ರನ್‌ಗಳ ಕಾಣಿಕೆ ನೀಡಿದರು. ಪಂಜಾಬ್ ಕಿಂಗ್ಸ್ ಪರ, ಅರ್ಶ್‌ದೀಪ್ ಸಿಂಗ್ ನಾಲ್ಕು ಓವರ್‌ಗಳಲ್ಲಿ 40 ರನ್‌ಗಳಿಗೆ ಮೂರು ವಿಕೆಟ್ ಪಡೆದರೆ, ಕೈಲ್ ಜೇಮಿಸನ್ ನಾಲ್ಕು ಓವರ್‌ಗಳಲ್ಲಿ 48 ರನ್‌ಗಳಿಗೆ ಮೂರು ವಿಕೆಟ್ ಪಡೆದರು.
ಇದಕ್ಕೆ ಉತ್ತರವಾಗಿ, ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ ಕೇವಲ 184 ರನ್ ಗಳಿಸಿತು. ಪಂಜಾಬ್ ಪರ ಕೊನೆಯಲ್ಲಿ ಏಕಾಂಗಿ ಹೋರಅಟ ನಡೆಸಿದ ಶಶಾಂಕ್ ಸಿಂಗ್ 61* ರನ್‌ಗಳ ಬಿರುಗಾಳಿಯ ಇನ್ನಿಂಗ್ಸ್ ಆಡಿದರಾದರೂ ತಮ್ಮ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಶಶಾಂಕ್ ಸಿಂಗ್ ಹೊರತುಪಡಿಸಿ, ಜೋಶ್ ಇಂಗ್ಲಿಸ್ 39 ರನ್, ಪ್ರಭ್ಸಿಮ್ರಾನ್ ಸಿಂಗ್ 26 ರನ್‌ಗಳ ಕೊಡುಗೆ ನೀಡಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:45 pm, Wed, 4 June 25